Tuesday, November 26, 2024
Tuesday, November 26, 2024

Kambala ಕರಾವಳಿ ಕಂಬಳವನ್ನ ಬೆಂಗಳೂರಿಗೆ ಪರಿಚಯಿಸುತ್ತಿರುವುದು ಶ್ಲಾಘನೀಯ- ಸಿದ್ಧರಾಮಯ್ಯ

Date:

Kambala ಬೆಂಗಳೂರಿನಲ್ಲಿ ಆಯೋಜಿಸಿರುವ ಕಂಬಳ ಉತ್ಸವ ಹಾಗೂ ತುಳುನಾಡಿನ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪಾಲ್ಗೊಂಡಿದ್ದರು.

ನಂತರ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು.
ಕರ್ನಾಟಕದಲ್ಲಿ ತುಳು ಭಾಷೆಗೆ ಹೆಚ್ಚುವರಿ ಭಾಷೆಯ ಸ್ಥಾನಮಾನ ದೊರಕಬೇಕೆಂದು ಕೋರಿಕೆಯಿದ್ದು ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವರೊಂದಿಗೆ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದರು.

ಕಂಬಳ ಕರಾವಳಿ ಭಾಗದ ಜನಪ್ರಿಯ ಕ್ರೀಡೆ. ಮಂಗಳೂರು, ಉಡುಪಿ ಜಿಲ್ಲೆಗಳ ಜಾನಪದ ಕ್ರೀಡೆ. ಅಶೋಕ್ ರೈ ಅವರ ನೇತೃತ್ವದಲ್ಲಿ ಕರಾವಳಿ ಪ್ರದೇಶದ ಜಾನಪದ ಕ್ರೀಡೆಯನ್ನು ಬೆಂಗಳೂರು ನಗರಕ್ಕೆ ಪರಿಚಯಿಸುವುದು ನಿಜಕ್ಕೂ ಶ್ಲಾಘನೀಯ.
ಕಂಬಳ ನೋಡಲು ಇಷ್ಟು ಜನರು ಆಗಮಿಸುವ ನಿರೀಕ್ಷೆ ಇರಲಿಲ್ಲ. ಕಂಬಳ ಕರಾವಳಿ ಪ್ರದೇಶದ ಕ್ರೀಡೆಯಾದಾರೂ ಬೆಂಗಳೂರಿನಲ್ಲಿ ಲಕ್ಷಾಂತರ ಜನ ಕರಾವಳಿ ಪ್ರದೇಶದವರು ವಾಸಿಸುತ್ತಿದ್ದು ಅವರಿಗೆ ಮಾತ್ರವಲ್ಲದೇ ಬೆಂಗಳೂರಿನ ಜನ ಸೇರಿದಂತೆ ರಾಜ್ಯದ ಮೂಲೆ ಮೂಲೆಯಿಂದ ಬಂದು ನೋಡುವ, ಪ್ರೋತ್ಸಾಹಿಸುವ ಅವಕಾಶ ದೊರೆತಿದೆ ಎಂದು ಹೇಳಿದರು.

