Sunday, December 7, 2025
Sunday, December 7, 2025

Digital marketing system ವ್ಯಾಪಾರ ವಹಿವಾಟನ್ನ ಆನ್ ಲೈನ್ ಮೂಲಕ ಹೆಚ್ಚಿಸಿಕೊಳ್ಳಲು ಸಾಧ್ಯವಿದೆ- ಕೆ.ರತ್ನಪ್ರಭಾ

Date:

Digital marketing system ಡಿಜಿಟಲ್ ಮಾರುಕಟ್ಟೆಯು ಆಧುನಿಕ ಯುಗದಲ್ಲಿ ಅತ್ಯಂತ ಮಹತ್ತರ ಪಾತ್ರ ವಹಿಸುತ್ತಿದ್ದು, ವ್ಯಾಪಾರ ವಹಿವಾಟನ್ನು ಆನ್‌ಲೈನ್ ಮುಖಾಂತರ ಹೆಚ್ಚು ವೃದ್ಧಿಗೊಳಿಸಲು ಸಾಧ್ಯವಿದೆ ಎಂದು ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅಭಿಪ್ರಾಯಪಟ್ಟರು.

ಶಿವಮೊಗ್ಗ ನಗರದ ಮಥುರಾ ಪಾರಾಡೈಸ್‌ನಲ್ಲಿ ಸ್ವೇದ ಮಹಿಳಾ ಉದ್ಯಮಿಗಳ ಸಂಘದ ವತಿಯಿಂದ ಯುನೈಟೆಡ್ ನೇಷನ್ಸ್ ಎಕನಾಮಿಕ್ ಅಂಡ್ ಸೋಶಿಯಲ್ ಕಮಿಷನ್ ಫಾರ್ ಏಷ್ಯಾ ಅಂಡ್ ದ ಪೆಸಿಫಿಕ್ ಹಾಗೂ ಉಬುಂಟು ಮಹಿಳಾ ಉದ್ಯಮಿಗಳ ಒಕ್ಕೂಟದ ಸಹಯೋಗದಲ್ಲಿ ಆಯೋಜಿಸಿದ್ದ ಡಿಜಿಟಲ್ ಮಾರ್ಕೆಟಿಂಗ್ ಕಾರ್ಯಾಗಾರದಲ್ಲಿ ಮಾತನಾಡಿದರು.

ಕರೋನಾ ನಂತರದಲ್ಲಿ ಡಿಜಿಟಲ್ ಮಾರುಕಟ್ಟೆ ವ್ಯವಸ್ಥೆ ಅತ್ಯಂತ ಅನಿವಾರ್ಯ ಎನಿಸಿದ್ದು, ಊಟ, ಬಟ್ಟೆ, ಔಷಧಿ, ವೈವಿಧ್ಯ ಉತ್ಪನ್ನಗಳು ಸೇರಿದಂತೆ ಎಲ್ಲವೂ ಆನ್‌ಲೈನ್ ಮುಖಾಂತರವೇ ಖರೀದಿ ಮಾಡಲು ಜನರು ಮುಂದಾಗಿದ್ದಾರೆ. ಆದ್ದರಿಂದ ಡಿಜಿಟಲ್ ಮಾರುಕಟ್ಟೆಯು ತುಂಬಾ ಮುಖ್ಯ ಎಂದು ತಿಳಿಸಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಮಹಿಳಾ ಉದ್ಯಮಿಗಳಿಗೆ ಜಿಲ್ಲಾಧಿಕಾರಿ ಸೇರಿದಂತೆ ಸ್ಥಳೀಯ ಆಡಳಿತವು ಉತ್ತಮ ಸಹಕಾರ ನೀಡುತ್ತಿರುವುದು ಶ್ಲಾಘನೀಯ. ಮಹಿಳಾ ಉದ್ಯಮಿಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವುದು ಅತ್ಯಂತ ಅವಶ್ಯಕ ಎಂದರು.

ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಮಾತನಾಡಿ, ಉದ್ಯಮಕ್ಕೆ ಅಗತ್ಯವಿರುವ ಕೌಶಲ್ಯದ ಶಿಕ್ಷಣವು ಪ್ರಸ್ತುತ ಶಿಕ್ಷಣ ವ್ಯವಸ್ಥೆಯಲ್ಲಿ ಇಲ್ಲ. ಸ್ವಯಂ ಪರಿಶ್ರಮದಿಂದಲೇ ಉದ್ಯಮಕ್ಕೆ ಬೇಕಿರುವ ಕೌಶಲ್ಯಗಳನ್ನು ಕಲಿತುಕೊಳ್ಳಬೇಕು. ಮಾರುಕಟ್ಟೆ ಜ್ಞಾನ ಮುಖ್ಯ ಎಂದು ಹೇಳಿದರು.

