Thursday, December 18, 2025
Thursday, December 18, 2025

CM Siddaramaiah ಜನರ ಅಭ್ಯುದಯ ನಮ್ಮ ಗುರಿಯಾಗಬೇಕು ಅಧಿಕಾರಿಗಳಿಗೆ ಮುಖ್ಯಮಂತ್ರಿ ಕಿವಿಮಾತು

Date:

CM Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಆಡಳಿತಾ ಸೇವಾ ಅಧಿಕಾರಿಗಳ ಸಂಘದ 2024ನೇ ಸಾಲಿನ ದಿನಚರಿ ಮತ್ತು ವಾರ್ಷಿಕ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದರು.

ತಹಶೀಲ್ದಾರ್ ಕಚೇರಿಗೆ ಬರುವವರ ಕಣ್ಣೀರು ಒರೆಸುವುದಕ್ಕಿಂತ ಪುಣ್ಯದ ಕೆಲಸ ಬೇರೆ ಇಲ್ಲ. ಮಾಸಲು ಬಟ್ಟೆಯಲ್ಲಿ, ಚಡ್ಡಿಯಲ್ಲಿ ಬರುವ ಬಡವರ ಕಣ್ಣೀರು ಒರೆಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು.
ಸವೆದ ಚಪ್ಪಲಿ, ಹರಕಲು ಚೆಡ್ಡಿ, ಮಾಸಿದ ಬಟ್ಟೆ, ಅವಿದ್ಯಾವಂತರ ಪರವಾಗಿ ನಿಮ್ಮಗಳ ಹೃದಯ ಮಿಡಿಯಬೇಕು. ಅಧಿಕಾರಿಗಳು ಒಳ್ಳೆ ಕೆಲಸ ಮಾಡಿದರೆ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ. ಈ ಜವಾಬ್ದಾರಿಯನ್ನು ನಿರ್ವಹಿಸಿ, ಮಧ್ಯವರ್ತಿಗಳನ್ನು ನಿಮ್ಮ ಕಚೇರಿ ಬಳಿ ಸೇರಿಸದೆ ಜನರ ಸೇವೆ ಮಾಡಬೇಕು.

ನಾವು ನೀವು ರಾಜ್ಯದ 7 ಕೋಟಿ ಜನರ ಹಿತ ಕಾಯುವುದಕ್ಕಾಗಿ ಇದ್ದೇವೆ. ರಾಜಕಾರಣಿಗಳು ಜನರಿಂದ ರಿನೀವಲ್ ಆದರೆ ಮಾತ್ರ ಐದು ವರ್ಷದ ಬಳಿಕವೂ ಜನ ಸೇವೆಯಲ್ಲಿ ಇರ್ತಾರೆ. ಆದರೆ ಕೆಎಎಸ್ ಅಧಿಕಾರಿಗಳು 30 ವರ್ಷಗಳ‌ ಕಾಲ ನಿರಂತರ ಜನ ಸೇವೆಯಲ್ಲಿ ಇರುತ್ತಾರೆ. ಆದ್ದರಿಂದ ಹೆಚ್ಚು ಜನಪರವಾಗಿ ಇದ್ದು ಜನರ ಕಷ್ಟ ಸುಖಗಳಿಗೆ ಸ್ಪಂದಿಸಬೇಕು.

ರಾಜಕಾರಣಗಳಿಗೆ, ಅಧಿಕಾರಿಗಳಿಗೆ ಜನರು ಸವಲತ್ತುಗಳನ್ನು ಒದಗಿಸಿದ್ದಾರೆ. ಜನರ ತೆರಿಗೆ ಹಣದಲ್ಲಿ ನಮಗೆ ಸವಲತ್ತುಗಳು ಸಿಕ್ಕಿವೆ. ಸುಗಮ ಜನಪರ ಆಡಳಿತ ಕೊಡಲಿ ಎನ್ನುವ ಕಾರಣದಿಂದ ಜನರಿಂದ ನಮಗೆ ಸವಲತ್ತು ಸಿಕ್ಕಿವೆ. ಜನರ ಅಭ್ಯದಯ ನಮ್ಮ ಗುರಿ ಆಗಬೇಕು.
ಬಲಾಡ್ಯರು ದುರ್ಬಲರ ಮೇಲೆ ದೌರ್ಜನ್ಯ ನಡೆಸದಂತೆ ಎಚ್ಚರಿಕೆ ವಹಿಸಬೇಕು. ಸರ್ಕಾರದ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ತಲುಪಿಸಿ.

ಸಣ್ಣ ಪುಟ್ಟ ರೆವಿನ್ಯೂ ಸಮಸ್ಯೆಗಳಿಗೆ ಜನರು ನನ್ನ ಬಳಿಗೆ ಬರುತ್ತಾರೆ ಎಂದರೆ ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದೇ ಪರಿಗಣಿಸಬೇಕಾಗುತ್ತದೆ.

CM Siddaramaiah ಕೆಎಎಸ್ ಅಧಿಕಾರಿಗಳ ಸಂಘದ ಅಧ್ಯಕ್ಷರಾದ ಶಿವಸ್ವಾಮಿ, ಕಂದಾಯ ಸಚಿವರಾದ ಕೃಷ್ಣ ಬಿ ಗೌಡ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬೈರತಿ ಸುರೇಶ್ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜ್ ಸಂಘದ ಉಪಾಧ್ಯಕ್ಷರಾದ ಚನ್ನಬಸಪ್ಪ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...

Department of Agriculture 2026 ಜನವರಿ 6. ಕೃಷಿ ಇಲಾಖೆಯಿಂದ “ಸಿರಿಧಾನ್ಯ & ಮರೆತು ಹೋದ ಖಾದ್ಯಗಳ ಪಾಕ ತಯಾರಿ” ಸ್ಪರ್ಧೆ

Department of Agriculture ಅಂತಾರಾಷ್ಟ್ರೀಯ ವಾಣಿಜ್ಯ ಮೇಳ-2026 ರ ಅಂಗವಾಗಿ ಕೃಷಿ...

Shivamogga Police ಶಿಕಾರಿಪುರ- ಚುರ್ಚುಗುಂಡಿಯಿಂದ ಯುವಕ ನಾಪತ್ತೆ, ಪೊಲೀಸ್ ಪ್ರಕಟಣೆ

Shivamogga Police ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ...