Wednesday, October 2, 2024
Wednesday, October 2, 2024

ಯುವಸಬಲೀಕರಣ: ಕೋಡ್ ಉನ್ನತಿ ಉಪಕ್ರಮ

Date:

ರಾಜ್ಯದಲ್ಲಿ ಯುವಜನ ಸಬಲೀಕರಣ ಮತ್ತು ಮಹಿಳಾ ಉದ್ಯಮಶೀಲತೆಯನ್ನು ಸಾಧಿಸುವ ಮಹತ್ತ್ವಾಕಾಂಕ್ಷೆಯನ್ನುಳ್ಳ `ಕೋಡ್ ಉನ್ನತಿ’ ಉಪಕ್ರಮಕ್ಕೆ ಐಟಿ, ಬಿಟಿ ಮತ್ತು ಕೌಶಲ್ಯ ಪೂರೈಕೆ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಯೋಜನೆಯ ಅಂಗವಾಗಿ ವಿಶ್ವಸಂಸ್ಥೆ ಅಭಿವೃದ್ಧಿ ಕಾರ್ಯಕ್ರಮ (ಯುಎನ್ ಡಿಪಿ) ಮತ್ತು ರಾಜ್ಯ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳು ಒಡಂಬಡಿಕೆಗೆ ಸಹಿ ಹಾಕಿದವು.

ಇದರ ಅಂಗವಾಗ ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು ಕೋಡ್ ಉನ್ನತಿ’ ಯೋಜನೆಯು ಮೊದಲಿಗೆ ಬೆಂಗಳೂರು ಗ್ರಾಮಾಂತರ, ರಾಮನಗರ, ದಕ್ಷಿಣ ಕನ್ನಡ ಮತ್ತು ರಾಯಚೂರು ಜಿಲ್ಲೆಗಳಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಘಟಕಗಳ ಮೂಲಕ ಜಾರಿಗೆ ಬರಲಿದೆ. ನಂತರ ಉಳಿದ ಜಿಲ್ಲೆಗಳಿಗೆ ವಿಸ್ತರಣೆಗೊಳ್ಳಲಿರುವ ಈ ಯೋಜನೆಗೆಸಿಸ್ಟಮ್ಸ್, ಅಪ್ಲಿಕೇಶನ್ಸ್ ಅಂಡ್ ಪ್ರಾಡಕ್ಟ್ಸ್ ಇನ್ ಡೇಟಾ ಪ್ರೋಸೆಸಿಂಗ್’ ಪ್ರಯೋಗಾಲಯ (ಸ್ಯಾಪ್ ಲ್ಯಾಬ್ಸ್ ಇಂಡಿಯಾ) ನೆರವು ನೀಡಲಿದೆ ಎಂದರು.

ಯೋಜನೆಯ ಗುರಿಗಳನ್ನು ತಲುಪಲು ರಾಜ್ಯದಲ್ಲಿ ಈಗಾಗಲೇ 50 ಸರಕಾರಿ ಪದವಿಪೂರ್ವ, ಐಟಿಐ, ಪಾಲಿಟೆಕ್ನಿಕ್, ಕಲಾ ಮತ್ತು ವಿಜ್ಞಾನ ಕಾಲೇಜುಗಳನ್ನು ಗುರುತಿಸಲಾಗಿದೆ. ಮೊದಲ ಹೆಜ್ಜೆಯಾಗಿ 100 ಜನ ಎನ್ಎಸ್ಎಸ್ ಅಧಿಕಾರಿಗಳಿಗೆ ಉದ್ಯೋಗ ಮಾಹಿತಿ, ವೃತ್ತಿ ಮಾರ್ಗದರ್ಶನ, ಕೌನ್ಸೆಲಿಂಗ್, ಡಿಜಿಟಲ್ ಕೌಶಲಗಳಿಗೆ ಸಂಬಂಧಿಸಿದಂತೆ 3 ದಿನಗಳ ತರಬೇತಿ ಕೊಡಲಾಗುವುದು. ನಂತರ, ಎರಡು ಶೈಕ್ಷಣಿಕ ವರ್ಷಗಳ ಅವಧಿಯಲ್ಲಿ ಈ ಕಾಲೇಜುಗಳಲ್ಲಿ ಓದುತ್ತಿರುವ 20 ಸಾವಿರ ವಿದ್ಯಾರ್ಥಿಗಳಿಗೆ 200 ಗಂಟೆಗಳ ಕಾಲದ ಡಿಜಿಟಲ್ ಕೌಶಲ್ಯ ತರಬೇತಿ ನೀಡಲಾಗುವುದು ಎಂದು ಅವರು ತಿಳಿಸಿದರು.

