Health Department Of karnataka COVID19 ಕೇರಳ ರಾಜ್ಯದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಾರ್ವಜನಿಕರು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಹೊರಡಿಸಿರುವ ಈ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಕರ್ನಾಟಕ ಸರ್ಕಾರದಿಂದ ಆದೇಶಿಸಲಾಗಿದೆ.
ಪ್ರಸ್ತುತ, ದೇಶದ ಕೋವಿಡ್ – 19ನ ಅಂಕಿ-ಅಂಶಗಳು, ಕೇರಳ ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ, ತಮಿಳುನಾಡು ಹಾಗೂ ಕೇರಳ ರಾಜ್ಯದಲ್ಲಿ ಕೋವಿಡ್ 19 ನ ಉಪತಳಿ JN.1 ವರದಿಯಾಗಿರುವುದು, ಚಳಿಗಾಲದ ಹವಾಮಾನ, ಕ್ರಿಸ್ ಮಸ್ ಹಾಗೂ ಹೊಸವರ್ಷಾಚರಣೆಯ ಸಂದರ್ಭದಲ್ಲಿ ಹೆಚ್ಚಾಗುವ ಸಂಭವನೀಯ ಜನದಟ್ಟಣೆ, ಈ ಎಲ್ಲಾ ಅಂಶಗಳನ್ನು ಗಮನದಲ್ಲಿರಿಸಿಕೊಂಡು, ಕೋವಿಡ್ 19 ರಾಜ್ಯ ತಾಂತ್ರಿಕ ಸಲಹಾ ಸಮಿತಿಯು ಶಿಫಾರಸ್ಸು ಮಾಡಿರುವ ಈ ಕೆಳಗಿನ ಅಂಶಗಳನ್ನು ಸಾರ್ವಜನಿಕರು ಪಾಲಿಸುವಂತೆ ಸಲಹೆ ನೀಡಲಾಗಿದೆ.
Health Department Of karnataka ಅಂತರ ರಾಷ್ಟ್ರೀಯ ಪ್ರಯಾಣದ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು, ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ಕ್ ಧರಿಸುವುದು, ಹೆಚ್ಚಿನ ಗಾಳಿ-ಬೆಳಕು ಇಲ್ಲವ ಮತ್ತು ಜನದಟ್ಟಣೆ ಇರುವ ಸ್ಥಳಗಳಿಗೆ ತೆರಳದಿರುವುದೂ ಸೇರಿದಂತೆ. ಇತರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವುದು ಸೂಕ್ತವಾಗಿದೆ.
ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ, ಕೋವಿಡ್ 19ನ ಮುಂಜಾಗ್ರತಾ ಕ್ರಮಗಳ ಕುರಿತು ಸಾರ್ವಜನಿಕರಿಗೆ ಅಗತ್ಯ ಮಾಹಿತಿಯನ್ನು ಒದಗಿಸುವ ನಿಟ್ಟಿನಲ್ಲಿ ಈ ಎಲ್ಲಾ ಅಂಶಗಳನ್ನು ಲಭ್ಯ ಮಾಧ್ಯಮಗಳ ಮೂಲಕ ಪ್ರಚುರಪಡಿಸುವಂತೆ ಸೂಚಿಸಿದ್ದು ಸಾಗೂ ಸಾರ್ವಜನಿಕರಲ್ಲಿ ಇವುಗಳನ್ನು ವಾಲನೆಯನ್ನು ಖಚಿತಪಡಿಸಿಕೊಳ್ಳುವುದು . ಬಿಬಿಎಂಪಿ ಹಾಗೂ ಜಿಲ್ಲಾಡಳಿತಗಳ ಜವಾಬ್ದಾರಿಯಾಗಿರುತ್ತದೆ.
- ಎಲ್ಲಾ ಹಿರಿಯ ನಾಗರೀಕರು (60 ವರ್ಷ ಹಾಗೂ ಮೇಲ್ಪಟ್ಟವರು), ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ( ವಿಶೇಷವಾಗಿ ಕಿಡ್ನಿ, ಹೃದಯ, ಲಿವರ್ ಸಮಸ್ಯೆಗಳು), ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಬೇಕು. ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ತೆರಳದಿರುವುದು ಸೂಕ್ತವಾಗಿದೆ.
- ಜ್ವರ, ಕೆಮ್ಮು, ನೆಗಡಿ, ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ಅಗತ್ಯ ವೈದ್ಯಕೀಯ ಸಲಹೆಯನ್ನು ಪಡೆಯಬೇಕು. ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸುವುದು, ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ಭೇಟಿ ನೀಡದಿರುವುದು ಸೂಕ್ತವಾಗಿದೆ.
- ಉತ್ತಮ ವೈಯಕ್ತಿಕ ಸ್ವಚ್ಛತೆ, ಆಗಾಗ್ಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳುವುದು, ಇತ್ಯಾದಿಗಳ ಪಾಲನೆಯು ಅಗತ್ಯವಾಗಿದೆ.
- ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ ಮನೆಯಲ್ಲಿರುವುದು ಸೂಕ್ತ. ಇತರ ವ್ಯಕ್ತಿಗಳೊಂದಿಗೆ, ವಿಶೇಷವಾಗಿ ಹಿರಿಯ ನಾಗರೀಕರು / ದುರ್ಬಲರನ್ನು (vulnerable) ಅವಶ್ಯವಿದ್ದಲ್ಲಿ ಮಾತ್ರವೇ ಭೇಟಿ ಮಾಡುವುದು. ಆರೋಗ್ಯ ಸಮಸ್ಯೆಗಳನ್ನು ಹೂಂದಿದವರು, ಜನಸಂದಣಿಯ ಪ್ರದೇಶಗಳಿಗೆ ಭೇಟಿ ನೀಡಬೇಕಾದ ಸಂದರ್ಭದಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.