Friday, June 19, 2026
Friday, June 19, 2026

N.B.Shridar ಪಶುತಜ್ಞ & ಲೇಖಕ ಪ್ರಾಧ್ಯಾಪಕ ಡಾ.ಎನ್.ಬಿ.ಶ್ರೀಧರ್ ಅವರಿಗೆ ಶ್ರೇಷ್ಠ ಶಿಕ್ಷಕ ಪ್ರಶಸ್ತಿ

Date:

N.B.Shridar ಮಲೆನಾಡಿನ ಖ್ಯಾತ ಪಶುವೈದ್ಯಕೀಯ ವಿಜ್ಞಾನಿ, ಸಾಹಿತಿ, ಚಿಂತಕ, ಬರಹಗಾರ ಡಾ: ಎನ್.ಬಿ.ಶ್ರೀಧರ, ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು, ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಇವರಿಗೆ ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ ಇದು ಇವರು ಉತ್ತಮ ಬೋಧನೆ, ಸಂಶೋಧನೆ ಮತ್ತು ವಿಸ್ತರಣಾ ಕ್ಷೇತ್ರದಲ್ಲಿ ಮಾಡಿದ ಗಣನೀಯ ಸಾಧನೆಗಾಗಿ “ “ಶ್ರೇಷ್ಠ ಶಿಕ್ಷಕ” ಪ್ರಶಸ್ತಿ ನೀಡಿ ವಿಶ್ವವಿದ್ಯಾಲಯದ 19 ನೇ ಸಂಸ್ಥಾಪನೆಯ ದಿನದಂದು ಸನ್ಮಾನಿಸಿದೆ.

ಇವರು ಪಶುವೈದ್ಯಕೀಯ ರಂಗದಲ್ಲಿ ಸಹಸ್ರಾರು ವಿದ್ಯಾರ್ಥಿಗಳಿಗೆ ಔಷಧಶಾಸ್ತç ಮತ್ತು ವಿಷಶಾಸ್ತ್ರ ವಿಷಯವನ್ನು ಬೋಧನೆ ಮಾಡಿರುವುದನ್ನು, 200 ಕ್ಕೂ ಹೆಚ್ಚಿನ ಸ್ನಾತಕೋತ್ತರ ಮತ್ತು ಡಾಕ್ಟರೇಟ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿರುವುದನ್ನು, ಜಾನುವಾರುಗಳಲ್ಲಿ ಬರುವ ಅನೇಕ ರೀತಿಯ ಸಸ್ಯಜನ್ಯ ಶಿಲೀಂದ್ರವಿಷಜನ್ಯ ಮತ್ತಿತರ ನಿಗೂಢ ಕಾಯಿಲೆಗಳ ಬಗ್ಗೆ ಸಂಶೋಧನೆ ನಡೆಸಿ N.B.Shridar ಅವುಗಳಿಗೆ ಕಾರಣ ಮತ್ತು ಚಿಕಿತ್ಸೆಯನ್ನು ಪತ್ತೆ ಮಾಡಿ ಸಹಸ್ರಾರು ಜಾನುವಾರುಗಳ ಉಳಿವಿಗೆ ಕಾರಣರಾಗಿರುವುದನ್ನು ಮತ್ತು ರೈತರ ಮಾಹಿತಿಗಾಗಿ ಅನೇಕ ತಾಂತ್ರಿಕ ಮಾಹಿತಿಗಳನ್ನು ವಿವಿಧ ಮಾಧ್ಯಮಗಳ ಮೂಲಕ ನೀಡುತ್ತಿರುವುದನ್ನು, ಬಂಜೆತನದಿಂದ ಬಳಲುತ್ತಿರುವ ಎಷ್ಟೋ ರಾಸುಗಳಿಗೆ ಸೂಕ್ತ ಚಿಕಿತ್ಸೆ ನೀಡಿ ಉತ್ಪಾದಕವಾಗಿ ಮಾಡಿರುವುದನ್ನು ಹಾಗೂ ಇತ್ತೀಗಷ್ಟೆ ಇವರಿಗೆ ಭಾರತೀಯ ಪಶುವೈದ್ಯಕೀಯ ಔಷಧಶಾತ್ರಜ್ಞರ ಮತ್ತು ವಿಷಶಾಸ್ತ್ರಜ್ಞರ ಸಂಘವು ರಾಷ್ಟ್ರೀಯ ಫೆಲೋ ಪ್ರಶಸ್ತಿ ನೀಡಿರುವುದನ್ನು ಮತ್ತು ಕರ್ನಾಟಕ ಪಶುವೈದ್ಯ ಸಂಘವು ಜೀವ ಮಾನದ ಶ್ರೇಷ್ಟ ಪಶುವೈದ್ಯ ಪ್ರಶಸ್ತಿ ನೀಡಿರುವುದನ್ನು ಈ ಸಂದರ್ಭದಲ್ಲಿ ನೆನೆಯಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...