Friday, March 20, 2026
Friday, March 20, 2026

Dr. Selvamani R  ನವೋದಯ ಶಾಲೆ ಗ್ರಾಮೀಣ ವಿದ್ಯಾರ್ಥಿಗಳ ಸುಪ್ತ ಪ್ರತಿಭೆ ಬೆಳೆಸುವ ಸಂಸ್ಥೆ- ಡಾ.ಆರ್.ಸೆಲ್ವಮಣಿ

Date:

Dr. Selvamani R  ಶಿವಮೊಗ್ಗದ ಗಾಜನೂರಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ “ಹಿರಿಯ ವಿದ್ಯಾರ್ಥಿಗಳ ಮಿಲನ” ಮತ್ತು “13ನೇ ಬ್ಯಾಚ್ ವತಿಯಿಂದ ಬೆಳ್ಳಿಹಬ್ಬ ಸಂಭ್ರಮ” ನಡೆಯಿತು.

ಸಮಾರಂಭದ ಮುಖ್ಯ ಅತಿಥಿಗಳಾದ, ಡಾ. ಆರ್.ಸೆಲ್ವಮಣಿ ಅವರು ಮಾತನಾಡಿ – “ನವೋದಯ ಶಾಲೆಗಳು, ಗ್ರಾಮೀಣ ಭಾಗದ ವಿದ್ಯರ‍್ಥಿಗಳನ್ನು ಆರಿಸಿ, ಅವರಲ್ಲಿ ಅಡಗಿದ್ದ ಸುಪ್ತ ಪ್ರತಿಭೆ ಗಳನ್ನು ಗುರುತಿಸಿ, ಒಳ್ಳೆಯ ಸಂಸ್ಕೃತಿ ಕಲಿಸಿ, ದೇಶಕ್ಕೆ ಉತ್ತಮ ನಾಗರಿಕರನ್ನಾಗಿಸುವ ಒಂದು ಅತ್ಯುತ್ತಮ ಸಂಸ್ಥೆಯಾಗಿ ಬೆಳೆದಿದೆ. ಈ ರೀತಿಯ ಕರ‍್ಯಕ್ರಮಗಳು ನವೋದಯ ಶಾಲೆಯ 12ನೇ ತರಗತಿಯ ವಿದ್ಯರ‍್ಥಿಗಳಿಗೆ ಒಂದು ಸ್ಪರ‍್ತಿ..ಇದರಿಂದ ಮುಂದಿನ ದಿನಗಳಲ್ಲಿ ಯಾವ ಕ್ಷೇತ್ರ ಆರಿಸಿಕೊಂಡರೆ ತಮಗೆ ಉತ್ತಮ ಭವಿಷ್ಯ ಇದೆ ಎಂಬ ಕಲ್ಪನೆ ಬರಲಿದೆ” ಎಂದರು.

ಡಾ.ನಾಗರಾಜ್ ಪರಿಸರ ಅವರು ಮಕ್ಕಳನ್ನು ಉದ್ದೇಶಿಸಿ “ಮಾನವ ಮತ್ತು ಪರಿಸರ ಒಂದು ಅವಿನಾಭವ ಸಂಬಂಧ ಹೊಂದಿದ್ದು, ಈ ನಿಟ್ಟಿನಲ್ಲಿ ಪರಿಸರವನ್ನು ಪೋಷಿಸಿ ಬೆಳಸುವ ಗುಣ ಮಕ್ಕಳಲ್ಲಿ ಬೆಳೆಯಬೇಕು..ಗಾಜನೂರಿನ ನವೋದಯ ಶಾಲೆ ಪ್ರಕೃತಿಯ ಮಡಿಲಲ್ಲಿ ಇದ್ದು, ಇಲ್ಲಿನ ಮಕ್ಕಳು ಗಿಡಗಳನ್ನು ಬೆಳೆಸಿ, ಪರಿಸರವನ್ನು ಸ್ವಚ್ಛವಾಗಿ ಇಟ್ಟು, ಮುಂದಿನ ಪೀಳಿಗೆಗೆ ಮಾದರಿ ಆಗಲಿ” ಎಂದು ಹರಸಿದರು.

Dr. Selvamani R  ಈ ಬೆಳ್ಳಿ ಹಬ್ಬದ ಕಾರ್ಯಕ್ರಮದಲ್ಲಿ ಜವಾಹಾರ್ ನವೋದಯ ವಿದ್ಯಾಲಯದ ನಿವೃತ್ತ ಪ್ರಾಂಶುಪಾಲರಾದ- ಶ್ರೀಯುತ ರವಿ, ಉಪ ಪ್ರಾಂಶುಪಾಲರಾದ ಶ್ರೀ. ಜಾನ್ಸನ್ ಪಿ ಜೇಮ್ಸ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...