Tuesday, October 1, 2024
Tuesday, October 1, 2024

DVS College ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಅತ್ಯುತ್ತಮ ಸಾಧನೆಮಾಡುತ್ತಿದೆ- ಟಿ.ಎಸ್.ಶಿವಪ್ರಸಾದ್

Date:

DVS College ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ‌‌ ದೇಶ ಅತ್ತ್ಯುತ್ತಮ ಸಾಧನೆ ಮಾಡುತ್ತಿದ್ದು, ಬಾಹ್ಯಾಕಾಶ ಹಾಗೂ ತಂತ್ರಜ್ಞಾನದ ಪ್ರಯೋಜನ ಪ್ರತಿಯೊಬ್ಬರಿಗೂ ಲಭಿಸುತ್ತಿದೆ ಎಂದು ಇಸ್ರೋ ಹಿರಿಯ ವಿಜ್ಞಾನಿ ಟಿ.ಎಸ್.ಶಿವಪ್ರಸಾದ್ ಹೇಳಿದರು.

ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಸಂಯುಕ್ತ ಪದವಿಪೂರ್ವ ಕಾಲೇಜಿನ ( ಪ್ರೌಢಶಾಲಾ ವಿಭಾಗ ) ವತಿಯಿಂದ ಆಯೋಜಿಸಿದ್ದ 2023-24ನೇ ಶೈಕ್ಷಣಿಕ ಸಾಲಿನ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ “ಚಂದ್ರಯಾನ 3″‌ ವಿಷಯ ಕುರಿತು ಮಾತನಾಡಿದರು.

ಇಸ್ರೋ ಮಹತ್ವಾಕಾಂಕ್ಷೆ ಯೋಜನೆ ಚಂದ್ರಯಾನ 3 ಯಶಸ್ವಿಯಾಗಿಸುವ ಮೂಲಕ ಭಾರತ ದೇಶ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ‌ ದಾಖಲೆ ಬರೆಯಿತು. ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡರ್ ಇಳಿಸಿದ ಮೊದಲ ದೇಶ ಎನ್ನುವ ಹೆಗ್ಗಳಿಕೆ ಭಾರತದ್ದು. ಇದು ಪ್ರತಿಯೊಬ್ಬ ಭಾರತೀಯರಿಗೂ ಅತ್ಯಂತ ಸಂತಸದ ಕ್ಷಣ ಆಗಿತ್ತು. 23 ಆಗಸ್ಟ್ 2023 ಭಾರತದ ಪಾಲಿಗೆ ಐತಿಹಾಸಿಕ ದಿನ ಎಂದು ತಿಳಿಸಿದರು.

ಡಿವಿಎಸ್ ಸಂಸ್ಥೆಯಲ್ಲಿ ಅಧ್ಯಯನ ‌ನಡೆಸಲು‌‌‌ ಅವಕಾಶ ‌ಸಿಕ್ಕಿದ್ದು ನನ್ನ ಜೀವನದ ಪುಣ್ಯ. ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸಾಧನೆ‌ ಮಾಡಲು ಪ್ರೇರಣೆ ಡಿವಿಎಸ್. ಡಿಪ್ಲೋಮಾ ಶಿಕ್ಷಣದಲ್ಲಿ ರಾಜ್ಯ ಮಟ್ಟದಲ್ಲಿ ಮೊದಲ ಸ್ಥಾನ, ಇಂಜಿನಿಯರಿಂಗ್ ಶಿಕ್ಷಣ ದಲ್ಲಿ ಚಿನ್ನದ ಪದಕ ಪಡೆಯಲು ಶಕ್ತಿ‌ ನೀಡಿದ್ದು ಡಿವಿಎಸ್‌ ಸಂಸ್ಥೆ ಎಂದರು.

ದೇಶಿಯ ವಿದ್ಯಾಶಾಲಾ ಸಮಿತಿ ಉಪಾಧ್ಯಕ್ಷ ಎಸ್.ಪಿ.ದಿನೇಶ್ , ವಿದ್ಯಾರ್ಥಿಗಳು ಸಕಾರಾತ್ಮಕ ಆಲೋಚನೆಯಿಂದ ಅಧ್ಯಯನ ನಡೆಸುವ ಜತೆಯಲ್ಲಿ ಉತ್ತಮ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಗುರಿಯನ್ನು ಸಾಧಿಸಲು ಶಿಕ್ಷಣ ಹಂತದಿಂದಲೇ ಪ್ರಯತ್ನ ಆರಂಭಿಸಬೇಕು ಎಂದು ಹೇಳಿದರು.

ಚಂದ್ರಯಾನ 3 ರಲ್ಲಿ ದೇಶಿಯ ವಿದ್ಯಾಶಾಲಾ ವಿದ್ಯಾರ್ಥಿಗಳು ಭಾಗಿಯಾಗಿರುವುದು ನಮ್ಮೆಲ್ಲರ ಹೆಮ್ಮೆ. ಡಿವಿಎಸ್ ಸಂಸ್ಥೆಯಲ್ಲಿ ಅಧ್ಯಯನ ನಡೆಸಿದ ನೂರಾರು ವಿದ್ಯಾರ್ಥಿಗಳು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಉನ್ನತ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡಾ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಶ್ರೇಷ್ಠ ‌ಸಾಧನೆ‌ ಮಾಡಿದ್ದಾರೆ ಎಂದು ತಿಳಿಸಿದರು.

DVS College ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗ ಉಪಪ್ರಾಚಾರ್ಯ ಸಿ.ಕೆ.ಶ್ರೀಧರ್ ಮಾತನಾಡಿ, ನಮ್ಮ ಡಿವಿಎಸ್ ಶಾಲೆಯ ವಿದ್ಯಾರ್ಥಿ ಟಿ.ಎಸ್.ಶಿವಪ್ರಸಾದ್ ಅವರು ಚಂದ್ರಯಾನ 3 ರಲ್ಲಿ ಮುಖ್ಯ ಪಾತ್ರ ವಹಿಸಿದ್ದು, ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ ಎಂದು ತಿಳಿಸಿದರು.

ದೇಶಿಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಎನ್‌.ರುದ್ರಪ್ಪ ಕೊಳಲೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ದೇಶಿಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್.ರಾಜಶೇಖರ್, ಸಹ ಕಾರ್ಯದರ್ಶಿ ಡಾ. ಎ.ಸತೀಶ್ ಕುಮಾರ್ ಶೆಟ್ಟಿ ಮಾತನಾಡಿದರು.

ದೇಶಿಯ ವಿದ್ಯಾಶಾಲಾ ಸಮಿತಿ ಖಜಾಂಚಿ ಬಿ.ಗೋಪಿನಾಥ್, ಡಿವಿಎಸ್ ಸ್ವತಂತ್ರ ಪಿಯು ಕಾಲೇಜಿನ ಪ್ರಾಚಾರ್ಯ ಎ.ಇ.ರಾಜಶೇಖರ್, ಎ.ಟಿ.ಪದ್ಮೇಗೌಡ, ಜಿ.ಎಸ್.ವೆಂಕಟೇಶ್, ಆರ್.ಗಾಯತ್ರಿ,‌ ಜಿ.ಆರ್.ಪ್ರಸನ್ನಕುಮಾರ್, ಎನ್.ಡಿ.ಪದ್ಮಶ್ರೀ, ಜ್ಯೋತಿ.ಎನ್.ಎಸ್., ಪ್ರಾಧ್ಯಾಪಕರು, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...