ಮಹಿಳಾ ಉದ್ಯಮಿಗಳಿಗೆ ಸರ್ಕಾರದಿಂದ ಹೆಚ್ಚಿನ ಸೌಲಭ್ಯಗಳು ಸಿಗುತ್ತಿದ್ದು, ಹೆಚ್ಚಿನ ಅರಿವು ಇಲ್ಲ. ಆದ್ದರಿಂದ ವಿವಿಧ ಇಲಾಖೆಗಳಲ್ಲಿ ಮಹಿಳೆಯರಿಗೆ ಸಿಗುವ ಆರ್ಥಿಕ ಹಾಗೂ ಸಾಲ ಸೌಲಭ್ಯಗಳ ಮಾಹಿತಿ ಪಡೆದುಕೊಳ್ಳಬೇಕು. ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಮಹಿಳೆ ಉದ್ಯಮಿಗಳು ಬಹುತೇಕ ಅತ್ಯಂತ ಕೌಶಲ್ಯರಾಗಿದ್ದು, ಉತ್ಪನ್ನಗಳನ್ನು ಸಿದ್ಧಪಡಿಸಿದರೂ ಸೂಕ್ತ ಮಾರುಕಟ್ಟೆ ಪರಿಕಲ್ಪನೆ ಇಲ್ಲದೇ ಸರಿಯಾಗಿ ಜನರನ್ನು ತಲುಪಲಾಗುತ್ತಿಲ್ಲ. ಆದ್ದರಿಂದ ಡಿಜಿಟಲ್ ಮಾರುಕಟ್ಟೆಯ ಕೌಶಲ್ಯಗಳನ್ನು ಕಲಿತುಕೊಳ್ಳಬೇಕು ಎಂದು ಸಲಹೆ ನೀಡಿದರು.

ಸ್ವೇದ ಮಹಿಳಾ ಉದ್ಯಮಿಗಳ ಸಂಘದ ಅಧ್ಯಕ್ಷೆ ಡಾ. ಬಿ.ವಿ.ಲಕ್ಷ್ಮೀದೇವಿ ಗೋಪಿನಾಥ್ ಮಾತನಾಡಿ, ಉತ್ಪನ್ನಗಳನ್ನು ಆನ್‌ಲೈನ್‌ನಲ್ಲಿ ಮಾರಾಟ ಮಾಡಲು ತರಬೇತಿ ನೀಡುವ ಆಶಯದಿಂದ ಕಾರ್ಯಗಾರ ಹಮ್ಮಿಕೊಂಡಿದ್ದು, ಡಿಜಿಟಲ್ ಮಾರುಕಟ್ಟೆಯ ಸಂಪೂರ್ಣ ಕಲಿಕೆಯ ಅಂಶಗಳನ್ನು ಪರಿಣಿತರಿಂದ ತಿಳಿದುಕೊಳ್ಳಬೇಕು. ಸಂಸ್ಥೆಯ ವತಿಯಿಂದ ಸೂಕ್ತ ಮಾರ್ಗದರ್ಶನ ನೀಡಲಾಗುತ್ತದೆ ಎಂದು ತಿಳಿಸಿದರು.

Digital marketing system ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್, ಸ್ವೇದ ಮಹಿಳಾ ಉದ್ಯಮಿಗಳ ಸಂಘದ ಕಾರ್ಯದರ್ಶಿ ಶಿಲ್ಪಾ ಗೋಪಿನಾಥ್, ಸವಿತಾ ಮಾಧವ್, ಸಹನಾ ಚೇತನ್, ಜ್ಯೋತಿ ಬಾಲಕೃಷ್ಣ, ವಿದ್ಯಾ, ವಸಂತ ಹೋಬಳಿದಾರ್, ಅಕ್ಷತಾ ಮುಕುಂದ್‌, ನಮಿತಾ ಧನಂಜಯ ಸರ್ಜಿ, ಸುನೀತಾ, ವಿರೇಶ್‌ ನಾಯ್ಕ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...