Monday, February 2, 2026
Monday, February 2, 2026

Adichunchanagiri ಜನವರಿ 12 ರಿಂದ ಡಾ.ಬಾಲಗಂಗಾಧರನಾಥ ಸ್ಬಾಮೀಜಿಯವರ ಪುಣ್ಯಸ್ಮರಣೋತ್ಸವ

Date:

Adichunchanagiri ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ 71ನೇ ಪೀಠಾಧ್ಯಕ್ಷರಾಗಿ ಸಿದ್ಧ ಸಿಂಹಾಸನಾರೋಹಣ ಮಾಡಿದಂತಹ ಪರಮಪೂಜ್ಯ ಯುಗ ಯೋಗಿ ಜಗದ್ಗುರು ಪದ್ಮಭೂಷಣ ಶ್ರೀ ಶ್ರೀ ಶ್ರೀ ಡಾ.ಬಾಲಗಂಗಾಧರನಾಥ ಮಹಾ ಸ್ವಾಮಿಗಳವರು ಜನಸಾಮಾನ್ಯರ ಉದ್ಧಾರಕ್ಕಾಗಿ ಅನ್ನ, ಅಕ್ಷರ, ಆರೋಗ್ಯ, ಆಶ್ರಯ, ಆಕಳು, ಪರಿಸರ ಮುಂತಾದ ಕ್ಷೇತ್ರಗಳಲ್ಲಿ ಆಂದೋಲನವನ್ನೇ ಮಾಡಿದರು. ಶೈಕ್ಷಣಿಕ, ಧಾರ್ಮಿಕ ಹಾಗೂ ಸಮಾಜ ಕ್ಷೇತ್ರದಲ್ಲಿ ಅಪಾರ ಸೇವೆಯನ್ನು ಸಲ್ಲಿಸಿದ್ದಾರೆ.

Adichunchanagiri ಪರಮ ಪೂಜ್ಯರ ಅವಿಶ್ರಾಂತ ಕಾಯಕದ ಫಲವಾಗಿ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟಿನ ಅಡಿಯಲ್ಲಿ 475 ಕ್ಕೂ ಹೆಚ್ಚಿನ ವಿದ್ಯಾಸಂಸ್ಥೆಗಳು ಸ್ಥಾಪನೆಗೊಂಡಿದ್ದು, ಶಿಕ್ಜ್ಹಣ ಸಂಸ್ಥೆಗಳಲ್ಲಿ ಒಂದು ಲಕ್ಷದ ಹತ್ತು ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಪೂರ್ವ ಪ್ರಾಥಮಿಕ ಶಾಲೆಯಿಂದ ಸಂಸ್ಕೃತ ವೇದಾಗಮ ಹಾಗೂ ತಾಂತ್ರಿಕ, ವೈದ್ಯಕೀಯ ವಿಜ್ಞಾನದ ವರಗೆ ಯಾವುದೇ ಜಾತಿ, ಮತ, ಲಿಂಗ ಭೇದ ವಿಲ್ಲದೆ ವ್ಯಾಸಂಗ ಮಾಡುತ್ತಿದ್ದಾರೆ.

ಶ್ರೀ ಮಠದ ವತಿಯಿಂದ ವಿವಿಧ ಕಾರ್ಯಕ್ರಮಗಳು:
ಜನವರಿ 12 ರಿಂದ 18ರ ವರೆಗೆ 11ನೇ ಸಂಸ್ಮರಣಾ ಮಹೋತ್ಸವ ನಡೆಯಲಿದ್ದು, ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪರಮಪೂಜ್ಯ ಜಗದ್ಗುರು ಶ್ರೀಶ್ರೀಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ವಹಿಸಲಿದ್ದು, 12.1.2024 ರಂದು ಕೃಷಿ ಮೇಳ ಮತ್ತು ರೈತ ಸಂಗಮ, 13.1.2024 ಹೋಮ, ಹವನಾದಿ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಕೃಷಿ ಮೇಳ ಮತ್ತು ರೈತ ಸಂಗಮ 14.1.2024 ರಂದು ಭಾನುವಾರ ಯುವ ಸಂಗಮ 15.1.2024, ಹಿರಿಯ ವಿದ್ಯಾರ್ಥಿಗಳ ಸಂಗಮ 16.1.2024,ಯೋಗಿ — ಜೋಗಿ ಸಂಗಮ 17.1.2024, ಮಾತೃ ಸಂಗಮ 18.1.2024, ರಂದು ಜಯಂತ್ಯುತ್ಸವ ಹಾಗೂ ಸಂತ ಭಕ್ತ – ಸಂಗಮ ನಡೆಯಲಿದೆ, ಈ ಎಲ್ಲಾ ಕಾರ್ಯಕ್ರಮ ಜೊತೆಗೆ ಪ್ರತಿದಿನ ಗೀತಗಾಯನ ಹಮ್ಮಿಕೊಳ್ಳಲಾಗಿದೆ, ವಿಶಿಷ್ಟ ವಿನೂತನ ಕಾರ್ಯಕ್ರಮಗಳು ಅತ್ಯಂತ ಶ್ರದ್ಧಾ ಭಕ್ತಿಯಿಂದ ನೆರವೇರಿಸಲಾಗುವುದು.

ಅಂದು ನಾಡಿನ ಸಾಧು ಸಂತರು, ಗಣ್ಯ ವ್ಯಕ್ತಿಗಳು, ಶ್ರೀಮಠದ ಸದ್ಭಕ್ತರು, ಪರಮ ಪೂಜ್ಯರ ಶಿಷ್ಯ ವೃಂದದವರು ಕಾರ್ಯಕ್ರಮದಲ್ಲಿ ಭಾಗವಹಿಸುವರು
ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...