Saturday, December 6, 2025
Saturday, December 6, 2025

Shivamogga Rangayana ಶಿವಮೊಗ್ಗ ರಂಗಾಯಣದಲ್ಲಿ ರಂಗ ಕಲಾವಿದರಿಗೆ ನಾಟಕ ಸಿದ್ಧತಾ ಶಿಬಿರಕ್ಕೆ ಅರ್ಹರಿಂದ ಅರ್ಜಿ ಆಹ್ವಾನ

Date:

Shivamogga Rangayana ಶಿವಮೊಗ್ಗ ರಂಗಾಯಣವು ರಂಗಚಟುವಟಿಕೆಗಳನ್ನು ನಿರಂತರವಾಗಿ ನಡೆಸುತ್ತಾ ಬಂದಿದ್ದು ರಂಗ ಕಲೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ನುರಿತ ರಂಗ ನಿರ್ದೇಶಕರಿಂದ ರಂಗ ಕಲಾವಿದರಿಗಾಗಿ ನಾಟಕ ಸಿದ್ದತಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಶಿಬಿರದಲ್ಲಿ ಹೊಸ ನಾಟಕವನ್ನು ಶಿಬಿರಾರ್ಥಿಗಳಿಂದ ಸಿದ್ದಪಡಿಸಲಾಗುವುದು. ಸಿದ್ದಗೊಂಡ ನಾಟಕ ಪ್ರದರ್ಶನವನ್ನು ರಂಗಾಯಣ, ಶಿವಮೊಗ್ಗದಲ್ಲಿ ಹಾಗೂ ರಾಜ್ಯದ ವಿವಿಧ ಭಾಗಗಳಲ್ಲಿ ಕನಿಷ್ಟ 05 ಪ್ರದರ್ಶನಗಳನ್ನು ಏರ್ಪಡಿಸಲಾಗುವುದು. ಈ ಶಿಬಿರವು ಜನವರಿ 2024 ರ ಮಾಹೆಯಲ್ಲಿ 20 ದಿನಗಳವರೆಗೆ ಬೆಳಗ್ಗಿನಿಂದ ಸಂಜೆವರೆಗೆ ಪೂರ್ಣಾವಧಿ ತರಬೇತಿ ನಡೆಯುತ್ತದೆ.

Shivamogga Rangayana ಶಿಬಿರಾರ್ಥಿಗಳ ವಯಸ್ಸು ಕನಿಷ್ಟ 20 ರಿಂದ ಗರಿಷ್ಟ 40 ದೊಳಗಿರಬೇಕು. ಆಯ್ಕೆಯಾದ ಶಿಬಿರಾರ್ಥಿಗಳಿಗೆ ರೂ.12,000 ಗಳ ಗೌರವ ಸಂಭಾವನೆ ಹಾಗೂ ಮಧ್ಯಾಹ್ನದ ಸಾಮಾನ್ಯ ಊಟ, ಸಂಜೆ ಸ್ನ್ಯಾಕ್ಸ್, ಚಹಾ ಒದಗಿಸಲಾಗುವುದು. 12 ಜನ ಅಭ್ಯರ್ಥಿಗಳಿಗೆ ಅವಕಾಶವಿದೆ. 20 ದಿನಗಳು ನಿರಂತರವಾಗಿ ಶಿಬಿರ ನಡೆಲಿದೆ. ರಂಗಾಯಣದ ನಿಬಂಧನೆ ಹಾಗೂ ಷರತ್ತುಗಳಿಗೆ ಒಳಪಟ್ಟು ಆಸಕ್ತ ಕಲಾವಿದರು ಬಿಳಿ ಹಾಳೆಯಲ್ಲಿ ಸ್ವ-ವಿವರದೊಂದಿಗೆ ದಿ: 05-01-2024 ರೊಳಗೆ ಆಡಳಿತಾಧಿಕಾರಿಗಳು, ರಂಗಾಯಣ, ಹೆಲಿಪ್ಯಾಡ್ ಹಿಂಭಾಗ, ಅಶೋಕನಗರ, ಶಿವಮೊಗ್ಗ-577201 ಇಲ್ಲಿಗೆ ಖುದ್ದಾಗಿ, ಅಂಚೆ ಮೂಲಕ ಅಥವಾ ಇ-ಮೇಲ್ admn.rangayanashivamogga@gmail.comಮೂಲಕ ಕಳುಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಕಚೇರಿ ದೂ.ಸಂ: 08182-256353, 7975229166 ನ್ನು ಸಂಪರ್ಕಿಸಬಹುದೆಂದು ರಂಗಾಯಣದ ಆಡಳಿತಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...