Vartha Ilakhe Shivamogga ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2023-24ನೇ ಸಾಲಿನ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆಯಡಿ ಜಿಲ್ಲಾ ಕಚೇರಿಯಲ್ಲಿ ಕ್ಷೇತ್ರ ಪ್ರಚಾರ ಕಾರ್ಯಕ್ರಮ ಹಾಗೂ ಮಾಧ್ಯಮ ಚಟುವಟಿಕೆಗಳ ನಿರ್ವಹಣೆ ಕುರಿತು ತರಬೇತಿ ಪಡೆಯಲಿಚ್ಚಿಸುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ದಿನಾಂಕವನ್ನು ಡಿ. 28ರವರೆಗೆ ವಿಸ್ತರಿಸಲಾಗಿದೆ.
ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಯು ಪತ್ರಿಕೋದ್ಯಮ ಹಾಗೂ ಮಾಧ್ಯಮ ಕ್ಷೇತ್ರದ ವಿಷಯದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದವರಾಗಿರಬೇಕು. ಕನ್ನಡ, ಇಂಗ್ಲೀಷ್ ಭಾಷೆಯ ಓದು ಮತ್ತು ಬರಹ ಬಲ್ಲವರಾಗಿದ್ದು, ಕಂಪ್ಯೂಟರ್ ಜ್ಞಾನ ಹೊಂದಿದವರಾಗಿರಬೇಕು.
ಜನವರಿ-2024 ರಿಂದ ಡಿಸೆಂಬರ್-2024ರವರೆಗಿನ 12 ತಿಂಗಳ ತರಬೇತಿ ಇದಾಗಿದ್ದು, ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 15,000/-ರೂ.ಗಳ ಶಿಷ್ಯವೇತನ ನೀಡಲಾಗುವುದು.
Vartha Ilakhe Shivamogga ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆಯವರಾಗಿರಬೇಕು. ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ನೆರೆಯ ಜಿಲ್ಲೆಯ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು. ಈ ಹಿಂದೆ ಅರ್ಜಿ ಸಲ್ಲಿಸಿ, ಆಯ್ಕೆಯಾಗಿ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಅವಕಾಶವಿರುವುದಿಲ್ಲ.
ಅರ್ಹರು ತಮ್ಮ ಸ್ವವಿವರ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ದಿ:27-12-2023ರೊಳಗಾಗಿ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸರ್.ಎಂ.ವಿ.ರಸ್ತೆ, ಶಿವಮೊಗ್ಗ-577201 ವಿಳಾಸಕ್ಕೆ ಸಲ್ಲಿಸಬಹುದಾಗಿದೆ.