ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿವಮೊಗ್ಗ ಜಿಲ್ಲೆ ಹಾಗೂ ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಸೊಸೈಟಿ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಜ.19 ಮತ್ತು 20 ರಂದು ಬೆಳಿಗ್ಗೆ 10 ರಿಂದ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ-2005 ರ ಅನುಷ್ಟಾನದಲ್ಲಿ ಭಾಗಿದಾರ ಇಲಾಖೆಗಳ ಪಾತ್ರದ ಕುರಿತಂತೆ ಎರಡು ದಿನಗಳ ಜಿಲ್ಲಾ ಮಟ್ಟದ ಓರಿಯಂಟೇಷನ್ ತರಬೇತಿ ಕಾರ್ಯವನ್ನು ಚೈತನ್ಯ, ಆಲ್ಕೊಳ ಇಲ್ಲಿ ಆಯೋಜಿಸಲಾಗಿದೆ.
Department of Women and Child Development ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎನ್.ಚಂದನ್ ಕಾರ್ಯಕ್ರಮ ಉದ್ಘಾಟಿಸುವರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಬಿ.ಹೆಚ್.ಕೃಷ್ಣಪ್ಪ ಅಧ್ಯಕ್ಷತೆ ವಹಿಸುವರು.
ಎಸ್‍ಎಂಎಸ್‍ಎಸ್ ನಿರ್ದೇಶಕ ಫಾದರ್ ಕ್ಲಿಫರ್ಡ್ ರೋಶನ್ ಪಿಂಟೊ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಡಾ.ಸಂತೋಷಕುಮಾರ್ ಹೆಚ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ಚಂದ್ರಪ್ಪ ಎನ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರೆಂದು ತಿಳಿಸಲಾಗಿದೆ