Thursday, June 18, 2026
Thursday, June 18, 2026

BJP Karnataka ರಾಮಭಕ್ತರನ್ನ ಕೆಣಕಿದರೆ ಕಾಂಗ್ರೆಸ್ ಸರ್ಕಾರ ಧೂಳಿಪಟವಾದೀತು- ಬಿಜೆಪಿ ಎಚ್ಚರಿಕೆ

Date:

BJP Karnataka ರಾಮಭಕ್ತರನ್ನು ಕೆಣಕಿದರೆ
ಕಾಂಗ್ರೆಸ್ ಸರ್ಕಾರ ಧೂಳಿಪಟವಾದೀತು ಎಚ್ಚರ”
ದೇಶದ ಜನರ 5 ದಶಕಗಳ ಕನಸು ನನಸಾಗುತ್ತಿರುವ ಪವಿತ್ರ ರಾಮಮಂದಿರ ಉದ್ಘಾಟನೆಯ ಸಂಭ್ರಮದಲ್ಲಿರುವ ಹೊತ್ತಿನಲ್ಲಿ ಹುಬ್ಬಳ್ಳಿಯಲ್ಲಿ ರಾಮ ಮಂದಿರ ನಿರ್ಮಾಣ ಹೋರಾಟದಲ್ಲಿ ಭಾಗಿಯಾಗಿದ್ದ, 31 ವರ್ಷದ ಹಳೆಯ ಪ್ರಕರಣಗಳನ್ನು ಕೆದಕಿ ಶ್ರೀಕಾಂತ್ ಪೂಜಾರಿ ಸೇರಿದಂತೆ ರಾಮ ಭಕ್ತರನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಭವ್ಯ ಶ್ರೀರಾಮ ಮಂದಿರ ತಲೆಯೆತ್ತಿರುವುದನ್ನು ಸಹಿಸದೆ, ಓಲೈಕೆ ರಾಜಕಾರಣಕ್ಕೆ ಕಟಿಬಿದ್ದು ಹಿಂದೂ ಕಾರ್ಯಕರ್ತರು ಹಾಗೂ ರಾಮಭಕ್ತರನ್ನು ಜೈಲಿಗಟ್ಟುವ ಹುನ್ನಾರ ನಡೆಸಲು ರೂಪಿಸಿರುವ ಕಾಂಗ್ರೆಸ್ ಸರ್ಕಾರದ ಷಡ್ಯಂತ್ರವನ್ನು ಖಂಡಿಸಿ, ತಕ್ಷಣ ಹಿಂದೂ ಕಾರ್ಯಕರ್ತರನ್ನು ಬಿಡುಗಡೆಗೊಳಿಸಿ ರಾಮವಿರೋಧಿ ನಿಲುವುಗಳನ್ನು ಕೈಬಿಡುವಂತೆ ಆಗ್ರಹಿಸಲಾಯಿತು.

BJP Karnataka ಈ ಸಂದರ್ಭದಲ್ಲಿ ಕೇಂದ್ರದ ಮಾಜಿ ಸಚಿವರು ಹಾಗೂ ಸಂಸದರಾದ ಶ್ರೀ ಡಿ.ವಿ ಸದಾನಂದ ಗೌಡ, ಸಂಸದರಾದ ಶ್ರೀ ಪಿ.ಸಿ ಮೋಹನ್, ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ ಡಾ.ಅಶ್ವಥ್ ನಾರಾಯಣ್ ಅವರು ಸೇರಿದಂತೆ ಬೆಂಗಳೂರಿನ ಎಲ್ಲಾ ಶಾಸಕರುಗಳು, ರಾಜ್ಯ ಉಪಾಧ್ಯಕ್ಷರುಗಳು, ರಾಜ್ಯ ಪ್ರಧಾನ ಕಾರ್ಯದರ್ಶಿಗಳು, ಪಕ್ಷದ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು, ಸಹಸ್ರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಶ್ರೀರಾಮ ಭಕ್ತರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...