Thursday, March 19, 2026
Thursday, March 19, 2026

DC Shivamogga ಯಾವುದೇ ಲೋಪದೋಷವಿಲ್ಲದಂತೆ ಸೆಕ್ಟರ್ ಅಧಿಕಾರಿಗಳು ಕಾರ್ಯನಿರ್ವಹಿಸಿ- ಡಾ.ಆರ್.ಸೆಲ್ವಮಣಿ

Date:

DC Shivamogga ಭಯಮುಕ್ತ ಚುನಾವಣೆ ನಡೆಸುವಲ್ಲಿ ಸೆಕ್ಟರ್ ಅಧಿಕಾರಿಗಳ ಪಾತ್ರ ಅತಿ ಮುಖ್ಯವಾಗಿದ್ದು, ಯಾವುದೇ ಲೋಪದೋಷವಿಲ್ಲದಂತೆ ಕಾರ್ಯ ನಿರ್ವಹಿಸಲು ಸನ್ನದ್ದರಾಗಬೇಕೆಂದು ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶಿವಮೊಗ್ಗ ನಗರದ ಅಂಬೇಡ್ಕರ್ ಭವನದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ – 2024 ಕ್ಕೆ ಸಂಬಂಧಿಸಿದಂತೆ ಸೆಕ್ಟರ್ ಅಧಿಕಾರಿಗಳು ಹಾಗೂ ಸೆಕ್ಟರ್ ಪೊಲೀಸ್ ಅಧಿಕಾರಿಗಳಿಗೆ ಏರ್ಪಡಿಸಲಾಗಿದ್ದ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಚುನಾವಣಾ ವೇಳೆ ಸೆಕ್ಟರ್ ಅಧಿಕಾರಿಗಳ/ಸೆಕ್ಟರ್ ಪೊಲೀಸ್ ಅಧಿಕಾರಿಗಳ ಜವಾಬ್ದಾರಿಗಳು, ಕರ್ತವ್ಯಗಳು ಹಾಗೂ ಒಟ್ಟಾರೆ ಕಾರ್ಯವಿಧಾನದ ಕುರಿತು ಇಂದಿನ ತರಬೇತಿ ಕಾರ್ಯಕ್ರಮದಲ್ಲಿ ಮಾಸ್ಟರ್ ತರಬೇತುದಾರರು ತರಬೇತಿಯನ್ನು ನೀಡುವರು. ತರಬೇತಿ ಪಡೆದ ಸೆಕ್ಟರ್ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ತಿಳಿಸಿದರು.

ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಸೆಕ್ಟರ್ ಅಧಿಕಾರಿ/ಪೊಲೀಸ್ ಸೆಕ್ಟರ್ ಅಧಿಕಾರಿಗಳ ಕಾರ್ಯ ವಿಧಾನದ ಕುರಿತು ವಿವರಣೆ ನೀಡಿದರು.

DC Shivamogga ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಶಿವಕುಮಾರ್ ಹಾಗೂ ತುಂಗಾ ಮೇಲ್ದಂಡೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿ ರವಿಚಂದ್ರನಾಯ್ಕ್ ಪಿಪಿಟಿ ಮೂಲಕ ಸೆಕ್ಟರ್ ಅಧಿಕಾರಿಗಳ ಜವಾಬ್ದಾರಿಗಳು, ಸ್ಥಾನಮಾನಗಳು, ಸಿದ್ದತೆಗಳು, ಕಾರ್ಯವಿಧಾನದ ಕುರಿತು ತರಬೇತಿ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಪೊಲೀಸ್, ಕಂದಾಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...