Saturday, December 6, 2025
Saturday, December 6, 2025

National Service Scheme ವಿದ್ಯಾರ್ಥಿಗಳು ಹೆಚ್ಚು ಧೈರ್ಯವಂತರಾಗಬೇಕು-ಡಾ.ವಿಕ್ರಂ ಅಮಟೆ

Date:

National Service Scheme ವಿದ್ಯಾರ್ಥಿಗಳು ಹೆಚ್ಚು ಧೈರ್ಯವಂತರಾಗಬೇಕು, ವಿನಯವಂತರಾಗಬೇಕು ಮಾತ್ರವಲ್ಲದೆ ಓದುತ್ತಿರುವ ಸಂಸ್ಥೆಯ ಬಗ್ಗೆ ಅಪಾರ ಗೌರವವನ್ನು ಹೊಂದುವ ಮೂಲಕ ಬದುಕನ್ನು ಮೌಲ್ಯಯುತವಾಗಿ ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ. ವಿಕ್ರಮ ಅಮಟೆ ಹೇಳಿದರು.

ಚಿಕ್ಕಮಗಳೂರು ನಗರದ ಮಲೆನಾಡು ವಿದ್ಯಾಸಂಸ್ಥೆಯಲ್ಲಿ ಎಂ.ಎಸ್.ಪದ್ಮಾವತಮ್ಮ ಎಂ.ಕೆ.ಸಾಂಬಶಿವಶೆಟ್ಟಿ ಪ್ರಥಮ ದರ್ಜೆ ಕಾಲೇಜು ಸ್ನಾತಕೋತ್ತರ ವಿಭಾಗದ ೨೦೨೩-೨೪ನೇ ಸಾಲಿನ ವಿದ್ಯಾರ್ಥಿ ಸಂಘ, ರಾಷ್ಟ್ರೀಯ ಸೇವಾ ಯೋಜನೆ, ರೆಡ್‌ಕ್ರಾಸ್ ಘಟಕ ಹಾಗೂ ಪೋರಮ್ ಕಾರ್ಯಕ್ರಮವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

ಹೆತ್ತವರು ನಮ್ಮ ಜೀವನದಲ್ಲಿ ಬಹಳ ಮುಖ್ಯ. ಅಂತೆಯೇ ವಿದ್ಯೆಯನ್ನು ನೀಡಿದ ಗುರುಗಳನ್ನು ಅಪಾರವಾಗಿ ಗೌರವಿಸಬೇಕು. ಆಗ ನಮ್ಮ ವ್ಯಕ್ತಿತ್ವ ಉತ್ತಮ ರೀತಿಯನ್ನು ಬೆಳೆದುಕೊಳ್ಳುತ್ತದೆ ಎಂದರಲ್ಲದೆ ಸೋಲು ಮತ್ತು ಗೆಲುವು ಬದುಕಿನ ಭಾಗವೇ ಆಗಿದೆ. ಆದ್ದರಿಂದ ಅವೆರಡನ್ನೂ ಸಮಾನವಾಗಿ ಸ್ವೀಕರಿಸಿ ಮುಂದುವರಿಯಬೇಕು ಎಂದು ಸಲಹೆ ನೀಡಿದರು.

ಬದುಕು ಚಕ್ರದಂತೆ ಬದಲಾಗುತ್ತಲೇ ಇರುತ್ತದೆ. ಇಂತಹ ಚಲನಶೀಲ ಬದುಕಿನಲ್ಲಿ ಹೊಸತನಗಳು ಅವ್ಯಾ ಹತವಾಗಿ ರೂಪುಗೊಳ್ಳುತ್ತಲೇ ಇರಬೇಕು. ಆ ನಿಟ್ಟಿನಲ್ಲಿ ವಿದ್ಯಾರ್ಥಿ ಸಂಘವು ಹೆಜ್ಜೆ ಹಾಕುವ ಜೊತೆಗೆ ಸಮಾಜದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಆಸಕ್ತಿಯನ್ನು ಬೆಳೆಸಿದರೆ ಮಾತ್ರ ಯುವ ಸಮಾಜದ ಸದ್ಬಳಕೆಯಾಗಲು ಸಾಧ್ಯ ಎಂದು ಕಿವಿಮಾತು ಹೇಳಿದರು.
ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ಡಾ. ಡಿ.ಎಲ್.ವಿಜಯ್‌ಕುಮಾರ್ ಮಾತನಾಡಿ ವಿದ್ಯಾರ್ಥಿ ಸಂಘಕ್ಕೆ ಆಯ್ಕೆಯಾದ ಪ್ರತಿನಿಧಿಗಳು ತಮ್ಮ ಜವಾಬ್ಧಾರಿಯನ್ನು ಅರಿತುಕೊಂಡು ಮುನ್ನಡೆಯಬೇಕು. ಕಾಲೇಜಿನಲ್ಲಿ ವಿದ್ಯಾರ್ಥಿ ನಾಯಕರಾಗುವುದು ಬಹುದೊಡ್ಡ ಹೆಮ್ಮೆಯ ಸಂಗತಿ ಎಂದರಲ್ಲದೆ ವಿದ್ಯಾರ್ಥಿಗಳು, ಅಧ್ಯಾಪಕರು ಒಟ್ಟಾಗಿ ಕಾಲೇಜಿನ ಘನತೆಯನ್ನು ಎತ್ತರಿಸಬೇಕು ಎಂದರು.

