Friday, August 14, 2026
Friday, August 14, 2026

Gruhakshmi Yojana ಶಿವಮೊಗ್ಗ ಜಿಲ್ಲಾ ಪಂಚಾಯತ್ ನಿಂದ ಗ್ರಾಮ ಪಂಚಾಯತ್ ಗಳಲ್ಲಿ ಗೃಹಲಕ್ಷ್ಮಿ ಯೋಜನೆ ಸಂಬಂಧಿತ ಸಮಸ್ಯೆಗಳ ಪರಿಹಾರಕ್ಕೆ ಕ್ಯಾಂಪ್ ಆಯೋಜನೆ

Date:

Gruhakshmi Yojana ಶಿವಮೊಗ್ಗ ಜಿಲ್ಲಾ ಪಂಚಾಯಿತಿಯು ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಸಮಸ್ಯೆಗಳನ್ನು ಪರಿಹರಿಸಲು ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಡಿ. 27 ರಿಂದ ಡಿ. 29 ರವರೆಗೆ ಬೆಳಗ್ಗೆ 9.00 ರಿಂದ ಸಂಜೆ 5.00 ರವರೆಗೆ ಕ್ಯಾಂಪ್‍ಗಳನ್ನು ಆಯೋಜಿಸಿದೆ.

ಈ ಕ್ಯಾಂಪ್‍ನಲ್ಲಿ ಸ್ಥಳೀಯ ಬಾಪೂಜಿ ಸೇವಾ ಕೇಂದ್ರದ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತರು, ಇ.ಡಿ.ಸಿ.ಎಸ್. ತಂಡ ಹಾಗೂ ಇಂಡಿಯ ಪೋಸ್ಟ್ ಪೇಮಂಟ್ ಬ್ಯಾಂಕ್ ಪ್ರತಿನಿಧಿಗಳು ಮತ್ತು ಇತರೆ ಬ್ಯಾಂಕ್ ಪ್ರತಿನಿಧಿಗಳು ಭಾಗವಹಿಸಲಿದ್ದು, ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ, ಹೊಸ ಖಾತೆ ತೆರೆಯುವುದು, ಇ-ಕೆವೈಸಿ ಅಪ್‍ಡೆಟ್ ಮಾಡುವುದು, ಗೃಹಲಕ್ಷ್ಮೀ ಅರ್ಜಿ ಸ್ಥಿತಿ ಪರಿಶೀಲಿಸುವುದು ಹಾಗೂ ಇದಕ್ಕೆ ಸಂಬಂಧಿಸಿದ ಇತರೆ ಸಮಸ್ಯೆಗಳನ್ನು ಪರಿಹರಿಸಲಿದ್ದಾರೆ.

ಈ ಸಂಬಂಧ ಹೆಚ್ಚಿನ ಮಾಹಿತಿಗಾಗಿ ತಾಲೂಕು ಶಿಶು ಅಭಿವೃದ್ಧಿ ಯೋಜನಾ ಕಚೇರಿಗೆ ಹಾಗೂ ಕ್ಷೇತ್ರ ಮಟ್ಟದಲ್ಲಿ ಗ್ರಾಮ ಪಂಚಾಯಿತಿ ಮತ್ತು ಅಂಗನವಾಡಿ ಕಾರ್ಯಕರ್ತೆಯರನ್ನು ಸಂಪರ್ಕಿಸುವಂತೆ ಜಿಲ್ಲಾ ಪಂಚಾಯತಿ ಸಿಇಓ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...