Wednesday, October 2, 2024
Wednesday, October 2, 2024

CM Siddharamaih ಸಿರಿಧಾನ್ಯಗಳ ಬಳಕೆಯ ಲಾಭಗಳ ಬಗ್ಗೆ ಜನರಲ್ಲಿ ಮೇಳಗಳು ಜಾಗೃತಿ ಮೂಡಿಸಬೇಕು- ಸಿದ್ಧರಾಮಯ್ಯ

Date:

CM Siddharamaih ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ದಿನ – 2023 ಮತ್ತು ಮೇಳದ ಪೂರ್ವಭಾವಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಿರಿಧಾನ್ಯ ಬೆಳೆಯಲ್ಲಿ ಕರ್ನಾಟಕವು ದೇಶದಲ್ಲಿ 4ನೇ ಸ್ಥಾನದಲ್ಲಿದೆ. ಕರ್ನಾಟಕ ದೇಶದಲ್ಲಿಯೇ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕು. ಈ ನಿಟ್ಟಿನಲ್ಲಿ ಪ್ರಯತ್ನಗಳು ಆಗಲಿ ಎಂದರು.

ಸಿರಿಧಾನ್ಯಗಳ ಬಳಕೆಯ ಲಾಭಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಇಂತಹ ಮೇಳಗಳು ಸಹಕಾರಿಯಾಗಿವೆ. ಸಾವಯವ ಕೃಷಿಯತ್ತ ಜನರು ಮುಖ ಮಾಡಿದ್ದು, ಸಾವಯವ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದೆ. ಇಂದು ವಿಶ್ವದಲ್ಲಿ ಸಿರಿಧಾನ್ಯ ದಿನವನ್ನು ಆಚರಿಸಲಾಗುತ್ತಿದೆ. ಜನರಲ್ಲಿ ಹಾಗೂ ರೈತರಲ್ಲಿ ಸಿರಿಧಾನ್ಯಗಳ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಇವುಗಳಿಗೆ ಮಾರುಕಟ್ಟೆ ಒದಗಿಸಬೇಕು. ಕಳೆದ 20 ವರ್ಷಗಳಿಂದ ಸಾವಯವ ಕೃಷಿ ಪದ್ಧತಿಗೆ ಒತ್ತು ನೀಡಲಾಗುತ್ತಿದೆ. ಅದಕ್ಕೆ ಕೃಷಿ ಇಲಾಖೆಯವರು ಪೂರಕ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ತಿಳಿಸಿದರು.

ಸಾವಯವ ಕೃಷಿ ಪದ್ಧತಿ, ಸಿರಿಧಾನ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಬೆಂಗಳೂರಿನಲ್ಲಿ ಜನವರಿ 5, 6, 7 ರಂದು ಸಿರಿಧಾನ್ಯ ಮೇಳವನ್ನು ಏರ್ಪಡಿಸಲಾಗಿದೆ.
ಮೊದಲನೇ ಮೇಳ ನಡೆದಿದ್ದು ೨೦೧೭ ರಲ್ಲಿ. ಆಗ ಕೃಷ್ಣ ಬೈರೇಗೌಡರು ಕೃಷಿ ಸಚಿವರಾಗಿದ್ದರು. ೫ ವರ್ಷ ಸತತವಾಗಿ ಏರ್ಪಾಡು ಮಾಡಲಾಗಿತ್ತು. ಕೋವಿಡ್ ಸಂದರ್ಭದಲ್ಲಿ ಮಾಡಲಾಗಿರಲಿಲ್ಲ. ಸಿರಿಧಾನ್ಯ ಬಹಳ ಬೇಡಿಕೆಯಲ್ಲಿರುವ ವಸ್ತು. ಮೊದಲು ರಾಗಿ, ಜೋಳ, ನವಣೆ, ಸಾಮೆ, ಆರ್ಕವನ್ನು ಬೆಳೆಯುತ್ತಿದ್ದೆವು, ನಂತರ ಕಡಿಮೆಯಾಗುತ್ತಾ ಬಂದಿತು ಎಂದು ಹೇಳಿದರು.

CM Siddharamaih ಮಳೆ ಕಡಿಮೆಯಾಗುವ ಪ್ರದೇಶಗಳಲ್ಲಿ ಸಿರಿಧಾನ್ಯಗಳನ್ನು ಬೆಳೆಯಲಾಗುತ್ತದೆ. ಇತ್ತೀಚೆಗೆ ಸಿರಿಧಾನ್ಯಗಳು ಆರೋಗ್ಯಕ್ಕೆ ಒಳ್ಳೆಯದೆಂದು ಅರಿತಿರುವ ಜನ ಹೆಚ್ಚೆಚ್ಚು ಬಳಕೆ ಮಾಡುತ್ತಿದ್ದಾರೆ. ಇದರಲ್ಲಿ ಕಾರ್ಬೊಹೈಡ್ರೇಟ್ಸ್ ಕಡಿಮೆಯಿದ್ದು, ಲವಣಾಂಶ ಮತ್ತು ನಾರಿನಂಶ ಹೇರಳವಾಗಿದ್ದು, ಆರೋಗ್ಯಕ್ಕೆ ಉತ್ತಮವಾಗಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...