National Service Scheme ವಿದ್ಯಾಸಂಸ್ಥೆ ಉಪಾಧ್ಯಕ್ಷೆ ರಾಧಾ ಸುಂದ್ರೇಶ್ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಕೆಲವು ಹಾಸ್ಟೆಲ್‌ಗಳಲ್ಲಿ ಡ್ರಗ್ಸ್ ಮಾಫಿಯಾಗಳ ಪ್ರಕರಣಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಇಂತಹ ಚಟುವಟಿಕೆಗಳಿಂದ ದೂರವಿರ ಬೇಕು. ಅದಲ್ಲದೇ ಸುತ್ತಮುತ್ತಲಿನ ಇಂತಹ ಸನ್ನಿವೇಶಗಳನ್ನು ಗಮನಿಸಿದರೆ ಪ್ರಶ್ನಿಸುವ ಜೊತೆಗೆ ಶಾಲೆಯ ಶಿಕ್ಷಕರಿಗೆ ತಿಳಿಸುವಂತಹ ಕೆಲಸ ಮಾಡಬೇಕು ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲೆ ಹಸೀನಾ ಭಾನು ಮಾತನಾಡಿ ಸಮಾಜದ ಯಾವುದೇ ಶಾಲೆ ಅಥವಾ ಕಾಲೇಜು ಗಳು ಪ್ರಗತಿ ಹೊಂದಲು ಮಕ್ಕಳಿಗೆ ವಿದ್ಯಾರ್ಥಿ ಸಂಘ ಅವಶ್ಯವಿದೆ. ಹಾಗಾಗಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಒಂದೇ ಕೊಂಡಿಯAತೆ ಕೆಲಸ ಮಾಡುವ ಜೊತೆಗೆ ಸಂಸ್ಥೆಯ ಕೀರ್ತಿಯನ್ನು ಬೆಳೆಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.

ವಿದ್ಯಾಸಂಸ್ಥೆ ಅಧ್ಯಕ್ಷ ಎನ್.ಕೇಶವಮೂರ್ತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದಕ್ಕೂ ಮುನ್ನ ೨೦೨೩-೨೪ನೇ ಸಾಲಿನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಲಾಯಿತು.

ಈ ಸಂದರ್ಭದಲ್ಲಿ ಮಲೆನಾಡು ವಿದ್ಯಾಸಂಸ್ಥೆ ಸಹ ಕಾರ್ಯದರ್ಶಿ ಎಸ್.ಶಂಕರನಾರಾಯಣಭಟ್, ದಾನಿಗಳಾದ ಎಂ.ಎಸ್.ಮಂಜುನಾಥ್ ಮತ್ತಿತರರು ಹಾಜರಿದ್ದರು.

ಪ್ರಥಮ ಬಿಎ ವಿದ್ಯಾರ್ಥಿ ಪ್ರಜಿತ್ ಪ್ರಾರ್ಥಿಸಿದರು. ವಿದ್ಯಾರ್ಥಿ ದರ್ಶನ್ ನಿರೂಪಿಸಿದರು. ಸಹ ಪ್ರಾಧ್ಯಾಪಕರಾದ ಸುದೀಪ್ ಸ್ವಾಗತಿಸಿದರು. ಶಗುಪ್ತಾ ನಬೀನ್ ವಂದಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...