Udupi Super Specialty Eye Hospital ಪ್ರಸಾದ್ ನೇತ್ರಾಲಯ, ಉಡುಪಿ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ನೇತ್ರ ಜ್ಯೋತಿ ಚಾರಿಟಬಲ್ ಟ್ರಸ್ಟ್ ಹಾಗೂ ಜಿಲ್ಲಾ ಆಮ್‌ಆದ್ಮಿ ಪಕ್ಷದ ವತಿಯಿಂದ ತಾಲ್ಲೂಕಿನ ಹುಲಿಕೆರೆ ಗ್ರಾಮದಲ್ಲಿ ಡಿ.17 ರಂದು ಉಚಿತ ನೇತ್ರ ತಪಾಸಣಾ, ಶಸ್ತ್ರಚಿಕಿತ್ಸೆ ಶಿಬಿರ ಮತ್ತು ದಂತ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಎಎಪಿ ಮಾಧ್ಯಮ ಪ್ರತಿನಿಧಿ ಡಾ|| ಕೆ.ಸುಂದರಗೌಡ ಹೇಳಿದ್ದಾರೆ.
ಈ ಸಂಬಂಧ ಹೇಳಿಕೆಯಲ್ಲಿ ತಿಳಿಸಿರುವ ಅವರು ಡಿ.17 ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 01:30ರವರೆಗೆ ಹುಲಿಕೆರೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಬಿರ ನಡೆಸಲಾಗುತ್ತಿದೆ ಎಂದರು.
Udupi Super Specialty Eye Hospital ಗ್ರಾಮಸ್ಥರು ಕಣ್ಣು ಮತ್ತು ದಂತ ಪರೀಕ್ಷೆ ಮಾಡಿಸಿಕೊಳ್ಳುವವರು ಮುಕ್ತವಾಗಿ ಭಾಗವಹಿಸಬಹುದಾಗಿದ್ದು ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಪಡುವ ರೋಗಿಗಳು ವೈದ್ಯರೊಂದಿಗೆ ತೆರಳಲು ಸಿದ್ದರಿರಬೇಕು. ಶಸ್ತçಚಿಕಿತ್ಸೆಗೆ ಆಯ್ಕೆಯಾದ ಫಲಾನುಭವಿಗಳಿಗೆ ಎಲ್ಲಾ ಸೌಕರ್ಯಗಳನ್ನು ಒದಗಿಸಿ ಪುನಃ ಅದೇ ಸ್ಥಳಕ್ಕೆ ಕರೆ ತರಲಾಗುವುದು ಎಂದರು.
ಹೆಚ್ಚಿನ ಮಾಹಿತಿಗಾಗಿ : 9448186203 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ
