Tuesday, February 3, 2026
Tuesday, February 3, 2026

CM Siddharamaih ವಿಪಕ್ಷದ ಬಾಣ ಎದುರಿಸಲು ಸಿದ್ಧರಿದ್ದೇವೆ: ಸಿಎಂ ಸಿದ್ದರಾಮಯ್ಯ

Date:

CM Siddharamaih ಇಂದು ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಇಂದಿನಿಂದ ಅಧಿವೇಶನ ಪ್ರಾರಂಭವಾಗಲಿದ್ದು, ವಿರೋಧ ಪಕ್ಷದವರು ಕೇಳುವ ಪ್ರತಿಯೊಂದು ಪ್ರಶ್ನೆಗೂ ಉತ್ತರಿಸಲು ಸರ್ಕಾರ ಸಿದ್ಧವಿದೆ. ಈ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳತ್ತಲೂ ಗಮನಹರಿಸಲಾಗುವುದು ಎಂದಿದ್ದಾರೆ.

ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಯನ್ನು ತೆಲಂಗಾಣದಲ್ಲಿಯೂ ಹೆಚ್ಚು ಪ್ರಚಾರ ಮಾಡಿದ್ದರಿಂದ ಅಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಗೆಲುವು ಸಾಧಿಸಿದೆ. ಮಧ್ಯಪ್ರದೇಶ ರಾಜ್ಯದಲ್ಲಿ ಗೆಲುವು ಸಾಧಿಸಿರುವ ಬಿಜೆಪಿಯವರೂ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಎಂದಿಗೂ ಚುನಾವಣೆಯಲ್ಲಿ ಗೆಲುವು ಸಾಧಿಸಲೆಂದು ಗ್ಯಾರಂಟಿ ಯೋಜನೆಗಳನ್ನು ಘೋಷಿಸುವುದಿಲ್ಲ. ಬಡಜನರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಪ್ರಾಮಾಣಿಕತೆಯಿಂದ ಇವುಗಳನ್ನು ಜಾರಿಗೊಳಿಸಲಾಗಿದೆ. ಗ್ಯಾರಂಟಿ ಯೋಜನೆಗಳೆಲ್ಲ ಬಡವರ ಕಾರ್ಯಕ್ರಮಗಳಾಗಿವೆ ಎಂದಿದ್ದಾರೆ.

CM Siddharamaih ನಮ್ಮ ಸರ್ಕಾರ ರಚನೆಯಾಗಿ ಆರು ತಿಂಗಳು ಕಳೆದರೂ ಬಿಜೆಪಿಯವರಿಗೆ ವಿಪಕ್ಷ ನಾಯಕರನ್ನು ಆಯ್ಕೆ ಮಾಡಿರಲಿಲ್ಲ. ವಿರೋಧ ಪಕ್ಷದವರಿಗೆ ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕತೆಯೂ ಇಲ್ಲ. ಅವರು ಜಂಟಿಯಾಗಿ ಹೋರಾಟ ನಡೆಸಿದರೂ, ಅವರ ಎಲ್ಲ ಹೋರಾಟಗಳಿಗೆ ಉತ್ತರಿಸಲು ಸರ್ಕಾರ ಸಿದ್ಧವಿದೆ
ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...