Saturday, November 23, 2024
Saturday, November 23, 2024

DVS College Shivamogga ಡಿವಿಎಸ್ ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ಜಾಗೃತಿ ಕಾರ್ಯಕ್ರಮ

Date:

DVS College Shivamogga ತುರ್ತು ಸಂದರ್ಭಗಳಲ್ಲಿ, ಕಷ್ಟದ ಸನ್ನಿವೇಶಗಳಲ್ಲಿ ಸಂಕಷ್ಟಕ್ಕೆ ಸಿಲುಕಿರುವವರಿಗೆ ನೆರವು ಒದಗಿಸುವುದು ಅತ್ಯಂತ ಮುಖ್ಯ ಎಂದು ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಸಭಾಪತಿ, ದೇಶಿಯ ವಿದ್ಯಾಶಾಲಾ ಸಮಿತಿ ಉಪಾಧ್ಯಕ್ಷ ಎಸ್.ಪಿ.ದಿನೇಶ್ ಹೇಳಿದರು.

ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಶಿವಮೊಗ್ಗ ಹಾಗೂ ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕ, ಐಕ್ಯೂಎಸಿ ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ “ಪ್ರಥಮ ಚಿಕಿತ್ಸೆಯ ಜಾಗೃತಿ ಕಾರ್ಯಕ್ರಮ” ಉದ್ಘಾಟಿಸಿ ಮಾತನಾಡಿದರು.

ಪ್ರತಿಯೊಂದು ಕಾಲೇಜುಗಳಲ್ಲಿ ಪಠ್ಯದ ಜತೆಯಲ್ಲಿ ಪಠ್ಯೇತರ ಚಟುವಟಿಕೆಗಳ ಬಗ್ಗೆಯೂ ಜಾಗೃತಿ ಮೂಡಿಸುವ ಆಶಯದಿಂದ ಎನ್‌ಎಸ್‌ಎಸ್, ಸ್ಕೌಟ್ಸ್, ಗೈಡ್ಸ್, ಎನ್‌ಸಿಸಿ, ರೆಡ್‌ಕ್ರಾಸ್ ಘಟಕಗಳನ್ನು ಸ್ಥಾಪಿಸಲಾಗುತ್ತದೆ. ವಿದ್ಯಾರ್ಥಿಗಳು ಸಾಮಾಜಿಕ ಕಳಕಳಿಯ ಜತೆಯಲ್ಲಿ ಸೇವಾ ಮನೋಭಾವನೆ ಬೆಳೆಸಲು ಘಟಕಗಳು ನೆರವಾಗುತ್ತವೆ ಎಂದು ತಿಳಿಸಿದರು.

ಅಪಘಾತ, ತುರ್ತು ಸಂದರ್ಭಗಳಲ್ಲಿ ಸಂಕಷ್ಟಕ್ಕೆ ಸಿಲುಕಿದವರನ್ನು ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭದಲ್ಲಿ ಪಾಲಿಸಬೇಕಾದ ಕ್ರಮ ಪ್ರಥಮ ಚಿಕಿತ್ಸೆ ಆಗಿದ್ದು, ಕಷ್ಟಕರ ಸಮಯದಲ್ಲಿ ಅವರ ಜೀವ ಉಳಿಸಲು ನೆರವಾಗಲು ಪ್ರಥಮ ಚಿಕಿತ್ಸೆ ಮಾಡುವ ವಿಧಾನವನ್ನು ಎಲ್ಲರೂ ಅರಿತುಕೊಳ್ಳಬೇಕು ಎಂದರು.

ದೇಶಿಯ ವಿದ್ಯಾಶಾಲಾ ಸಮಿತಿಯ ಕಾರ್ಯದರ್ಶಿ ಎಸ್.ರಾಜಶೇಖರ್ ಮಾತನಾಡಿ, ರೆಡ್‌ಕ್ರಾಸ್ ಘಟಕವು ಕಷ್ಟದ ಸಂದರ್ಭದಲ್ಲಿ ನೆರವು ನೀಡುವ ಮಾನವೀಯ ಮೌಲ್ಯಗಳನ್ನು ಕಲಿಸುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಗಳು ಸಾಮಾಜಿಕ ಜವಾಬ್ದಾರಿಯ ಬಗ್ಗೆ ಅರಿತುಕೊಳ್ಳಬೇಕು ಎಂದು ಹೇಳಿದರು.

ವೈದ್ಯಕೀಯ ಕ್ಷೇತ್ರದಲ್ಲಿ ಇದ್ದವರು ಚಿಕಿತ್ಸಾ ಕ್ರಮಗಳ ಬಗ್ಗೆ ಜ್ಞಾನ ಹೊಂದಿರುತ್ತಾರೆ. ನಮಗೆ ಅದರ ಅಗತ್ಯ ಇಲ್ಲ ಎಂಬ ಮನೋಭಾವ ಬೇಡ, ಪ್ರತಿಯೊಬ್ಬ ವ್ಯಕ್ತಿಗೂ ಪ್ರಥಮ ಚಿಕಿತ್ಸೆಯ ಜ್ಞಾನ ತುಂಬಾ ಮುಖ್ಯ. ಇದರಿಂದ ಜೀವ ಉಳಿಸುವ ಶ್ರೇಷ್ಠ ಕಾರ್ಯದಲ್ಲಿ ನಾವೂ ಸಹ ಸೇವೆ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.

ದೇಶಿಯ ವಿದ್ಯಾಶಾಲಾ ಸಮಿತಿಯ ಖಜಾಂಚಿ ಬಿ.ಗೋಪಿನಾಥ್ ಮಾತನಾಡಿ, ವಿದ್ಯಾರ್ಥಿಗಳು ಸಮಾಜದಲ್ಲಿ ತುರ್ತು ಸಂದರ್ಭ, ಪ್ರವಾಹ ಸಂದರ್ಭಗಳಲ್ಲಿ ಸೇವೆ ಸಲ್ಲಿಸುವ ದೃಷ್ಠಿಯಿಂದ ಇಂತಹ ಜ್ಞಾನ ಅಗತ್ಯವಾಗಿ ಬೇಕಾಗುತ್ತದೆ. ಸಮಾಜದ ತುರ್ತು ಸಂದರ್ಭಗಳಲ್ಲಿ ಸ್ವಯಂ ಸೇವಕರಾಗಿಯೂ ಕೆಲಸ ಮಾಡುವ ಸಾಮಾರ್ಥ್ಯ ನಮ್ಮಲ್ಲಿರಬೇಕು ಎಂದರು.

DVS College Shivamogga ಅಂತರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಪನ್ಮೂಲ ವ್ಯಕ್ತಿ ಡಾ. ವಿ.ಎಲ್.ಎಸ್.ಕುಮಾರ್ ಹಾಗೂ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಶಿವಮೊಗ್ಗ ಜಿಲ್ಲಾ ಘಟಕದ ಕಾರ್ಯದರ್ಶಿ ಡಾ. ದಿನೇಶ್ ವಿಶೇಷ ಉಪನ್ಯಾಸ ನೀಡಿದರು. ದೇಶಿಯ ವಿದ್ಯಾಶಾಲಾ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಐಕ್ಯೂಎಸಿ ಸಂಚಾಲಕ ಎನ್.ಕುಮಾರಸ್ವಾಮಿ, ಯುವ ರೆಡ್‌ಕ್ರಾಸ್ ಘಟಕ ಸಂಯೋಜಕ ಡಾ. ಶ್ರೀನಿವಾಸ ಲಮಾಣಿ, ಪ್ರೊ. ಎಚ್.ಎನ್.ಸುಧಾಕರ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ “ರಾಜ್ಯೋತ್ಸವ ಕವಿಗೋಷ್ಠಿ”

Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ...

Mohare Hanumantharaya Award ಪ್ರಶಸ್ತಿ ಪುರಸ್ಕೃತ ಪತ್ರಕರ್ತ, ‘ಕ್ರಾಂತಿ ದೀಪ ‘ಮಂಜುನಾಥ್ ಅವರಿಗೆ ಸನ್ಮಾನ

Mohare Hanumantharaya Award ಪತ್ರಿಕೋದ್ಯಮದ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಮೊಹರೆ ಹಣಮಂತರಾಯ...

MESCOM ನವೆಂಬರ್ 23 .ಹೊಳಲೂರು ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಹೊಳಲೂರು ಗ್ರಾಮದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ...

Rotary Club Shimoga ಪ್ರೌಢಾವಸ್ಥೆಯು ದೇಹದಲ್ಲಿ ಅನೇಕ ಬದಲಾವಣೆ ತರುತ್ತದೆ.ಅದನ್ನ ಗಮನಿಸಬೇಕು- ಡಾ.ಮೋಕ್ಷಾ

Rotary Club Shimoga ರೋಟರಿ ಸಂಸ್ಥೆಯು ನಿಸ್ವಾರ್ಥವಾಗಿ ವಿಶ್ವದ ಎಲ್ಲ ಭಾಗಗಳಲ್ಲಿ...