Friday, December 5, 2025
Friday, December 5, 2025

Department of Pension & Pensioner’s Welfare ಇಪಿಎಸ್ 1995 ರ ಪಿಂಚಣಿದಾರರು ಜೀವನ ಪ್ರಮಾಣಪತ್ರ ಸಲ್ಲಿಸಲು ಮಾಹಿತಿ

Date:

Department of Pension & Pensioner’s Welfare ಇಪಿಎಸ್ 1995ರ ಪಿಂಚಣಿದಾರರು/ಫಲಾನುಭವಿಗಳು ಪ್ರತಿ ಹನ್ನೆರಡು ತಿಂಗಳಿಗೊಮ್ಮೆ ಜೀವನ್ ಪ್ರಮಾಣ್ ಪತ್ರವನ್ನು ಸಲ್ಲಿಸಬೇಕಾಗುತ್ತದೆ.

ಈ ಹಿಂದೆ ಪಿಂಚಣಿದಾರರು ಪ್ರತಿ ವರ್ಷ ನವೆಂಬರ್ ತಿಂಗಳಿನಲ್ಲಿ ಜೀವನ್ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗಿತ್ತು. ಆದರೆ ಈಗ ಪಿಂಚಣಿದಾರರು ಕಳೆದ ಜೀವನ್ ಪ್ರಮಾಣ ಪತ್ರವನ್ನು ಸಲ್ಲಿಸಿದ ದಿನಾಂಕದಿಂದ ಹನ್ನೆರಡು ತಿಂಗಳಿಗೊಮ್ಮ ಜೀವನ್ ಪ್ರಮಾಣ ಪತ್ರವನ್ನು ಸಲ್ಲಿಸಬೇಕು.

Department of Pension & Pensioner’s Welfare ಜೀವನ್ ಪ್ರಮಾಣ ಪತ್ರದ ಸಲ್ಲಿಕೆಯಲ್ಲಿನ ವಿಳಂಬವು ಪಿಂಚಣಿಯನ್ನು ನಿಲ್ಲಿಸಲು ಕಾರಣವಾಗುತ್ತದೆ. ಜೀವನ್ ಪ್ರಮಾಣ ಪತ್ರವನ್ನು ಫೇಸ್ ದೃಢೀಕರಣ ತಂತ್ರಜ್ಞಾನದ ಮೂಲಕ ಸಲ್ಲಿಸಬಹುದು(http://jeevanpranaam.gov.in/package/download) ಹಾಗೂ ಯೂಟ್ಯೂಬ್ ವಿಡಿಯೋ ಲಿಂಕ್ https://youtube/dobsgqk421Q?si=cVEKWUCJToELdFoU FAT ತಂತ್ರಜ್ಞಾನ ಹೇಗೆ ಜೀವನ್ ಪ್ರಮಾಣ ಪತ್ರವನ್ನು ಸಲ್ಲಿಸಬೇಕೆಂಬುದನ್ನು ವಿವರಿಸುತ್ತದೆ. ಇದನ್ನು ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಅಥವಾ ಪಿಂಚಣಿ ವಿತರಿಸುವ ಬ್ಯಾಂಕ್ ಶಾಖೆಗಳಲ್ಲಿ ಆನ್‍ಲೈನ್‍ನಲ್ಲಿ ಸಲ್ಲಿಸಬಹುದು. ಪಿಂಚಣಿದಾರರು 3 ವರ್ಷಗಳಿಗಿಂತ ಹೆಚ್ಚು ಕಾಲ ತಮ್ಮ ಜೀವನ್ ಪ್ರಮಾಣ ಪತ್ರವನ್ನು ಸಲ್ಲಿಸಲು ವಿಫಲರಾದರೆ ನಂತರ ಪಿಪಿಓ ರದ್ದತಿಗೆ ಅವಕಾಶವಿದೆ. ಆದ್ದರಿಂದ ಇದುವರೆಗೆ ತಮ್ಮ ಜೀವನ್ ಪ್ರಮಾಣ ಪತ್ರವನ್ನು ಸಲ್ಲಿಸದಿರುವ ಪಿಂಚಣಿದಾರರು/ಫಲಾನುಭವಿಗಳು ಆದ್ಯತೆಯ ಮೇರೆಗೆ ಅದನ್ನು ಸಲ್ಲಿಸುವಂತೆ ಪ್ರಾದೇಶಿಕ ಭವಿಷ್ಯನಿಧಿ ಆಯುಕ್ತರು II ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...