Tuesday, February 3, 2026
Tuesday, February 3, 2026

Subhas Chandra Bose ನೇತಾಜಿ ಅವರ ತತ್ವಾದರ್ಶಗಳು ನಮಗೆ ದಾರಿ ದೀಪವಾಗಲಿ – ಸಿದ್ಧರಾಮಯ್ಯ

Date:

Subhas Chandra Bose ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದ ಅಂಗವಾಗಿ ನೇತಾಜಿಯವರ ಪ್ರತಿಮೆಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡಿ, ಮಾತನಾಡಿದರು.

ಸುಭಾಷ್ ಚಂದ್ರ ಬೋಸ್ ಅಪ್ರತಿಮ ದೇಶಪ್ರೇಮಿ ಹಾಗೂ ಸ್ವಾತಂತ್ರ್ಯ ಹೋರಾಟಗಾರರು.
ಬೋಸ್ ಅವರ 127ನೇ ಜಯಂತಿಯನ್ನು ಆಚರಿಸುತ್ತಿದ್ದು, ಇಂದು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸ್ಮರಿಸಿ, ಗೌರವಿಸಿದ್ದೇವೆ. ಕಾಂಗ್ರೆಸ್ ಅಧ್ಯಕ್ಷರಾಗಿ ಸ್ವಾತಂತ್ರ್ಯ ಹೋರಾಟದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರು. ಗಾಂಧೀಜಿ ಹಾಗೂ ಸುಭಾಷ್ ಚಂದ್ರ ಬೋಸ್ ನಡುವೆ ಸ್ವಾತಂತ್ರ್ಯ ಹೋರಾಟದ ಹಾದಿಯ ಬಗ್ಗೆ ಭಿನ್ನಾಭಿಪ್ರಾಯ ಮೂಡಿತ್ತು. ಮಹಾತ್ಮ ಗಾಂಧೀಜಿ ಶಾಂತಿ, ಅಹಿಂಸೆ ಮೂಲಕ ಸ್ವಾತಂತ್ರ್ಯ ಗಳಿಸಬೇಕು ಎಂದರೆ, ಸುಭಾಷ್ ಚಂದ್ರ ಬೋಸ್ ಅವರಿಗೆ ಅದರ ತದ್ವಿರುದ್ಧವಾದ ನಿಲುವು ಇತ್ತು. ಬೇರೆ ವಿಚಾರಗಳಲ್ಲಿ ಗಾಂಧೀಜಿಯವರ ಬಗ್ಗೆ ಅಪಾರವಾದ ಗೌರವವಿತ್ತು. ಈ ವಿಚಾರದಲ್ಲಿ ಮಾತ್ರ ಆಲೋಚನೆಗಳಲ್ಲಿ ಭಿನ್ನಾಭಿಪ್ರಾಯ ಇತ್ತು ಎಂದು ಹೇಳಿದ್ದಾರೆ.

Subhas Chandra Bose ಭಾರತೀಯ ರಾಷ್ಟ್ರೀಯ ಸೇನೆಯನ್ನು ಸ್ಥಾಪಿಸಿ ಅದರ ಮುಖ್ಯಸ್ಥರಾಗಿದ್ದರು. ಜಪಾನ್ ದೇಶದಲ್ಲಿ ಅವರು ವಿಮಾನ ದುರಂತದಲ್ಲಿ ಅವರು ಸಾವಿಗೀಡಾದರು. ಅಪ್ರತಿಮ ಸ್ವಾತಂತ್ರ್ಯ ಪ್ರೇಮಿ, ದೇಶಪ್ರೇಮಿಯಾಗಿದ್ದ ಸುಭಾಷ್ ಚಂದ್ರ ಬೋಸ್ ಅವರು ನಮಗೆಲ್ಲಾ ಆದರ್ಶ. ಅವರ ಆದರ್ಶಗಳನ್ನು ನಾವೆಲ್ಲರೂ ಅನುಸರಿಸುವುದೇ ಅವರಿಗೆ ಸಲ್ಲಿಸುವ ಗೌರವ. ಅವರ ತತ್ವಾದರ್ಶಗಳು ನಮಗೆ ದಾರಿದೀಪವಾಗಲಿ ಎಂದು ಹಾರೈಸುತ್ತೇನೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಿನ್ನೆ...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...