Friday, March 20, 2026
Friday, March 20, 2026

Akhila Bharath Veerashaiva Mahasabha ದಾವಣಗೆರೆಯಲ್ಲಿ ಅ.ಭಾ.ಲಿಂಗಾಯಿತ ಮಹಾಸಭಾದ24ನೇ ಮಹಾ ಅಧಿವೇಶನ

Date:

Akhila Bharath Veerashaiva Mahasabha ವೀರಶೈವ ಲಿಂಗಾಯಿತ ಸಮಾಜವನ್ನು ಓಬಿಸಿ ಪಟ್ಟಿಗೆ ಸೇರಿಸುವ ಸಲುವಾಗಿ ದಾವಣಗೆರೆಯಲ್ಲಿ ಅಖಿಲ ಭಾರತ ಲಿಂಗಾಯಿತ ಮಹಾಸಭಾದ 24ನೇ ಮಹಾ ಅಧಿವೇಶನಕ್ಕೆ ಜಿಲ್ಲೆಯ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೇಡಿಕೆ ಈಡೇರಿಸಲು ಕೈಜೋಡಿಸಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಹೆಚ್.ಎಂ.ಲೋಕೇಶ್ ಆಗ್ರಹಿಸಿದರು.

ಚಿಕ್ಕಮಗಳೂರು ನಗರದ ರೇಣುಕಾಚಾರ್ಯ ಕಲ್ಯಾಣ ಮಂಟಪದ ಕಚೇರಿಯಲ್ಲಿ ಭಾನುವಾರ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ದಾವಣಗೆರೆಯ ಎಂಬಿಎ ಕಾಲೇಜಿನಲ್ಲಿ ಎರಡು ದಿನಗಳ ನಡೆಯುವ ಅಧಿವೇಶನದಲ್ಲಿ ಜನಾಂಗದ ಮೂಲ ಬೇಡಿಕೆಗಳಾದ ಓಬಿಸಿ ಪಟ್ಟಿಗೆ ಸೇರ್ಪಡೆ ಹಾಗೂ ಜಾತಿ ಸಮೀಕ್ಷೆ ಅವ್ಶೆಜ್ಞಾನಿಕವಾಗಿರುವ ಬಗ್ಗೆ ಹಕ್ಕೋತ್ತಾಯಿಸಲು ಧಾರ್ಮಿಕ-ಸಾಮಾಜಿಕ, ಶೈಕ್ಷಣ ಕವಾಗಿ ಸಂಘಟಿಸುವ ಉದ್ದೇಶದಿಂದ ಅಧಿವೇಶನ ನಡೆಯ ಲಿದೆ ಎಂದು ತಿಳಿಸಿದರು.

ಈ ಮಹಾಅಧಿವೇಶನದಲ್ಲಿ ಚಿಕ್ಕಮಗಳೂರು, ಚಿತ್ರದುರ್ಗ, ಬಳ್ಳಾರಿ, ಹಾವೇರಿ ಸೇರಿದಂತೆ ಹಲವಾರು ಜಿಲ್ಲೆ ಗಳಿಂದ ಜನಾಂಗದವರು ಭಾಗವಹಿಸಲಿದ್ದಾರೆ. ಜೊತೆಗೆ ನಾಡಿನ ಹಿರಿಯ ಮಠಾಧೀಶರು, ರಾಜಕೀಯ ಮುಖಂಡರು, ಸಮಾಜದ ಗಣ್ಯರು, ಸಾಹಿತಿಗಳು, ಕಲಾವಿದರು ಆಗಮಿಸಲಿದ್ದಾರೆ ಎಂದರು.

ಎರಡು ದಿನಗಳ ಕಾಲ ನಡೆಯುವ ಈ ಸಮಾವೇಶದಲ್ಲಿ ಸಾಂಸ್ಕೃತಿಕ ಪರಂಪರೆಗಳ ಗೋಷ್ಟಿ, ಮಹಾಸಭೆಯ ಇತಿಹಾಸ, ಕಾರ್ಯಚಟುವಟಿಕೆಗಳನ್ನು ಪರಿಚಯಿಸುವ ವಸ್ತು ಮತ್ತು ಪುಸ್ತಕ ಪ್ರದರ್ಶನ ಹಾಗೂ ಕೈಗಾರಿಕೆ ಮತ್ತು ವಾಣ ಜ್ಯ, ಕೃಷಿ ಸಂಬಂಧಿತ ಪ್ರದರ್ಶನವಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಚಿಕ್ಕಮಗಳೂರು ವೀರಶೈವ-ಲಿಂಗಾಯಿತ ಬಂಧುಗಳು ಪ್ರತಿನಿಧಿಗಳಾಗಿ ಭಾಗವಹಿಸಬೇಕು ಎಂದು ಒತ್ತಾಯಿಸಿದ್ದಾರೆ.

Akhila Bharath Veerashaiva Mahasabha ಈ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಪಿ.ಚಂದ್ರಮೌಳಿ, ಮೂಡಿಗೆರೆ ತಾಲ್ಲೂಕು ಅಧ್ಯಕ್ಷ ಓಂಕಾರ, ವೀರಶೈವ ಲಿಂಗಾಯಿತ ಸಮಾಜದ ಮುಖಂಡರಾದ ಹೆಚ್.ಎಂ.ರೇಣುಕಾರಾಧ್ಯ, ಪೂಣೇಶ್, ಜಿ.ವೀರೇಶ್, ಪ್ರಸಾದ್ ಸಿರಿಮನೆ, ಜಯಪ್ರಕಾಶ್, ಅಶೋಕ್‌ಕುಮಾರ್, ಮಂಜುನಾಥಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...