Thursday, March 19, 2026
Thursday, March 19, 2026

Akashvani Bhadravati ಆಕಾಶವಾಣಿ ಭದ್ರಾವತಿ ಕೇಂದ್ರದಲ್ಲಿನ ಕ್ಯಾಶುಯಲ್ ಅನೌನ್ಸರ್ಸ್ ಗೆ ಅರ್ಜಿ ಆಹ್ವಾನ

Date:

Akashvani Bhadravati ಆಕಾಶವಾಣಿ ಭದ್ರಾವತಿ ಕೇಂದ್ರದಲ್ಲಿ ಸಾಂದರ್ಭಿಕ ಉದ್ಘೋಷಕರಾಗಿ ಅಗತ್ಯಬಿದ್ದಾಗ ಕಾರ್ಯನಿರ್ವಹಿಸಲು ಆಸಕ್ತಿಯುಳ್ಳವರು ಅರ್ಜಿ ಸಲ್ಲಿಸಬಹುದಾಗಿದೆ.

ಆಯ್ಕೆಯು ಲಿಖಿತ ಪರೀಕ್ಷೆ, ಧ್ವನಿ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನಡೆಯಲಿದೆ.. ಇದರಲ್ಲಿ ತೇರ್ಗಡೆಯಾದವರು ಮಾತ್ರ ಸಾಂದರ್ಭಿಕ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಲು ಅರ್ಹರಾಗುತ್ತಾರೆ.

ವಯೋಮಿತಿ ಗರಿಷ್ಠ 50 ವರ್ಷಗಳು. ಅರ್ಜಿ ಸಲ್ಲಿಸುವವರು ಪದವೀಧರರಾಗಿರಬೇಕು. ಭದ್ರಾವತಿ / ಶಿವಮೊಗ್ಗ ನಗರದಲ್ಲಿ ವಾಸಿಸುತ್ತಿರುವವರಿಗೆ ಹೆಚ್ಚಿನ ಆದ್ಯತೆ. ಕನ್ನಡ ಭಾಷೆಯ ಸ್ಪಷ್ಟ ಉಚ್ಚಾರಣೆ, ಸಾಹಿತ್ಯ, ಸಂಗೀತ, ಕಲೆ, ಸಂಸ್ಕೃತಿಗಳ ಪರಿಜ್ಞಾನ, ದೈನಂದಿನ ಆಗುಹೋಗುಗಳ ಬಗ್ಗೆ ತಿಳಿವಳಿಕೆ ಅತ್ಯವಶ್ಯ. ಇಂಗ್ಲೀಷ್ ಭಾಷಾ ಜ್ಞಾನ, ಕಂಪ್ಯೂಟರ್ ಜ್ಞಾನ, ಕಂಪ್ಯೂಟರ್‌ಗಳಲ್ಲಿ ಕಾರ್ಯಕ್ರಮ ಸಿದ್ಧಪಡಿಸುವ ಸಾಮರ್ಥ್ಯ ಅಪೇಕ್ಷಣೀಯ.

Akashvani Bhadravati ಆಸಕ್ತರು ನಿಗದಿತ ಅರ್ಜಿ ಫಾರಂಗಳನ್ನು ಶನಿವಾರ, ಭಾನುವಾರ, ಮತ್ತು ರಜಾದಿನಗಳನ್ನು ಹೊರತುಪಡಿಸಿ ಕಛೇರಿಯ ಕೆಲಸದ ವೇಳೆಯಲ್ಲಿ ಪಡೆಯಬಹುದಾಗಿರುತ್ತದೆ.ಆಕಾಶವಾಣಿ ವೆಬ್‌ಸೈಟ್ ವಿಳಾಸದಲ್ಲಿ ಅರ್ಜಿ ನಮೂನೆ ಡೌನ್‌ಲೋಡ್ ಮಾಡಿಕೊಂಡು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15.02.2024

ಅರ್ಜಿ ಶುಲ್ಕ 354 ರೂಪಾಯಿಗಳು, ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದವರಿಗೆ ಅರ್ಜಿ ಶುಲ್ಕ 266 ರೂಪಾಯಿಗಳು.

ಭರ್ತಿಮಾಡಿದ ಅರ್ಜಿಯನ್ನು ನೆಫ್ಟ್ / ಆನ್ ಲೈನ್ ಮೂಲಕ ಪಾವತಿಸಿದ ಅರ್ಜಿ ಶುಲ್ಕದ ರಶೀದಿಯ ಜೊತೆಗೆ ಆಕಾಶವಾಣಿ ವಿಳಾಸಕ್ಕೆ ಹಿಂತಿರುಗಿಸಬೇಕು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...