Tuesday, October 1, 2024
Tuesday, October 1, 2024

Federation of Karnataka Exploited Communitiesಸಂವಿಧಾನ,ಸಾಮಾಜಿಕ ನ್ಯಾಯ,ಸಹಬಾಳ್ವೆ & ಸ್ವಾಭಿಮಾನ ಸಂರಕ್ಷಣೆ ಜಾಗೃತಿಗಾಗಿ ರಾಜ್ಯಮಟ್ಟದ ಸಮಾವೇಶ

Date:

Federation of Karnataka Exploited Communities ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ (ದಲಿತ, ಹಿಂದುಳಿದ, ಆದಿವಾಸಿ, ಅಲೆಮಾರಿ, ಅಲ್ಪಸಂಖ್ಯಾತ ಮತ್ತು ಜನಪರ ಸಂಘಟನೆಗಳು) ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ (ರಿ.) ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ, ಸಾಮಾಜಿಕ ನ್ಯಾಯ, ಸಹಬಾಳ್ವೆ ಮತ್ತು ಸ್ವಾಭಿಮಾನದ ಸಂರಕ್ಷಣೆಗಾಗಿ ಶೋಷಿತರ ಜಾಗೃತಿಗಾಗಿ ರಾಜ್ಯ ಸಮಾವೇಶವನ್ನು 28 ಜನವರಿ 2024, ಭಾನುವಾರ, ಶ್ರೀ ಶ್ರೀ ಶ್ರೀ ಬಸವ ಮೂರ್ತಿ ಮಾದಾರ ಚನ್ನಯ್ಯ ಪೀಠದ ಪಕ್ಕದ ಮೈದಾನ ಚಿತ್ರದುರ್ಗದಲ್ಲಿ ಹಮ್ಮಿಕೊಳ್ಳಲಾಗಿದೆ.

ಇದರ ಪೂರ್ವಭಾವಿಯಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಶೋಷಿತ ಸಮುದಾಯಗಳೊಂದಿಗೆ ಪೂರ್ವಭಾವಿ ಸಭೆಯನ್ನು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಅಧ್ಯಕ್ಷರಾದ ಕೆ ಎಂ ರಾಮಚಂದ್ರಪ್ಪನವರ ನೇತೃತ್ವದಲ್ಲಿ ದಿನಾಂಕ 19: 01: 2024ರ ಶುಕ್ರವಾರ ನಗರದ ಬಾಲರಾಜ್ ಅರಸ್ ರಸ್ತೆಯ ಬೋವಿ ಸಮುದಾಯದಲ್ಲಿ ನಡೆಸುತ್ತಿದೆ.

Federation of Karnataka Exploited Communities ಈ ಸಭೆಗೆ ರಾಜ್ಯದ ಎಲ್ಲಾ ಶೋಷಿತ ಸಮುದಾಯಗಳ ರಾಜ್ಯ ನಾಯಕರು ಆಗಮಿಸುತ್ತಿದ್ದು ಶಿವಮೊಗ್ಗ ಜಿಲ್ಲೆಯ ಎಲ್ಲಾ ಶೋಷಿತ ಸಮುದಾಯದ ಮುಖಂಡರುಗಳು ನಾಗರಿಕರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಲಹೆ ಸೂಚನೆಗಳನ್ನು ನೀಡಬೇಕೆಂದು ಈ ಮೂಲಕ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಶಿವಮೊಗ್ಗ ಜಿಲ್ಲೆಯ ಸಂಚಾಲಕರುಗಳಾದ ಕಲಗೋಡು ರತ್ನಾಕರ್ ,ಆರ್ ಶಿವಣ್ಣ , ಎಸ್ ರವಿಕುಮಾರ್ ಮುಕ್ತಿಯರ್ ಅಹಮದ್, ಖಲೀಂ ಪಾಷ, ಎಸ್ ಟಿ. ಹಾಲಪ್ಪ , ನಾಗರಾಜ್ ಕಂಕಾರಿ, ಕೆ ರಂಗನಾಥ್, ಎಸ್ ಎಂ ಶರತ್ , ಜ್ಯೋತಿ ಅರಳಪ್ಪ , ಎಂ ಪ್ರವೀಣ್ ಕುಮಾರ್, ಅನಿತಾ ಕುಮಾರಿ, ನಾಗೇಶ್ ನಾಯ್ಕ್,ವಿಶ್ವನಾಥ್, ಎಸ್.ಬಸವರಾಜ್ ರವರುಗಳು, ಜಂಟಿ ಪತ್ರಿಕಾ ಹೇಳಿಕೆ ಮುಖಾಂತರ ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...