Sunday, September 27, 2026
Sunday, September 27, 2026

CM Siddharamaih ರಾಜ್ಯದಲ್ಲಿ₹ 34,115 ಕೋಟಿ‌ ಮೊತ್ತದ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ

Date:

CM Siddharamaih ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ ಒಟ್ಟು ₹34,115 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ ನೀಡಲಾಗಿದೆ. ಇದರಿಂದ 13,308 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದೆ. ಹೆಚ್ಚುವರಿ ರೂ.13,911 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಮಾಡುವ ಫಾಕ್ಸ್‌ಕಾನ್‌ನ ಪ್ರಸ್ತಾವನೆಯನ್ನು ಸಮಿತಿಯು ಅನುಮೋದಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ಫಾಕ್ಸ್‌ಕಾನ್‌ ಈಗಾಗಲೇ ರಾಜ್ಯದಲ್ಲಿ ರೂ. 8,000 ಕೋಟಿ ಬಂಡವಾಳ ಹೂಡಿಕೆ ಮಾಡಲು ಅನುಮೋದನೆ ಪಡೆದಿದೆ. ಜೆಎಸ್‌ಡಬ್ಲ್ಯು ರಿನ್ಯೂ ಎನರ್ಜಿ ಫೋರ್ ಲಿಮಿಟೆಡ್ (ರೂ 4,960 ಕೋಟಿ ), ಜೆಎಸ್‌ಡಬ್ಲ್ಯು ಸ್ಟೀಲ್ ಲಿಮಿಟೆಡ್ (ರೂ 3,804 ಕೋಟಿ ), ಟೊಯೊಟಾ ಕಿರ್ಲೋಸ್ಕರ್ ಮೋಟರ್ ಪ್ರೈವೇಟ್ ಲಿಮಿಟೆಡ್ (ರೂ 3237.30 ಕೋಟಿ ), ಟಿಆರ್‌ಐಎಲ್‌ ಬೆಂಗಳೂರು ರಿಯಲ್ ಎಸ್ಟೇಟ್ ಸಿಕ್ಸ್ ಲಿಮಿಟೆಡ್ (ರೂ 3273 ಕೋಟಿ ಹೂಡಿಕೆ), ಜಾನಕಿ ಕಾರ್ಪ್‌ ಲಿಮಿಟೆಡ್‌ (ರೂ 607 ಕೋಟಿ ಮೊತ್ತದ ಹೆಚ್ಚುವರಿ ಹೂಡಿಕೆ) ಪ್ರಸ್ತಾವನೆಗಳು ’ಎಸ್‌ಎಚ್‌ಎಲ್‌ಸಿಸಿ’ ಅನುಮೋದನೆ ಪಡೆದಿರುವ ದೊಡ್ಡ ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಲ್ಲಿ ಸೇರಿವೆ ಎಂದರು.

“ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ 4 ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ. ಈ ಯೋಜನೆಗಳಿಂದ ಒಟ್ಟು ರೂ. 9,461 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಆಗಲಿದೆ. ಇವುಗಳಿಂದ ಈ ಪ್ರದೇಶದಲ್ಲಿ 3,538 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ ಎಂದು ಮಾಹಿತಿ ನೀಡಿದರು.

CM Siddharamaih ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಸರ್ಕಾರದ ಕಡೆಯಿಂದ ನಡೆಯುತ್ತಿರುವ ಇಂತಹ ಸಂಘಟಿತ ಪ್ರಯತ್ನಗಳು ‘ಬೆಂಗಳೂರಿನ ಆಚೆ’ ಉಪಕ್ರಮದ ಭಾಗವಾಗಿವೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...