Thursday, March 19, 2026
Thursday, March 19, 2026

Sri Basaveshwara Veershiva Samaj Seva Sangh ಗಣಪರ್ವ, ಸ್ನೇಹ ಸೌಹಾರ್ದತೆಯ ಸಂಕೇತವಾಗಿದೆ-ಡಾ.ಬಸವ ಮರುಳಸಿದ್ಧ ಸ್ವಾಮೀಜಿ

Date:

Sri Basaveshwara Veershiva Samaj Seva Sangh ಲಿಂಗಾಯತ ಪರಂಪರೆಯ ಶ್ರೇಷ್ಠ ಆಚರಣೆಗಳಲ್ಲಿ ಗಣಪರ್ವ ಕೂಡ ಒಂದು. ಸ್ನೇಹ ಸೌಹಾರ್ದತೆಯ ಸಂಕೇತ ಹಾಗೂ ಪರಮಶಾಂತಿಯನ್ನು ಕೊಡುವ ಗಣಪರ್ವ ವಿಶೇಷ ಕಾರ್ಯಕ್ರಮ ಆಗಿದೆ ಎಂದು ಬಸವಕೇಂದ್ರದ ಶ್ರೀ ಡಾ. ಬಸವ ಮರುಳಸಿದ್ಧ ಸ್ವಾಮೀಜಿ ಅಭಿಪ್ರಾಯಪಟ್ಟರು.

ಬಸವಕೇಂದ್ರದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್, ಅಕ್ಕನ ಬಳಗ, ಕದಳಿ ಸಮಾಜ, ಶ್ರೀ ಬಸವೇಶ್ವರ ವೀರಶೈವ ಲಿಂಗಾಯತ ಸಮಾಜ ಸೇವಾ ಸಂಘ, ಸೃಷ್ಠಿ ಮಹಿಳಾ ಸಮಾಜ, ಕದಳಿ ವನಿತಾ ವೇದಿಕೆ ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಆಯೋಜಿಸಿದ್ದ ಗಣಪರ್ವ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದರು.
ಎಲ್ಲ ಭಕ್ತರ ಮನೆಯಿಂದ ಮನೆಗಳಲ್ಲಿ ಸ್ವತಃ ತಾವೇ ತಯಾರಿ ಮಾಡಿದ ವಿವಿಧ ಬಗೆಯ ಅಡುಗೆಗಳನ್ನು ತಂದು ಎಲ್ಲರೂ ಒಟ್ಟಾಗಿ ಆಹಾರ ಸೇವಿಸುವುದರಲ್ಲಿ ಇರುವ ತೃಪ್ತಿಯು ಗಣಪರ್ವದಲ್ಲಿ ಸಿಗುತ್ತದೆ ಎಂದು ತಿಳಿಸಿದರು.

ನೂರಾರು ಭಕ್ತರು ಮನೆಗಳಲ್ಲಿ ಸಿದ್ಧಪಡಿಸಿದ ಪ್ರಸಾದವನ್ನು ಒಂದು ಕಡೆ ತಂದು ಸೇವನೆ ಮಾಡುವುದು, ವಿಶ್ವಗುರು ಬಸವಣ್ಣ ಅವರಿಗೆ ಹಾಲುಕುರ್ಕಿ ಸೋಮನಾಥ ಕವಿ ಬರೆದಿರುವ ಬಸವಲಿಂಗ ನೂರೊಂದು ನಾಮಗಳ ಮೂಲಕ ಅರ್ಚನೆ ಮಾಡಿ ನಂತರ ಪ್ರಸಾದ ವಿನಿಯೋಗ ಮಾಡಲಾಯಿತು.

ಒಂದು ತಿಂಗಳ ಅವಧಿಯಲ್ಲಿ ಚಿಂತನ ಕಾರ್ತಿಕ ನಡೆಸಿದ ಸೇವಾರ್ಥಿಗಳಿಗೆ ನೆನಪಿನ ಕಾಣಿಕೆ ನೀಡಿ ಆಶೀರ್ವದಿಸಿದರು.

ಹಾರನಹಳ್ಳಿ ಚೌಕಿ ಮಠದ ಶ್ರೀ ನೀಲಕಂಠ ಸ್ವಾಮೀಜಿ, ಸಿದ್ಧರಹಳ್ಳಿ ಪಾರಮಾರ್ಥಿಕ ಗವಿಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಸಿಂದಿಗೆರೆ ಕರಡಿಗವಿ ಮಠದ ಶ್ರೀ ಶಿವಶಂಕರ ಶಿವಯೋಗಿ ಸ್ವಾಮೀಜಿ, ಶಿಕಾರಿಪುರ ವಿರಕ್ತ ಮಠದ ಶ್ರೀ ಚನ್ನಬಸವ ಸ್ವಾಮೀಜಿ, ತಂಗನಹಳ್ಳಿ ಶ್ರೀ ಕಾಶಿ ಅನ್ನಪೂರ್ಣೇಶ್ವರಿ ಮಹಾಸಂಸ್ಥಾನ ಮಠದ ಶ್ರೀ ಬಸವ ಮಹಾಲಿಂಗ ಸ್ವಾಮೀಜಿ ಪಾಲ್ಗೊಂಡಿದ್ದರು.

Sri Basaveshwara Veershiva Samaj Seva Sangh ಬಸವಕೇಂದ್ರದ ಅಧ್ಯಕ್ಷ ಜಿ.ಬೆನಕಪ್ಪ, ಎಚ್.ಸಿ.ಯೋಗೀಶ್, ನಾಗರಾಜ ಕಂಕಾರಿ, ಚಂದ್ರಶೇಖರ ತಳಗಿನಹಾಳ, ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಘಟಕ ಅಧ್ಯಕ್ಷ ಜಿ.ವಿಜಯ್‌ಕುಮಾರ್ ಹಾಗೂ ಬಸವ ಕೇಂದ್ರದ ಭಕ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...