ಹಿಂದೊಮ್ಮೆ ಉಡುಪಿ ಹಾಗೂ ಬಂಟ್ವಾಳ ಭಾಗದಲ್ಲಿ ಕಂಬಳ ಉದ್ಘಾಟಿಸಿದ್ದೆ. ಪುರಾತನ ಕಾಲದಿಂದ ನಡೆದುಕೊಂಡು ಬಂದಿರುವ ಜನರ ಕಲೆಯನ್ನು ಬಹಳ ಜನ ಮೈಗೂಡಿಸಿಕೊಂಡಿದ್ದಾರೆ. ಬಹಳ ಜನ ಇದಕ್ಕೆ ಪ್ರೋತ್ಸಾಹ ನೀಡುತ್ತಾರೆ. ತಮಿಳುನಾಡಿನಲ್ಲಿ ಜಲ್ಲಿಕಟ್ಟು ಕ್ರೀಡೆ ಇದ್ದಂತೆ ಕಂಬಳದಲ್ಲಿ ಕೋಣಗಳಿಗೆ ನೊಗ ಹಾಕಿ ಓಡಿಸುತ್ತಾರೆ.
ಕೋಣಗಳನ್ನು ಸಾಕುವುದು ಬಹಳ ಕಷ್ಟದ ಕೆಲಸ. ಕೋಣ ಸಾಕಲು ಒಂದು ವರ್ಷಕ್ಕೆ 15 ಲಕ್ಷದವರೆಗೆ ವೆಚ್ಚವಾಗುತ್ತದೆ. ತಿಂಗಳಿಗೆ 1 ಲಕ್ಷಕ್ಕಿಂತ ಹೆಚ್ಚಾಗುತ್ತದೆ. ನವೆಂಬರ್, ಡಿಸೆಂಬರ್, ಫೆಬ್ರವರಿ ಮಾರ್ಚ್ ತಿಂಗಳುಗಳಲ್ಲಿ ವ್ಯವಸಾಯ ಇಲ್ಲದಿದ್ದಾಗ ಜನ ಜಾನುವಾರುಗಳ ಉತ್ಸವ ಮಾಡಿ ಮನರಂಜನೆ ಪಡೆಯುತ್ತಿದ್ದರು. ಗದ್ದೆಗಳಲ್ಲಿ ಮಣ್ಣನ್ನು ಹದಗೊಳಿಸಿ ಕಂಬಳ ಆಡಿಸುತ್ತಿದ್ದರು. ಕೋಣಗಳನ್ನು ಓಡುವವರಿಗೆ ಅಭ್ಯಾಸವಿರಬೇಕು. ಕ್ರೀಡಾಪಟುವಾಗಿದ್ದರೆ ಮಾತ್ರ ಕೋಣಗಳ ಜೊತೆಗೆ ಓಡಲು ಸಾಧ್ಯ ಎಂದು ತಿಳಿಸಿದರು.

Kambala ಜನಪ್ರಿಯ ಕ್ರೀಡೆ ಕಂಬಳವನ್ನು ಬೆಂಗಳೂರಿನಲ್ಲಿ ಪ್ರತಿ ವರ್ಷ ಮುಂದುವರೆಸುವಂತಾಗಬೇಕು. ನವೆಂಬರ್, ಡಿಸೆಂಬರ್ ಮಾಹೆಯಲ್ಲಿ ಆಯೋಜಿಸಿದರೆ ಜನ ನೋಡುತ್ತಾರೆ. ಇದೊಂದು ಮನರಂಜನೆಯ ಕ್ರೀಡೆಯಾಗುತ್ತದೆ. ಜಲ್ಲಿಕಟ್ಟು, ಕಂಬಳ ನಡೆಸಬಾರದು ಎಂದು ನ್ಯಾಯಾಲಯ ತೀರ್ಪು ನೀಡಿದೆ. ಇದಕ್ಕೆ ಸುಗ್ರೀವಾಜ್ಞೆ ಹೊರಡಿಸಿ ಜನಪ್ರಿಯ ಕ್ರೀಡೆ ಉಳಿಸುವ ಕೆಲಸವಾಗಿದೆ. ಇದನ್ನು ಬೆಳಸಬೇಕು.
ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಸಮುದಾಯ ಭವನಕ್ಕಾಗಿ ನಿವೇಶನ ಕೋರಿದ್ದು, ಇದಕ್ಕೂ ನಾವು ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Constitution Day ಸಂವಿಧಾನದ ಸಂದೇಶವೇ ನಮ್ಮ ಸರ್ಕಾರದ ಸಿದ್ಧಾಂತ- ಸಿದ್ಧರಾಮಯ್ಯ

Constitution Day ಸಂವಿಧಾನ ದಿನಾಚರಣೆಯ ವಿಶೇಷವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು...

Shivamogga-Bhadravathi Urban Development Authority ಊರುಗಡೂರು ನಿವೇಶನ ಹಂಚಿಕೆ. ಭರ್ತಿ ಮಾಡಿದ ಅರ್ಜಿ ಸಲ್ಲಿಸಲು ಡಿ.5 ಅಂತಿಮ ದಿನಾಂಕ

Shivamogga-Bhadravathi Urban Development Authority ಶಿವಮೊಗ್ಗ -ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ...

Shivamogga City Corporation ಒಂದು ತಿಂಗಳಲ್ಲಿ ಏಕರೀತಿಯ ಕರವಸೂಲಾತಿ ಹೊಸ ಕಾಯ್ದೆ ಜಾರಿ- ಸಚಿವ ರಹೀಂ ಖಾನ್

Shivamogga City Corporation ಸ್ಥಳೀಯ ಸಂಸ್ಥೆಗಳಿಗೆ ನಿಯಮಾನುಸಾರವಾಗಿ ಸಾರ್ವಜನಿಕರಿಂದ ಪಾವತಿಯಾಗಬೇಕಾದ ಕರವಸೂಲಿ...