3,000 ವಿದ್ಯಾರ್ಥಿಗಳಿಗೆ ಉದ್ಯಮಶೀಲತೆಯ ಬಗ್ಗೆ ಜಾಗೃತಿ ಮೂಡಿಸುವ ತರಬೇತಿಯನ್ನು ಏರ್ಪಡಿಸಲಾಗುವುದು. ಈ ಮೂಲಕ ವಿದ್ಯಾರ್ಥಿಗಳಲ್ಲಿರುವ ಆಸಕ್ತಿಗಳನ್ನು ನಿಖರವಾಗಿ ತಿಳಿದುಕೊಳ್ಳಲಾಗುವುದು. ತರಬೇತಿಯ ಬಳಿಕ ವಿದ್ಯಾರ್ಥಿಗಳು ತಮಗಿರುವ ಉದ್ಯಮಶೀಲತೆಯ ಯೋಜನೆಗಳನ್ನು ಪರಿಣತರ ತಂಡಕ್ಕೆ ಸಲ್ಲಿಸಿ, ಸೂಕ್ತ ಮಾರ್ಗದರ್ಶನ ಪಡೆಯಲು `ಬೂಟ್ ಕ್ಯಾಂಪಸ್’ ಎನ್ನುವ ಕಾರ್ಯಕ್ರಮವನ್ನೂ ಈ ಯೋಜನೆಯಲ್ಲಿ ಅಳವಡಿಸಲಾಗಿದೆ ಎಂದು ಅವರು ವಿವರಿಸಿದರು.

ರಾಜ್ಯದಲ್ಲಿ ಯುವಜನ ಸಬಲೀಕರಣವನ್ನು ಸಾಕಾರಗೊಳಿಸುವ ಉದ್ದೇಶದಿಂದ ಈಗಾಗಲೇ `ಕರ್ನಾಟಕ ರಾಜ್ಯ ಕೌಶಲ್ಯ ಮತ್ತು ಉದ್ಯಮಶೀಲತಾ ಕಾರ್ಯಪಡೆ’ಯನ್ನು ರಚಿಸಲಾಗಿದ್ದು, ಶಿಕ್ಷಣ, ಕೃಷಿ ಮುಂತಾದ 20 ಇಲಾಖೆಗಳನ್ನು ಒಂದೇ ಸೂತ್ರದಡಿ ತರಲಾಗಿದೆ. ಈ ಮೂಲಕ ಮುಂಬರುವ ವರ್ಷಗಳಲ್ಲಿ ಒಂದು ಕೋಟಿ ಉದ್ಯೋಗಗಳನ್ನು ಸೃಷ್ಟಿಸುವ ಸಂಕಲ್ಪ ಸರಕಾರದ್ದಾಗಿದೆ ಎಂದು ಅಶ್ವತ್ಥನಾರಾಯಣ ತಿಳಿಸಿದರು.

ಕಾರ್ಯಕ್ರಮದಲ್ಲಿ ಯುಎನ್ ಡಿಪಿ ಇಂಡಿಯಾದ ಮುಖ್ಯಸ್ಥ ಅಮಿತ್ ಕುಮಾರ್, ಸ್ಯಾಪ್ ಲ್ಯಾಬ್ಸ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕಿ ಸಿಂಧೂ ಗಂಗಾಧರನ್, ಕೌಶಲ್ಯಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಎಸ್. ಸೆಲ್ವಕುಮಾರ್, ಕೌಶಲ್ಯಾಭಿವೃದ್ಧಿ ನಿಗಮದ ವ್ಯವಸ್ತಾಪಕ ನಿರ್ದೇಶಕ ಅಶ್ವಿನ್ ಗೌಡ, ಯೋಜನೆ ಮತ್ತು ಅಂಕಿಅಂಶ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber Of Commerce ಗಾಂಧೀಜಿ & ಶಾಸ್ತ್ರೀಜಿ ಯುವಜನರಿಗೆ ಆದರ್ಶ- ಚಂದ್ರಶೇಖರಯ್ಯ

Chamber Of Commerce ಗಾಂಧೀಜಿ ಅವರ ತತ್ವ ಆದರ್ಶಗಳು ಎಲ್ಲರಿಗೂ ಮಾರ್ಗದರ್ಶನ...

Gangotri College ವಿದ್ಯಾರ್ಥಿಗಳು ಶಿಕ್ಷಣದ ಸಂಗಡ ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು- ಶ್ರೀ ಚನ್ನಬಸವಶ್ರೀ

Gangotri College ಗ್ರಾಮೀಣ ಪ್ರದೇಶದ ಜನರ ಜೀವನ ಕ್ರಮ ಅರಿಯುವ ಜೊತೆಗೆ...

CM Siddharamaih ಸಿದ್ಧರಾಮಯ್ಯ ರಾಜಿನಾಮೆ ಬೇಡ.ಬೆಂಬಲಿಸಿ ಜನಜಾಥಾ-‘ಅಹಿಂದ’ ಮಹೇಶ್

CM Siddharamaih ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವುದು ಬೇಡ....