Saturday, October 17, 2026
Saturday, October 17, 2026

Cultural Dance Competition ಕನ್ನಡ ಭಾಷೆಗೆ ಶ್ರೀಮಂತ ಸಾಹಿತ್ಯ ಸಾಂಸ್ಕೃತಿಕ ಪರಂಪರೆಯಿದೆ- ಜಿ.ವಿಜಯ್ ಕುಮಾರ್

Date:

Cultural Dance Competition ಕನ್ನಡ ಭಾಷೆಯು ಶ್ರೀಮಂತ ಸಾಹಿತ್ಯ ಸಾಂಸ್ಕೃತಿಕ ಪರಂಪರೆಯಾಗಿದ್ದು, ಐತಿಹಾಸಿಕವಾಗಿ ವಿಶೇಷ ಸ್ಥಾನಮಾನ ಹೊಂದಿದೆ. ಪ್ರತಿಯೊಬ್ಬರ ಮನೆಗಳಲ್ಲೂ ಕನ್ನಡ ಹೆಚ್ಚು ಬಳಸಬೇಕು ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್ ಹೇಳಿದರು.

ಶಿವಮೊಗ್ಗ ನಗರದ ಎನ್‌ಡಿವಿ ಹಾಸ್ಟೆಲ್ ಆವರಣದಲ್ಲಿ ನವಕರ್ನಾಟಕ ನಿರ್ಮಾಣ ವೇದಿಕೆ ಶಿವಮೊಗ್ಗ, ಜಿಲ್ಲಾ ಒಕ್ಕಲಿಗರ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ಸಾಧಕರಿಗೆ, ರೈತರಿಗೆ ಸನ್ಮಾನ, ಸಾಂಸ್ಕೃತಿಕ ನೃತ್ಯ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು.

ಕನ್ನಡ ಭಾಷೆ ಸಾವಿರಾರು ವರ್ಷಗಳ ಹಿನ್ನೆಲೆ ಹೊಂದಿರುವ ಪ್ರಾಚೀನ ಭಾಷೆಯಾಗಿದ್ದು, ಮಕ್ಕಳಿಗೆ ಪ್ರಾಥಮಿಕ ಶಿಕ್ಷಣ ಹಂತದಲ್ಲಿಯೇ ಕನ್ನಡ ಭಾಷೆಯ ಕಲಿಕೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಕನ್ನಡ ಭಾಷೆಯನ್ನು ಎಲ್ಲರೂ ತಪ್ಪದೇ ಬಳಸಬೇಕು ಎಂದು ತಿಳಿಸಿದರು.

ನವಕರ್ನಾಟಕ ನಿರ್ಮಾಣ ವೇದಿಕೆ ಅಧ್ಯಕ್ಷ ಗೋ.ರಮೇಶಗೌಡ ಮಾತನಾಡಿ, ನಮ್ಮ ವೇದಿಕೆಯು ನೂರಾರು ಜನಪರ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದ್ದು, ಸಮಾಜಮುಖಿಯಾಗಿ ಸೇವೆ ಸಲ್ಲಿಸುತ್ತ ಬರುತ್ತಿದೆ. ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಕೆಲಸ ಮಾಡುತ್ತಿದೆ. ನಾಡು ನುಡಿ ಸಂಸ್ಕೃತಿ ಪರಂಪರೆಯ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುತ್ತಿದೆ ಎಂದರು.

ಇದೇ ಸಂದರ್ಭದಲ್ಲಿ 27 ಸಾಂಸ್ಕೃತಿಕ ತಂಡಗಳು ಭಾಗವಹಿಸಿ ಕನ್ನಡ ನಾಡು ನುಡಿ ಸಂಸ್ಕೃತಿಯ ಗೀತೆಗಳಿಗೆ ನೃತ್ಯ ಮಾಡಿದರು. ರೈತರು, ಸಾಧಕರಿಗೆ ಸನ್ಮಾನಿಸಲಾಯಿತು.

Cultural Dance Competition ಗ್ರೂಪ್ ಡ್ಯಾನ್ಸ್ ನಲ್ಲಿ ಪ್ರಥಮ ಬಹುಮಾನ ಮಹಾವೀರ ಶಾಲೆ, ದ್ವಿತೀಯ ಬಹುಮಾನ ಸೀಮಾ ಆಂಗ್ಲ ಶಾಲೆ, ತೃತೀಯ ಬಹುಮಾನ ಅಭಿನವ ನೃತ್ಯ ತಂಡ, ನಾಲ್ಕನೇ ಬಹುಮಾನ ಡ್ರಾಗನ್ ಪವರ್ ಡ್ಯಾನ್ಸ್ ತಂಡ, 5ನೇ ಬಹುಮಾನ ಅನನ್ಯ ಶಾಲೆಯು ಪಡೆಯಿತು. ಸೋಲೋ ಡಾನ್ಸ್ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ರಮ್ಯಶ್ರೀ, ದ್ವಿತೀಯ ಬಹುಮಾನ ರಾಶಿ ವಿ ಗೌಡ ಹಾಗೂ ಮೂರನೇ ಬಹುಮಾನ ಪೂರ್ವಿಕ ಪಡೆದರು.

ಪ್ರಮುಖರಾದ ಅಭಿನವಗಿರಿ, ಮಂಜುನಾಥ ಎನ್ ಗೌಡ, ಪವನಕುಮಾರ್, ಧೀರರಾಜ್ ಹೊನ್ನವಿಲೆ, ಸಂತೋಷ್, ರವಿಕುಮಾರ್, ಶ್ರೀಪಾಲ್, ಪ್ರತಿಮಾ ಡಾಕಪ್ಪಗೌಡ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Mental Health Day ಶಿವಮೊಗ್ಗದಲ್ಲಿ ವಿಶ್ವ ಮಾನಸಿಕ ದಿನಾಚರಣೆ ಜಾಗೃತಿ ಜಾಥಾ

World Mental Health Day ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ...

Mysuru Dasara ದಸರಾ ಪುಸ್ತಕ ಮೇಳ: ಪುಸ್ತಕಗಳ ವೀಕ್ಷಿಸಿದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ

Mysuru Dasara ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಮಾಡಿದ...

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...