Thursday, June 18, 2026
Thursday, June 18, 2026

Siddaramaiah ನಾನು ಹಿಂದೂ ವಿರೋಧಿಯಲ್ಲ- ಮುಖ್ಯಮಂತ್ರಿ ಸಿದ್ಧರಾಮಯ್ಯ

Date:

Siddaramaiah ರಾಮಲಲ್ಲ ಮೂರ್ತಿ ಪ್ರತಿಷ್ಠಾಪನಾ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ ಎಂಬ ನಮ್ಮ ಪಕ್ಷದ ಹಿರಿಯ ನಾಯಕರ ನಿಲುವನ್ನು ಬೆಂಬಲಿಸುತ್ತೇನೆ ಎಂಬ ಹೇಳಿಕೆಯ ವಿರುದ್ಧ ರಾಜ್ಯದ
ಬಿಜೆಪಿ ನಾಯಕರು ಯಥಾಪ್ರಕಾರ ನನ್ನನ್ನು ಹಿಂದು ವಿರೋಧಿ ಎಂದು ಚಿತ್ರಿಸಲು ನಾಲಗೆ ಹರಿಬಿಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ನಾನು ಹಿಂದೂ ವಿರೋಧಿಯೂ ಅಲ್ಲ, ಶ್ರೀರಾಮಚಂದ್ರನ ವಿರೋಧಿಯೂ ಅಲ್ಲ. ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಬಿಜೆಪಿ ನಾಟಕ ಮಂಡಳಿಯ ಪ್ರದರ್ಶನವೆಲ್ಲ ಮುಗಿದ ನಂತರ ಅರಾಮವಾಗಿ ಒಂದು ದಿನ ನಾನು ಅಯೋಧ್ಯೆಗೆ ಹೋಗಿ ರಾಮ ಮಂದಿರಕ್ಕೂ ಭೇಟಿ ನೀಡಿ ಬರಬೇಕೆಂದು ತೀರ್ಮಾನ ಮಾಡಿದ್ದೇನೆ. ನನ್ನನ್ನು ಶ್ರೀ ರಾಮಚಂದ್ರನ ವಿರೋಧಿಯೆಂದು ಕತೆ ಕಟ್ಟುತ್ತಿರುವವರ ಜೊತೆಗೂ ಆ ಭೇಟಿಯ ಪೋಟೋಗಳನ್ನು ಹಂಚಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

ನಾನು ಈಗಾಗಲೇ ತಿಳಿಸಿರುವಂತೆ ಪ್ರಧಾನಿ
ನರೇಂದ್ರ ಮೋದಿ
ಮತ್ತು ಸಂಘ ಪರಿವಾರದ ನಾಯಕರು ಮೂರ್ತಿ ಪ್ರತಿಷ್ಠಾಪನಾ ಧಾರ್ಮಿಕ ಕಾರ್ಯಕ್ರಮವನ್ನು ರಾಜಕೀಯ ಪ್ರೊಪಗಾಂಡ ಕಾರ್ಯಕ್ರಮ ಮಾಡಿರುವುದನ್ನು ಪ್ರತಿಭಟಿಸಿ ನಾವು ಆ ಸಮಾರಂಭದಿಂದ ದೂರ ಇದ್ದೇವೆಯೇ ಹೊರತು ನಾವೇನು ದೇವರು-ಧರ್ಮದ ವಿರೋಧಿಗಳಲ್ಲ ಎಂದು ಹೇಳಿದ್ದಾರೆ.

Siddaramaiah ನಾವು ಮಾತ್ರವಲ್ಲ ಹಿಂದೂ ಧರ್ಮದ ಹಿರಿಯ ಸ್ವಾಮೀಜಿಗಳಾದ ಶಂಕರಾಚಾರ್ಯರು ಕೂಡಾ ಜನವರಿ 22ರಂದು ಅಯೋಧ್ಯೆಗೆ ಹೋಗುವುದಿಲ್ಲ ಎಂದು ಹೇಳಿದ್ದಾರೆ. ಇದರ ಬಗ್ಗೆ
ಬಿಜೆಪಿ
ಮತ್ತು ಆರ್.ಎಸ್.ಎಸ್ ಪ್ರತಿಕ್ರಿಯೆ ಏನಿರಬಹುದು ಎಂಬ ಕುತೂಹಲ ನನಗೂ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...