Monday, November 25, 2024
Monday, November 25, 2024

Department of Industries and Commerce ಸಣ್ಣ ಕೈಗಾರಿಕೆಗಳಿಗೆ ಪ್ರೋತ್ಸಾಹ ಅಗತ್ಯ -ಎಸ್.ರುದ್ರೇಗೌಡ

Date:

Department of Industries and Commerce ಅಂತರಾಷ್ಟ್ರೀಯ ಮಟ್ಟದಲ್ಲಿ ಉತ್ಪನ್ನಗಳನ್ನು ಸರಬರಾಜು ಮಾಡುವ ಶಕ್ತಿ ಹೊಂದಿರುವ ಜಿಲ್ಲೆ ಶಿವಮೊಗ್ಗ ಆಗಿದ್ದು, ಹೊಸ ಕೈಗಾರಿಕೆಗಳಿಗೆ ಹೆಚ್ಚಿನ ಅವಕಾಶ ನೀಡುವ ಮೂಲಕ ಪ್ರೋತ್ಸಾಹಿಸುವ ಅಗತ್ಯವಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ಹೇಳಿದರು.
ಸಿಡ್ಬಿ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಹಾಗೂ ಕಾಸಿಯಾ ಸಂಯುಕ್ತ ಆಶ್ರಯದಲ್ಲಿ ಶಿವಮೊಗ್ಗ ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ಆಯೋಜಿಸಿದ್ದ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಸವಲತ್ತುಗಳು ಹಾಗೂ ಹಣಕಾಸಿನ ನೆರವು ಅರಿವು ಕಾರ್ಯಕ್ರಮದಲ್ಲಿ ಸಮಾರೋಪದಲ್ಲಿ ಮಾತನಾಡಿದರು.
ರೈಲ್ವೇ, ಏರೋನಾಟಿಕ್ಸ್ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಶಿವಮೊಗ್ಗದಿಂದ ಆಟೋಮೊಬೈಲ್ ಉತ್ಪನ್ನಗಳು ಸರಬರಾಜು ಆಗುತ್ತಿದ್ದು, ಇನ್ನಷ್ಟು ಶಕ್ತಿ ಬೇಕಿದೆ. ಹೊಸ ಕೈಗಾರಿಕೆಗಳಿಗೆ ಸ್ಥಳದ ಕೊರತೆ ನೀಗಿಸಿ ಯುವ ಉತ್ಸಾಹಿಗಳಿಗೆ ಕೈಗಾರಿಕೆ ಆರಂಭಿಸಲು ಪ್ರೋತ್ಸಾಹ ನೀಡಬೇಕು. ಶಿವಮೊಗ್ಗ ಜಿಲ್ಲೆಯಲ್ಲಿ ಕೈಗಾರಿಕೆಗಳಿಗೆ ಹೆಚ್ಚಿನ ಬೆಂಬಲ ನೀಡಬೇಕು ಎಂದು ತಿಳಿಸಿದರು.
ಕಾಸಿಯಾ ಅಧ್ಯಕ್ಷ ಸಿ.ಎ.ಶಶಿಧರ ಶೆಟ್ಟಿ ಮಾತನಾಡಿ, ಎರಡು ದಿನಗಳ ಮಾರಾಟಗಾರರ ಅಭಿವೃದ್ಧಿ ಕಾರ್ಯಕ್ರಮ ಹಾಗೂ ಕೈಗಾರಿಕಾ ವಸ್ತು ಪ್ರದರ್ಶನ ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ಪ್ರಥಮ ಬಾರಿಗೆ ಶಿವಮೊಗ್ಗದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಎಲ್ಲ ಕೈಗಾರಿಕಾ ಉದ್ಯಮಿಗಳು, ವ್ಯಾಪಾರಸ್ಥರು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು ಎಂದರು.
ಕೈಗಾರಿಕಾ ತರಬೇತಿ ಶಿಬಿರಗಳಲ್ಲಿ ಭಾಗವಹಿಸುವುದರಿಂದ ಹೊಸ ಉದ್ಯಮಿಗಳಾಗಲು ಆತ್ಮವಿಶ್ವಾಸದ ಜೊತೆಗೆ ಒಳ್ಳೆಯ ತರಬೇತಿ ಸಿಗುತ್ತದೆ. ನಮ್ಮ ಸಂಸ್ಥೆಗಳು ಇರುವುದೇ ಹೊಸ ಹೊಸ ಉದ್ಯಮಗಳನ್ನು ಪ್ರಾರಂಭಿಸಲು ಉದ್ಯಮಶೀಲ ತರಬೇತಿಗಳನ್ನು ನೀಡುವುದೇ ಆಗಿದೆ ಎಂದು ಹೇಳಿದರು.
Department of Industries and Commerce ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ, ಮಾಚೇನಹಳ್ಳಿ ಕೈಗಾರಿಕಾ ಸಂಸ್ಥೆ, ಯೂನಿಯನ್ ಬ್ಯಾಂಕ್ ಹಾಗೂ ವಿವಿಧ ಸಂಘಟನೆಗಳು ಸಹಕಾರ ನೀಡಿದ್ದವು. ಇದೇ ಸಂದರ್ಭದಲ್ಲಿ ಕೈಗಾರಿಕಾ ವಸ್ತು ಪ್ರದರ್ಶನ ಮಳಿಗೆಯವರಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.
ಪ್ರಮುಖರಾದ ಡಿ.ಎಂ.ಶಂಕರಪ್ಪ, ಎಚ್.ಕೆ.ಮಲ್ಲೇಶ್ ಗೌಡ, ಜಿ.ವಿಜಯ್‌ಕುಮಾರ್, ರಮೇಶ್ ಹೆಗ್ಡೆ, ಎಂ.ಜಿ.ರಾಜಗೋಪಾಲ್, ಜಿ.ವಿ.ಕಿರಣ್‌ಕುಮಾರ್, ವಿಶ್ವೇಶ್ವರಯ್ಯ, ದಿನೇಶ್ ಮತ್ತಿತರರು ಉಪಸ್ಥಿತರಿದ್ದ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

COSMO Club Shivamogga ಅಧ್ಯಯನಶೀಲ ತತ್ವದತ್ತ ಮುನ್ನಡೆದು ಸಮರ್ಥ ಸಮಾಜಕ್ಕೆ ದೀಪವಾಗೋಣ- ರಂಜಿನಿ ದತ್ತಾತ್ರಿ

COSMO Club Shivamogga ನಮ್ಮ ನಿಮ್ಮ ನಗುವಿಗೊಂದು ದೀಪ, ಸಂತಸದ ಬೆಳಕಿಗೊಂದು...

MESCOM ನವೆಂಬರ್ 27. ಎಂ.ಆರ್.ಎಸ್. ನಲ್ಲಿ ತ್ರೈಮಾಸಿಕ ನಿರ್ವಹಣೆ. ಶಿವಮೊಗ್ಗದ ಬಹುಪಾಲು ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

MESCOM ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ...