S.N. Channabasappa ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಆಯೋಜಿಸಿದ್ದ ವಿಕಸಿತ ಭಾರತ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿ, ಫಲಾನುಭವಿಗಳಿಗೆ ಉಜ್ವಲಾ ಯೋಜನೆಯಡಿ ಉಚಿತ ಎಲ್.ಪಿ.ಜಿ. ಸಂಪರ್ಕ, ಗ್ಯಾಸ್ ಸ್ಟೋವ್ ವಿತರಣೆ ಮಾಡಿದರು.
SN Channabasappa ಕೇಂದ್ರದ ಮುದ್ರಾ, ಜನಧನ್, ಪಿ.ಎಂ.ವಿಶ್ವಕರ್ಮ, ಉಜ್ವಲ ಸೇರಿದಂತೆ ವಿವಿಧ ಯೋಜನೆಗಳ ಮಾಹಿತಿಯನ್ನು ಎಲ್‌ಇಡಿ ವಾಹನಗಳ ಮೂಲಕ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಿ ಜನರಿಗೆ ಜಾಗೃತಿ ಮೂಡಿಸುವ ಮೂಲಕ ಸರ್ಕಾರದ ಯೋಜನೆಗಳ ಲಾಭ ಪಡೆದ ಫಲಾನುಭವಿಗಳನ್ನು ಒಗ್ಗೂಡಿಸಿ, ಈ ಯೋಜನೆಗಳಿಂದ ವಂಚಿತರಾದ ಫಲಾನುಭವಿಗಳಿಗೆ ಅದರ ಲಾಭ ಸಿಗುವಂತೆ ಮಾಡುವ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಅಧಿಕಾರಿಗಳಿಗೆ ಸೂಚಿಸಿ, ಸಾರ್ವಜನಿಕರು ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳಲು ಮನವಿ ಮಾಡಿದರು.

