Election Commission of India ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2024ರ ವೇಳಾಪಟ್ಟಿಯನ್ನು ಪರಿಷ್ಕೃತಗೊಳಿಸಿ ಅವಧಿ ವಿಸ್ತರಣೆ ಮಾಡಿದೆ.
ಈ ಅವಧಿಯಲ್ಲಿ ಸ್ವೀಕರಿಸಲಾದ ಎಲ್ಲಾ ಆಕ್ಷೇಪಣೆಗಳನ್ನು ಇತ್ಯರ್ಥಗೊಳಿಸಿ ಜನವರಿ 22, 2024 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