Tuesday, November 26, 2024
Tuesday, November 26, 2024

Yuvanidhi Scheme ಯುವನಿಧಿ ಯೋಜನೆ ಶಿವಮೊಗ್ಗದಲ್ಲಿ ಸಿದ್ಧರಾಮಯ್ಯನವರಿಂದ ಚಾಲನೆ- ಮಧು ಬಂಗಾರಪ್ಪ

Date:

Yuvanidhi Scheme ಡಿಪ್ಲೋಮಾ ಮತ್ತು ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಉದ್ಯೋಗಭತ್ಯೆ ನೀಡುವ ಸರ್ಕಾರದ ಮಹತ್ವಾಕಾಂಕ್ಷಿ 5ನೇ ಗ್ಯಾರಂಟಿ ಯೋಜನೆ ಯುವನಿಧಿಗೆ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜನವರಿ 12ರಂದು ನಗರದ ಫ್ರೀಡಂ ಪಾರ್ಕ್ನ ಭವ್ಯವೇದಿಕೆಯಲ್ಲಿ ಚಾಲನೆ ನೀಡುವರು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರು ಹೇಳಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಪ್ರಾಚಾರ್ಯರಿಗಾಗಿ ಏರ್ಪಡಿಸಲಾಗಿದ್ದ ಯುವನಿಧಿ ಗ್ಯಾರಂಟಿ ಯೋಜನೆಯ ಚಾಲನಾ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಆಡಳಿತಾರೂಢ ಸರ್ಕಾರ ಚುನಾವಣಾ ಪೂರ್ವದಲ್ಲಿ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಈಗಾಗಲೇ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಶಕ್ತಿ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಟಾನಗೊಳಿಸಿದ್ದು, ಜನವರಿ 05ರಂದು ಯುವನಿಧಿ ಗ್ಯಾರಂಟಿ ಯೋಜನೆ ಲೋಕಾರ್ಪಣೆಗೊಳ್ಳುತ್ತಿರುವುದು ರಾಜ್ಯದ ಜನರಲ್ಲಿ ಸಂತಸ ತಂದಿದೆ ಮಾತ್ರವಲ್ಲ ಸಾರ್ವಜನಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗುತ್ತಿದೆ. ಅಲ್ಲದೇ ರಾಜ್ಯದ ನೆರೆಯ ರಾಜ್ಯಗಳ ಸರ್ಕಾರಗಳೂ ಸಹ ರಾಜ್ಯದ ಜನಪ್ರಿಯ ಯೋಜನೆಗಳನ್ನು ಅನುಷ್ಠಾನಗೊಳಿಸಲು ಉತ್ಸಾಹ ತೋರುತ್ತಿರುವುದನ್ನು ಕಾಣಬಹುದಾಗಿದೆ ಎಂದರು.

Yuvanidhi Scheme ಈ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮ ಸುದಿನದಂದು ಜಿಲ್ಲೆಯ ಎಲ್ಲಾ ಪಾಲಿಟೆಕ್ನಿಕ್, ಪದವಿ ಮತ್ತು ಕಾಲೇಜುಗಳಲ್ಲಿ 2022-23ನೇ ಸಾಲಿನಲ್ಲಿ ಉತ್ತೀರ್ಣರಾಗಿರುವ ಹಾಗೂ ಈ ಯೋಜನೆಯಡಿ ಸೌಲಭ್ಯ ಹೊಂದಲು ಅರ್ಹರಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ನೋಂದಣ ಮಾಡಿಕೊಳ್ಳಲು ಹಾಗೂ ಮುಂದಿನ ಸಾಲಿನಲ್ಲಿ ಸೌಲಭ್ಯ ಪಡೆಯುವ ಯುವ ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ಆಗಮಿಸುವಂತೆ ಪ್ರೇರೇಪಿಸುವುದರೊಂದಿಗೆ, ಸಕಾಲದಲ್ಲಿ ಆಗಮಿಸುವಂತೆ ಮಾಹಿತಿ ನೀಡಲು ಸೂಚಿಸಿದರು.

ವಿದ್ಯಾವಂತ ನಿರುದ್ಯೋಗಿ ಯುವಕರ ಭವಿಷ್ಯದ ಬದುಕಿಗೆ ನೆರವಾಗುವ ಮೂಲಕ ಭರವಸೆಯ ಬೆಳಕು ಮೂಡಿಸುವ, ಅವರಿಗೆ ಉದ್ಯೋಗ ದೊರೆಯುವ ಅವಧಿಯವರೆಗೆ ಉದ್ಯೋಗ ಭತ್ಯೆ ನೀಡುವ ಸದುದ್ದೇಶವನ್ನು ಸರ್ಕಾರ ಹೊಂದಿದೆ. ಇಂತಹ ಮಹತ್ವದ ಜನಪರ ಕಾರ್ಯಕ್ರಮದ ಅನುಷ್ಠಾನಕ್ಕೆ ಸಚಿವ ಸಂಪುಟದ ಎಲ್ಲಾ ಸಹದ್ಯೋಗಿಗಳು ಒಮ್ಮತದ ಅಭಿಪ್ರಾಯ ಹೊಂದಿದ್ದರು. ಆ ಸಮಿತಿಯ ಉಪಾಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದು ನನಗೆ ಹೆಮ್ಮೆ ಎನಿಸಿದೆ ಎಂದ ಅವರು, ಸರ್ಕಾರ ನುಡಿದಂತೆ ನಡೆದು, ಮಾದರಿ ಹೆಜ್ಜೆಗಳನ್ನಿರಿಸಿದೆ ಎಂದರು.

ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಹಾಗೂ ನೆರೆಯ ಜಿಲ್ಲೆಯ ಸುಮಾರು 1ಲಕ್ಷಕ್ಕೂ ಹೆಚ್ಚಿನ ಜನ ಸೇರುವ ನಿರೀಕ್ಷೆ ಇದೆ ಎಂದ ಅವರು, ಶಿಕ್ಷಣ ಮತ್ತು ಪದವಿ ಕಾಲೇಜು ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳಿಂದ ಅಗತ್ಯ ಸಹಕಾರ ನೀಡುವಂತೆ ಮನವಿ ಮಾಡಿದ ಅವರು ಮುಂದಿನ ದಿನಗಳಲ್ಲಿ ಇಲಾಖೆಯ ಉನ್ನತಿಗೆ ಅಗತ್ಯವಿರುವ ಎಲ್ಲಾ ಸಲಹೆ-ಸೂಚನೆಗಳನ್ನು ಸ್ವೀಕರಿಸುವುದಾಗಿ ತಿಳಿಸಿದರು.

ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು ಸೇರಿದಂತೆ ಶಿಕ್ಷಣ ಕ್ಷೇತ್ರದ ಸರ್ವಾಂಗೀಣ ವಿಕಾಸಕ್ಕೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಪ್ರಾಚಾರ್ಯರು ಹಾಗೂ ನುರಿತ ಹಿರಿಯ ಶಿಕ್ಷಕರು ಆಸಕ್ತಿ ವಹಿಸಿದಲ್ಲಿ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಲು ಸಮಯಾವಕಾಶ ನೀಡುವಂತೆ ಕೋರಲಾಗುವುದು ಎಂದರು.

Yuvanidhi Scheme ಸಭೆಯಲ್ಲಿ ಮಾನ್ಯ ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣ ಅವರು ಮಾತನಾಡಿ, ಯುವನಿಧಿ ಕಾರ್ಯಕ್ರಮದ ಯಶಸ್ವಿಗಾಗಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ 20ತಂಡಗಳನ್ನು ರಚಿಸಿ ಹೊಣೆಗಾರಿಕೆ ವಹಿಸಲಾಗಿದೆ. ಕಾರ್ಯಕ್ರಮಕ್ಕೆ ಬರುವವರಿಗಾಗಿ ಅಗತ್ಯ ಬಸ್‌ಸೌಲಭ್ಯ, ಪಾರ್ಕಿಂಗ್ ವ್ಯವಸ್ಥೆ, ವೇದಿಕೆಯ ಸಿದ್ಧತೆ, ಆಸನ ವ್ಯವಸ್ಥೆ, ಊಟೋಪಹಾರ, ಕುಡಿಯುವ ನೀರು ಪೂರೈಕೆ ಹಾಗೂ ಮೂಲಭೂತ ವ್ಯವಸ್ಥೆ ಒದಗಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ವಿವಿಧ ದಿಕ್ಕುಗಳಿಂದ ನಗರ ಪ್ರವೇಶಿಸುವ ವಾಹನಗಳ ನಿಲುಗಡೆಗಾಗಿ ಮರ‍್ನಾಲ್ಕು ಕಡೆಗಳಲ್ಲಿ ವ್ಯವಸ್ಥೆ, ಶೌಚಾಲಯ, ಉಟೋಪಹಾರ ಮತ್ತು ಕುಡಿಯುವ ನೀರಿನ ವ್ಯವಸ್ಥೆಗೆ ಕ್ರಮ ವಹಿಸಲಾಗುವುದು. ಕಾರ್ಯಕ್ರಮದ ಯಶಸ್ಸಿಗೆ ಸಾರ್ವಜನಿಕರು ಸಹಕರಿಸಬೇಕು. _ ಮಿಥುನ್‌ಕುಮಾರ್ ಜಿ.ಕೆ., ಜಿಲ್ಲಾ ಪೊಲೀಸ್ ಅಧೀಕ್ಷಕರು.
ಪೂರ್ವಸಿದ್ಧತಾ ಸಭೆಯಲ್ಲಿ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

COSMO Club Shivamogga ಅಧ್ಯಯನಶೀಲ ತತ್ವದತ್ತ ಮುನ್ನಡೆದು ಸಮರ್ಥ ಸಮಾಜಕ್ಕೆ ದೀಪವಾಗೋಣ- ರಂಜಿನಿ ದತ್ತಾತ್ರಿ

COSMO Club Shivamogga ನಮ್ಮ ನಿಮ್ಮ ನಗುವಿಗೊಂದು ದೀಪ, ಸಂತಸದ ಬೆಳಕಿಗೊಂದು...

MESCOM ನವೆಂಬರ್ 27. ಎಂ.ಆರ್.ಎಸ್. ನಲ್ಲಿ ತ್ರೈಮಾಸಿಕ ನಿರ್ವಹಣೆ. ಶಿವಮೊಗ್ಗದ ಬಹುಪಾಲು ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

MESCOM ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ...