Sunday, September 27, 2026
Sunday, September 27, 2026

Edurite College ವಿದ್ಯಾರ್ಥಿಯು ಪರಿಪೂರ್ಣ ಜ್ಞಾನದ ಜೊತೆ ಕೌಶಲ್ಯವನ್ನೂ ಕಲಿಯಬೇಕು- ಜಿ.ವಿಜಯ್ ಕುಮಾರ್

Date:

Edurite College ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದರೂ ಕೌಶಲ್ಯದ ಕೊರತೆ ಎದುರಿಸುತ್ತಿದ್ದಾರೆ. ತಂತ್ರಜ್ಞಾನ ಯುಗದಲ್ಲಿ ಕೌಶಲ್ಯ ಕಲಿಕೆಯೂ ಮುಖ್ಯ. ವಿದ್ಯಾರ್ಥಿಯು ಪರಿಪೂರ್ಣ ಜ್ಞಾನದ ಜತೆಯಲ್ಲಿ ಕೌಶಲ್ಯ ಕಲಿಕೆಗೂ ಪ್ರಾಮುಖ್ಯತೆ ನೀಡಬೇಕು ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್ ಹೇಳಿದರು.

ಎಜುರೈಟ್ ಕಾಲೇಜಿನ ಸಭಾಂಗಣದಲ್ಲಿ ಶಿವಮೊಗ್ಗ ನಾಲೆಡ್ಜ್ ಫೋರಮ್. ಹಾಗೂ ಎಜುರೈಟ್ ಕಾಲೇಜ್ ವತಿಯಿಂದ ಆಯೋಜಿಸಿದ್ದ ಅಂತರ ಕಾಲೇಜು ಕ್ವಿಜ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವೃತ್ತಿ ಉದ್ಯೋಗ ಕ್ಷೇತ್ರದಲ್ಲಿ ನಾವು ಯಶಸ್ಸನ್ನು ಸಾಧಿಸಲು ಶಿಕ್ಷಣದ ಜೊತೆ ಕೌಶಲ್ಯವು ಅತ್ಯಂತ ಅಗತ್ಯವಾದ ಸಾಧನವಾಗಿದೆ. ಕೌಶಲ್ಯದ ಕಲಿಕೆಯಿಂದ ವೃತ್ತಿಯಲ್ಲಿ ಹಂತ ಹಂತವಾಗಿ ಉನ್ನತ ಸ್ಥಾನಕ್ಕೆ ಏರಬಹುದಾಗಿದೆ ಎಂದು ತಿಳಿಸಿದರು.

ಇಂದಿನ ವಿದ್ಯಾರ್ಥಿಗಳು ಪ್ರಶ್ನೆ ಮಾಡುವ ಚರ್ಚಿಸುವ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಯಾವುದೇ ಒಂದು ವಿಷಯವನ್ನು ಸಹ ಆಲಕ್ಷ್ಯ ಮಾಡಬಾರದು. ಸಣ್ಣ ಸಣ್ಣ ಸಾಮಾನ್ಯ ಜ್ಞಾನವು ಕೂಡ ಅತ್ಯಂತ ಅಗತ್ಯವಾಗಿ ಮುಂದಿನ ದಿನಗಳಲ್ಲಿ ರಾಜ್ಯ ರಾಷ್ಟ್ರ ಮಟ್ಟದಲ್ಲಿ ಅವಕಾಶ ಪಡೆಯಲು, ಯಶಸ್ಸನ್ನು ಸಾಧಿಸಲು ಕೌಶಲ್ಯವು ಅತ್ಯಂತ ಅಗತ್ಯವಾಗಿದೆ ಎಂದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸ್ಕಿಲ್ ಡೆವಲಪ್ಮೆಂಟ್ ಸಮಿತಿಯ ಪ್ರಮುಖರಾದ ಸವಿತಾ ಮಾಧವ್ ಮಾತನಾಡಿ, ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಜೊತೆಗೆ ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಇಂತಹ ಕ್ವಿಜ್ ಕಾಂಪಿಟೇಶನ್ ಗಳಲ್ಲಿ ಭಾಗವಹಿಸಬೇಕು. ಗುಂಪು ಚರ್ಚೆಗಳನ್ನು ಮಾಡಬೇಕು. ಯಶಸ್ವಿ ಪುಸ್ತಕಗಳನ್ನು ಓದುವುದರ ಜೊತೆಗೆ ಜ್ಞಾನ ಭಂಡಾರವನ್ನ ವೃದ್ಧಿಸಿಕೊಳ್ಳಬೇಕು ಎಂದು ಹೇಳಿದರು.

ಶಿವಮೊಗ್ಗ ನಾಲೆಡ್ಜ್ ಫಾರಂ ಜಿಲ್ಲೆಯ ಎಲ್ಲಾ ಮಕ್ಕಳ ಸರ್ವಾಂಗಣ ಬೆಳವಣಿಗೆಗಾಗಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಹೆಸರು ಹಾಗೂ ಸಾಧನೆ ಮಾಡಲಿ ಎಂಬ ಉದ್ದೇಶದಿಂದ ಸ್ಥಾಪಿಸಲಾಗಿದೆ ಎಂದು ವಿವರಿಸಿದರು.
ಇದೇ ಸಂದರ್ಭದಲ್ಲಿ ಶಿವಮೊಗ್ಗ ನಾಲೆಡ್ಜ್ ಫೋರಂ ಅಧ್ಯಕ್ಷ ಡಾ. ಶಂಕರ್ ನಾರಾಯಣ್ ಮಾತನಾಡಿ, ಇಂದು ವಿದ್ಯಾರ್ಥಿಗಳು ಎಷ್ಟು ಕಲಿತರೂ ಸಾಲದು. ಪ್ರತಿದಿನ ಹೊಸ ಹೊಸ ಆವಿಷ್ಕಾರಗಳು ಮೂಡುತ್ತಿರುತ್ತವೆ. ತಮ್ಮ ವಿದ್ಯಾಭ್ಯಾಸದ ಜೊತೆಗೆ ದೈಹಿಕವಾಗಿ ಮಾನಸಿಕವಾಗಿ ಸದೃಢರಾಗಿರಬೇಕು ಎಂದರು.

Edurite College ನಾಲೆಡ್ಜ್ ಫೋರಮ್ ವತಿಯಿಂದ ಶಿವಮೊಗ್ಗ ಹಾಗೂ ಜಿಲ್ಲಾದ್ಯಂತ ಮಕ್ಕಳ ವ್ಯಕ್ತಿತ್ವ ವಿಕಸನ, ಜ್ಞಾನಾರ್ಜನೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮುಖಾಂತರ ಅವರ ಭವಿಷ್ಯದ ಕೈಗನ್ನಡಿ ಆಗುತ್ತೇವೆ. ಈ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಅಂತರ ಕಾಲೇಜು ಕ್ವಿಜ್ ಸ್ಪರ್ಧೆಯಲ್ಲಿ 20ಕ್ಕೂ ಹೆಚ್ಚು ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವೇದಿಕೆಯಲ್ಲಿ ಪ್ರಸನ್ನಾ, ಮಂಜುನಾಥ್, ಮೋಹನ್, ಕಿರಣ್ ಉಡುಪ, ಶಿಖೇರ್ ಧವನ್, ಅಮಿತ್ ಕುಮಾರ್, ತೇಜೋನಿಧಿ, ವರ್ಷಿತಾ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...