Wednesday, October 2, 2024
Wednesday, October 2, 2024

Sri Adichunchanagiri Shikshana Trust ರಾಜ್ಯದಲ್ಲಿ ಬಿಜಿಎಸ್ ಸಂಸ್ಥೆಯು ಸರ್ವ ಜನಾಂಗದ ಶಿಕ್ಷಣ ತೋಟವಾಗಿದೆ- ಚಂದ್ರಶೇಖರ ನಾಥ ಸ್ವಾಮೀಜಿ

Date:

Sri Adichunchanagiri Shikshana Trust ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬಿಜಿಎಸ್ ಶಿಕ್ಷಣ ಸಂಸ್ಥೆ ಸರ್ವ ಜನಾಂಗದ ಶಿಕ್ಷಣ ತೋಟವಾಗಿ ಕೆಲಸ ಮಾಡುತ್ತಿದೆ ಎಂದು ದಸರೀಘಟ್ಟ ಆದಿ ಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅಭಿಪ್ರಾಯಪಟ್ಟರು.

ಶಿವಮೊಗ್ಗ ನಗರದ ಆದಿಚುಂಚನಗಿರಿ ಸಮುದಾಯಭವನದಲ್ಲಿ ಬಿಜಿಎಸ್ ಸಂಸ್ಥೆಯ ನರ್ಸರಿ ಮತ್ತು ಪ್ರಾಥಮಿಕ ವಿಭಾಗದ ಶಾಲೆಗಳ ವಾರ್ಷಿಕೋತ್ಸವ ’ಬಿಜಿಎಸ್ ಕಿಡ್ಸ್’ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು.

ಹಲವಾರು ವರ್ಷಗಳಿಂದ ಬಿಜಿಎಸ್ ಶಿಕ್ಷಣ ಸಂಸ್ಥೆ ಯಾವುದೇ ಜಾತಿ, ಧರ್ಮ, ಪಂಗಡವನ್ನು ಪರಿಗಣಿಸದೇ ಎಲ್ಲಾ ಸಮುದಾಯದ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಧಾರೆ ಎರೆಯುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತಿದೆ ಎಂದು ಹೇಳಿದರು.

ಕೇವಲ ಶಿಕ್ಷಣವನ್ನು ನೀಡುವುದು ನಮ್ಮ ವಿದ್ಯಾಸಂಸ್ಥೆಯ ಶಾಲೆಗಳ ಕಾರ್ಯವಾಗಿಲ್ಲ. ಶಿಕ್ಷಣದ ಜೊತೆಯಲ್ಲಿಯೇ ಸಂಸ್ಕಾರವನ್ನು ಕೂಡ ಕಲಿಸುವಂತಹ ಕೆಲಸವನ್ನು ನಮ್ಮ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ ನಿರಂತರವಾಗಿ ಮಾಡಿಕೊಂಡು ಬರುತ್ತಿದೆ ಎಂದು ಹೇಳಿದರು.

ನಮ್ಮ ಪೋಷಕರು ಅನೇಕ ಕನಸುಗಳನ್ನು ಹೊತ್ತು ತಮ್ಮ ಮಕ್ಕಳನ್ನು ನಮ್ಮ ವಿದ್ಯಾಸಂಸ್ಥೆಯ ಶಾಲೆಗಳಿಗೆ ಸೇರಿಸುತ್ತಾರೆ. ಅವರ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಹಾಗೂ ಪ್ರತಿಯೊಂದು ಮಗುವಿನ ಶ್ರೇಯೋಭಿವೃದ್ದಿಗೆ ಸಂಬಂಧಿಸಿದಂತೆ ಶಿಕ್ಷಕ ಸಮುದಾಯ ಹಗಲಿರುಳು ಶ್ರಮಿಸುತ್ತಿದೆ ಎಂದು ಹೇಳಿದರು.

ವಿದ್ಯಾಸಂಸ್ಥೆಯ ನಿರ್ದೇಶಕ ಡಿ.ವಿ.ಸತೀಶ್ ಮಾತನಾಡಿ, ನಮ್ಮ ಸಂಸ್ಥೆಯಲ್ಲಿ ಆಯಾ ತರಗತಿಗೆ ಅನುಗುಣವಾಗಿ ಪ್ರತ್ಯೇಕವಾದ ಶಿಕ್ಷಣ ಕ್ರಮವನ್ನು ಅನುಸರಿಸಲಾಗುತ್ತಿದೆ. ಪ್ರತಿಯೊಂದು ಮಗುವಿನ ಮಟ್ಟಕ್ಕೆ ಅನುಗುಣವಾಗಿ ತರಬೇತಿಯನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

Sri Adichunchanagiri Shikshana Trust ವಸತಿ ನಿಲಯದ ವಿದ್ಯಾರ್ಥಿಗಳಿಗೆ ಮನೆ ಮಾದರಿಯ ಊಟ, ವಸತಿ ಹಾಗೂ ಪೋಷಕರ ಪ್ರೀತಿಯನ್ನು ತೋರಿಸಲಾಗುತ್ತಿದೆ. ಇದಕ್ಕೆ ನಮ್ಮ ಮಠದ ಶ್ರೀಗಳ ಮಾರ್ಗದರ್ಶನವೇ ಕಾರಣವಾಗಿದೆ ಎಂದ ಅವರು, ಪ್ರತಿಯೊಂದು ಮಗುವಿನ ಭವಿಷ್ಯವನ್ನು ಉಜ್ವಲಗೊಳಿಸುವ ಕಾರ್ಯ ನಮ್ಮ ಸಂಸ್ಥೆಯದ್ದಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶ್ರೀಮತಿ ಭಾರತಿ ಡಯಾಜ್ ರವರು ಹಾಗೂ ಆಡಳಿತ ಮಂಡಳಿಯ ನಿರ್ದೇಶಕರುಗಳಾದ ಶ್ರೀ.ಹಿರಿಯಣ್ಣ ಹೆಗಡೆ, ಶ್ರೀ ಕೊಳಿಗೆ ವಾಸಪ್ಪ ಗೌಡ್ರು, ಪ್ರಾಂಶುಪಾಲರಾದ ಶ್ರೀಮತಿ ಹೇಮಾ, ಗುರುಪುರದ ಬಿಜಿಎಸ್ ಶಾಲಾ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸುರೇಶ್.ಎಸ್. ಎಚ್.,ಮುಖ್ಯ ಶಿಕ್ಷಕಿ ಶ್ರೀಮತಿ ವೀಣಾ ರವರು ಹಾಗೂ ಬೋಧಕ –
ಬೋಧಕೇತರ ವರ್ಗದವರು, ಪೋಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...