Monday, February 2, 2026
Monday, February 2, 2026

Drama preparation camp ರಂಗಾಯಣದಲ್ಲಿ ಪೂರ್ಣಾವಧಿ ನಾಟಕ ಸಿದ್ಧತಾ ಶಿಬಿರಕ್ಕೆ ಆಯ್ಕೆ ಪ್ರಕ್ರಿಯೆ

Date:

Drama preparation camp ಶಿವಮೊಗ್ಗ ರಂಗಾಯಣವು ರಂಗಾಸ್ತಕರಿಗಾಗಿ ಫೆಬ್ರವರಿ-2024ರಲ್ಲಿ 20 ದಿನಗಳ ಕಾಲ ಪೂರ್ಣಾವಧಿ ನಾಟಕ ಸಿದ್ಧತಾ ಶಿಬಿರವನ್ನು ಆಯೋಜಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಶಿಬಿರಾರ್ಥಿಗಳು 20-40 ವರ್ಷದೊಳಗಿನವರಾಗಿರಬೇಕ.

12 ಜನ ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿದ್ದು, ಅನುಭವ, ಆಸಕ್ತಿ, ಬದ್ಧತೆಯ ಆಧಾರದ ಮೇಲೆ ಸಂದರ್ಶನದ ಮೂಲಕ ಅಂತಿಮ ಆಯ್ಕೆ ಮಾಡಲಾಗುವುದು. ಸಂದರ್ಶನಕ್ಕೆ ಸ್ವಂತ ಖರ್ಚಿನಲ್ಲಿ ಬರಬೇಕು ಹಾಗೂ ಆಯ್ಕೆಯಾದ ಅಭ್ಯರ್ಥಿಗಳು ಕನಿಷ್ಠ 5 ಪ್ರದರ್ಶನಗಳಿಗೆ ಒಪ್ಪಿಗೆ ಸೂಚಿಸಬೇಕು. ಶಿಬಿರದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಹೆಸರು, ವಿಳಾಸ, ದೂರವಾಣಿ ವಿದ್ಯಾರ್ಹತೆ, ರಂಗಭೂಮಿ ಅನುಭವ ವಿವರ, ಶಿಬಿರಾರ್ಥಿಯಾಗಿ ತರಬೇತಿ ಪಡೆಯುವ ಉದ್ದೇಶ ಹಾಗೂ ವಯಸ್ಸಿನ ದಾಖಲೆಯೊಂದಿಗೆ ಅರ್ಜಿ ಸಲ್ಲಿಸುವುದು. ಶಿಬಿರಾರ್ಥಿಗಳು ಕಡ್ಡಾಯವಾಗಿ ಶಿಬಿರದ ಚಟುವಟಿಕೆಗಳಲ್ಲಿ ಭಾಗವಹಿಸುವುದು ಮತ್ತು 20 ದಿನಗಳು ನಿರಂತರವಾಗಿ ನಡೆಯುವ ಈ ಶಿಬಿರದಲ್ಲಿ ಮಧ್ಯದಲ್ಲಿ ಯಾವುದೇ ರಜೆ ಇರುವುದಿಲ್ಲ. ಶಿಬಿರಾರ್ಥಿಗಳ ಆಯ್ಕೆಯಲ್ಲಿ ಶಿಬಿರದ ನಿರ್ದೇಶಕರು ಹಾಗೂ ಆಡಳಿತಾಧಿಕಾರಿಗಳ ನಿರ್ಧಾರವೇ ಅಂತಿಮ. ಶಿಬಿರ ನಡೆಯುವ ಸಮಯದಲ್ಲಿ ಮಧ್ಯದಲ್ಲಿ ಬಿಟ್ಟು ಹೋಗಲು ಅವಕಾಶವಿರುವುದಿಲ್ಲ. ಅಯ್ಕೆಯಾದ ಶಿಬಿರಾರ್ಥಿಗಳಿಗೆ ರೂ. 12000/-ಗಳ ಗೌರವ ಸಂಭಾವನೆ, ಮಧ್ಯಾಹ್ನದ ಊಟ, ಚಹಾ ನೀಡಲಾಗುವುದು.

Drama preparation camp ಆಸಕ್ತರುವ ಬಿಳಿಹಾಳೆಯಲ್ಲಿ ಸ್ವವಿವರದೊಂದಿಗೆ ಜ.15 ರೊಳಗಾಗಿ ಆಡಳಿತಾಧಿಕಾರಿಗಳು, ರಂಗಾಯಣ, ಹೆಲಿಪ್ಯಾಡ್ ಹಿಂಭಾಗ, ಅಶೋಕನಗರ, ಶಿವಮೊಗ್ಗ ಇಲ್ಲಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಅಥವಾ ಇಮೇಲ್ admin.rangayanashivamogga@gmail.com ಮೂಲಕ ಕಳುಹಿಸುವಂತೆ ರಂಗಾಯಣದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-256353/ 7975229166 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...