Lok Sabha Elections ಮುಂಬರುವ ಲೋಕಸಭೆ ಚುನಾವಣೆ-2024 ರ ಹಿನ್ನೆಲೆಯಲ್ಲಿ ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿವತಿಯಿಂದ ಜನವರಿ 21 ರಂದು ಬೆಳಗ್ಗೆ 9 ಗಂಟೆಯಿಂದ ಕಲಾವಿದರಿಗಾಗಿ ‘ವ್ಯಂಗ್ಯಚಿತ್ರ ಪ್ರದರ್ಶನ ಮತ್ತು ಕಾರ್ಯಾಗಾರ’ವನ್ನು ವಿಧಾನಸೌಧ ಪೂರ್ವದಿಕ್ಕಿನ ಬಸವಣ್ಣನ ಪ್ರತಿಮೆ ಎದುರುಗಡೆಯಲ್ಲಿ ಏರ್ಪಡಿಸಲಾಗಿದೆ.
ವೃತ್ತಿಪರ ಮತ್ತು ಹವ್ಯಾಸಿ ವ್ಯಂಗ್ಯಚಿತ್ರಕಾರರು, ಹವ್ಯಾಸಿ ಕಲಾವಿದರು, ಕಲಾ ವಿದ್ಯಾರ್ಥಿಗಳು ಈ ಜಾಗೃತಿ ಅಭಿಯಾನದಲ್ಲಿ ಭಾಗವಹಿಸಬಹುದಾಗಿದೆ.
ಚುನಾವಣೆ, ಮತದಾನದ ಮಹತ್ವ ಸಾರುವ, ಮತದಾನ ಪ್ರಕ್ರಿಯೆಯಲ್ಲಿ ನಾಗರಿಕರು ಭಾಗವಹಿಸುವುದನ್ನು ಪ್ರೋತ್ಸಾಹಿಸುವಂತಹ ವ್ಯಂಗ್ಯಚಿತ್ರಗಳನ್ನು ರಚಿಸಬೇಕು. ಆಯ್ಕೆಯಾದ 100 ವ್ಯಂಗ್ಯಚಿತ್ರಗಳನ್ನು ಜ.21ರಂದು ಪ್ರದರ್ಶನಕ್ಕೆ ಇರಿಸಲಾಗುತ್ತದೆ. ಅತ್ಯುತ್ತಮ 25 ಚಿತ್ರಗಳನ್ನು ಮತದಾನ ಜಾಗೃತಿ, ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗುತ್ತದೆ ಹಾಗೂ ಆ ವ್ಯಂಗ್ಯಚಿತ್ರಗಳಿಗೆ ಗೌರವಧನವನ್ನು ಸಹ ನೀಡಲಾಗುತ್ತದೆ.
ಷರತ್ತು ಹಾಗು ನಿಬಂಧನೆಗಳು
- ಚಿತ್ರಗಳಲ್ಲಿ ಯಾವುದೇ ರಾಜಕೀಯ ಪಕ್ಷಗಳ ಪ್ರಚಾರ ಮತ್ತು ವ್ಯಂಗ್ಯ ಇರಬಾರದು
- ಚಿತ್ರಗಳು ಹೊಸದಾಗಿದ್ದು, ಈ ಹಿಂದೆ ಯಾವುದೇ ಪ್ರಚಾರದಲ್ಲಿ ಬಳಸಿಕೊಂಡಿರಬಾರದು.
- ಚಿತ್ರಗಳು ಸ್ವಂತ ರಚನೆಯಲ್ಲಿರಬೇಕು. (ಗ್ರಾಫಿಕ್ಸ್, ಕುಂಚ, ಪೆನ್ಸಿಲ್, ಪೆನ್ ಇತ್ಯಾದಿ) ಚಿತ್ರಗಳನ್ನು 1800X2400 ಅಳೆತೆಯ ಡಿಜಿಟಲ್ ಆವೃತ್ತಿಯಲ್ಲಿ ಸಲ್ಲಿಸಬೇಕು.
- ಆಯ್ಕೆಯಾದ ಚಿತ್ರಗಳ ಅಸಲಿ ಪ್ರತಿಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕು. ಆಯ್ಕೆಯಾದ ಮೊದಲ 25 ಚಿತ್ರಗಳಿಗೆ ಗೌರವಧನ ನೀಡಲಾಗುವುದು.
- ಚಿತ್ರಗಳನ್ನು mediacellceokarnataka@gmail.com ವಿಳಾಸಕ್ಕೆ ಕಳುಹಿಸ ಬೇಕು ಹಾಗೂ ಇಮೇಲ್ನಲ್ಲಿ ತಮ್ಮ ಹೆಸರು, ವಿಳಾಸ ಹಾಗೂ ಮೋಬೈಲ್ ಸಂಖ್ಯೆಯನ್ನು ತಪ್ಪದೇ ನಮೂದಿಸಿರಬೇಕು.
- ಚಿತ್ರಗಳನ್ನು ಕಳುಹಿಸಲು ಕೊನೆಯ ದಿನಾಂಕ 19-01-2024 ಸಂಜೆ 5:00 ಗಂಟೆಯ ಒಳಗಾಗಿ
- ಚಿತ್ರಗಳನ್ನು ಆಯ್ಕೆ ಮಾಡುವ ಹಾಗೂ ತಿರಸ್ಕರಿಸುವ ಅಧಿಕಾರ ಮುಖ್ಯ ಚುನಾವಣಾಧಿಕಾರಿ ಕರ್ನಾಟಕ, ಇವರಿಗೆ ಇರುತ್ತದೆ.
- ಸ್ಥಳದಲ್ಲೇ ಚಿತ್ರ ರಚನೆ ಮಾಡುವ ಕಲಾವಿದರು ದಿನಾಂಕ 21-01-2024 ರಂದು ಬೆಳಗ್ಗೆ 9:00 ಗಂಟೆಗೆ ಹಾಜರಿರಬೇಕು.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ಮಾಧ್ಯಮ ಘಟಕ, ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಶೇಷಾದ್ರಿ ರಸ್ತೆ, ಬೆಂಗಳೂರು. ದೂರವಾಣಿ: 9480841211.