Friday, December 5, 2025
Friday, December 5, 2025

Ayodhya Ram Mandir Mahotsav ಅಯೋಧ್ಯೆ ರಾಮಮಂದಿರ ಮಹೋತ್ಸವ ಸಂದರ್ಭ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಕಟ್ಟೆಚ್ಚರ- ಸಿಎಂ ಸಿದ್ಧರಾಮಯ್ಯ

Date:

Ayodhya Ram Mandir Mahotsav ಅಯೋಧ್ಯೆಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಂತಿ-ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಈಗಾಗಲೇ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ಅಮಾಯಕ ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಸುದ್ದಿಗಳು ಕಿವಿಗೆ ಬಿದ್ದ ತಕ್ಷಣ ಆತುರಕ್ಕೆ ಬಿದ್ದು ಆವೇಶಕ್ಕೆ ಒಳಗಾಗದೆ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಬೇಕು. ಯಾವುದೇ ಕಾರಣಕ್ಕೂ ಯಾರೂ ಕಾನೂನನ್ನು ಕೈಗೆತ್ತಿಕೊಳ್ಳುವ ಅಧಿಕಪ್ರಸಂಗತನವನ್ನು ಮಾಡಬಾರದು.
ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆದರೆ ಅದಕ್ಕೆ ಕಾಂಗ್ರೆಸ್ ಸರ್ಕಾರ ಹೊಣೆಯಾಗುತ್ತದೆ ಎಂದು ಬಿಜೆಪಿ
ರಾಜ್ಯಾಧ್ಯಕ್ಷರಾದ
ಬಿ ವೈ ವಿಜಯೇಂದ್ರ ಅವರು
ಹೇಳಿದ್ದಾರೆ. ಈ ಹೇಳಿಕೆಯಲ್ಲಿ ಶಾಂತಿ ಕಾಪಾಡಿಕೊಂಡು ಬರಬೇಕೆಂಬ ಸದಾಶಯಕ್ಕಿಂತ ಹೆಚ್ಚಾಗಿ ಬೆದರಿಕೆ ಮತ್ತು ಪ್ರಚೋದನೆಯ ದನಿ ಇದೆ. ಸರ್ಕಾರಕ್ಕೆ ಅದರ ಕರ್ತವ್ಯದ ಅರಿವಿದೆ. ತಪ್ಪು ನಡೆದರೆ ಕಾನೂನು ಅದರ ಕೆಲಸ ಮಾಡುತ್ತದೆ.
ಬಿಜೆಪಿಯ ಕೆಲವು ಶಾಸಕರು, ಸಂಸದರು ಈಗಾಗಲೇ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿರುವುದನ್ನು ರಾಜ್ಯ ಸರ್ಕಾರ ಗಮನಿಸಿದೆ. ಇಂತಹವರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರು ಕಠಿಣ ಕ್ರಮಗಳನ್ನು ಕೈಗೊಂಡರೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸರ್ಕಾರದ ಕೆಲಸ ಸುಲಭವಾಗುತ್ತದೆ ಎಂದು ಹೇಳಿದ್ದಾರೆ.

Ayodhya Ram Mandir Mahotsav ದೇವರು – ಧರ್ಮ – ಪೂಜೆ – ಆರಾಧನೆಗಳೆಲ್ಲ ವೈಯಕ್ತಿಕವಾದುದು. ಇದನ್ನು ವೈಯಕ್ತಿಕ ಮಟ್ಟದಲ್ಲಿಯೇ ಉಳಿಸಿಕೊಂಡರೆ ದೇವರು – ಧರ್ಮ ಎಲ್ಲರಿಗೂ ಗೌರವ ಮತ್ತು ಸಮಾಜಕ್ಕೂ ಕ್ಷೇಮ. ಇದು ಎಲ್ಲ ಧರ್ಮಾನುಯಾಯಿಗಳಿಗೂ ಅನ್ವಯಿಸುತ್ತದೆ ಎಂದು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...