Wednesday, September 23, 2026
Wednesday, September 23, 2026

DVS College ಯುವತಿಯರು ಆರೋಗ್ಯ ಸಮಸ್ಯೆಗಳ ಬಗ್ಗೆ ವೈದ್ಯರಿಂದ ಸೂಕ್ತ ಮಾರ್ಗದರ್ಶನ ಪಡೆಯಬೇಕು- ಡಾ.ದಿನೇಶ್

Date:

DVS College ಯುವತಿಯರು ಆರೋಗ್ಯ ಕುರಿತು ಯಾವುದೇ ರೀತಿಯ ಸಮಸ್ಯೆಗಳಿದ್ದರೂ ವೈದ್ಯರಿಂದ ಸೂಕ್ತ ಮಾರ್ಗದರ್ಶನ ಪಡೆದುಕೊಳ್ಳಬೇಕು ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಕಾರ್ಯದರ್ಶಿ ಡಾ. ದಿನೇಶ್ ಹೇಳಿದರು.

ದೇಶಿಯ ವಿದ್ಯಾಶಾಲಾ‌ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವತಿಯಿಂದ ಸಿಂಗಾರ ಸಭಾಂಗಣದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಶಿವಮೊಗ್ಗ ಜಿಲ್ಲಾ ಶಾಖೆ , ಮಹಿಳಾ ಸಬಲೀಕರಣ ಘಟಕ ಸಹಯೋಗದಲ್ಲಿ ಆಯೋಜಿಸಿದ್ದ “ಆರೋಗ್ಯ ಮತ್ತು ನೈರ್ಮಲ್ಯ” ಕುರಿತು ವಿಶೇಷ ಉಪನ್ಯಾಸ ಮತ್ತು ಆಪ್ತ ಸಮಾಲೋಚನೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಯುವತಿಯರು ಪ್ರೌಢಾವಸ್ಥೆ ಸಂದರ್ಭದಲ್ಲಿ ದೇಹದಲ್ಲಿ ಅನೇಕ ಸಮಸ್ಯೆಗಳು ಎದುರಾಗುತ್ತವೆ. ಇಂತಹ ವೇಳೆಯಲ್ಲಿ ಆರೋಗ್ಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಕಾಲ ಕಾಲಕ್ಕೆ ಅನುಸರಿಸಬೇಕಾದ ವೈದ್ಯಕೀಯ ಕ್ರಮಗಳ ಬಗ್ಗೆ ತಿಳವಳಿಕೆ ಹೊಂದಬೇಕು ಎಂದು ಮಾಹಿತಿ ನೀಡಿದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಘಟಕವು ಪ್ರತಿ ತಿಂಗಳು ಕಾಲೇಜುಗಳಲ್ಲಿ ಆಪ್ತ ಸಮಾಲೋಚನಾ ಶಿಬಿರ ನಡೆಸಲು ಸಿದ್ದವಿದೆ. ಪ್ರೌಢಾವಸ್ಥೆಯಲ್ಲಿ ಎದುರಿಸಬೇಕಾದ ವೈಯುಕ್ತಿಕ ದೈಹಿಕ ಸಮಸ್ಯೆಗಳಿಗೂ ಆಪ್ತ ಸಮಾಲೋಚನೆಯಲ್ಲಿ ಪರಿಹಾರ ಒದಗಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಸುಬ್ಬಯ್ಯ ಮೆಡಿಕಲ್ ಕಾಲೇಜು ಸ್ತ್ರೀ ರೋಗ ತಜ್ಞೆ , ಆಪ್ತ ಸಮಾಲೋಚಕಿ ಡಾ. ಮಾಧುರ್ಯ ಜಯಚಂದ್ರ
ಮಾತನಾಡಿ, ಯುವತಿಯರು ಆರೋಗ್ಯ ಕಾಪಾಡಿಕೊಳ್ಳಲು ಉತ್ತಮ ಆಹಾರ ಸೇವನೆ ಹಾಗೂ ಒಳ್ಳೆಯ ಜೀವನಶೈಲಿ ರೂಢಿಸಿಕೊಳ್ಳಬೇಕು. ಫಾಸ್ಟ್ ಫುಡ್ ಆಹಾರ ಸೇವನೆಯಿಂದಲೂ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆದ್ದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಪದಾರ್ಥಗಳ ಸೇವನೆಯಿಂದ ದೂರ ಇರಬೇಕು ಎಂದು ಹೇಳಿದರು.

DVS College ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್ ಮಾತನಾಡಿ, ಕಾಲೇಜಿನ ವಿದ್ಯಾರ್ಥಿನಿಯರು ಆರೋಗ್ಯದ ಕುರಿತು ಯಾವುದೇ ಸಮಸ್ಯೆಗಳಿದ್ದಲ್ಲಿ ಆಪ್ತ ಸಮಾಲೋಚಕರ ಜತೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು. ವಿದ್ಯಾರ್ಥಿನಿಯರಿಗೆ ಆಯೋಜಿಸಿರುವ ಕಾರ್ಯಕ್ರಮದ ಸಂಪೂರ್ಣ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಸಲಹೆ‌ ನೀಡಿದರು.

ಮಹಿಳಾ ಸಬಲೀಕರಣ ಘಟಕ ಸಂಚಾಲಕಿ, ಕನ್ನಡ ವಿಭಾಗದ ಮುಖ್ಯಸ್ಥೆ ಪ್ರೊ.ಎಸ್.ಕೆ.ಸಾವಿತ್ರಿ , ಐಕ್ಯೂ ಎಸಿ ಘಟಕದ ಸಂಚಾಲಕ ಎನ್.ಕುಮಾರಸ್ವಾಮಿ , ಸಾಂಸ್ಕೃತಿಕ ವಿಭಾಗದ ಸಂಚಾಲಕಿ ಪ್ರೊ. ಕೇತನಾ ಆರ್ತಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...