Saturday, December 6, 2025
Saturday, December 6, 2025

Lokhande Snehal Sudhakar ಸಾಂತ್ವನ‌ ಕೇಂದ್ರಗಳ ಬಗ್ಗೆ ಮಹಿಳೆಯರಲ್ಲಿ ಹೆಚ್ಚು ಅರಿವು ಮೂಡಿಸಬೇಕಿದೆ- ಸ್ನೇಹಲ್ ಸುಧಾಕರ್ ಲೋಖಂಡೆ

Date:

Lokhande Snehal Sudhakar ಕೌಟುಂಬಿಕ ಕಲಹ ಹಾಗೂ ಹಲವು ರೀತಿಯ ಕಿರುಕುಳಕ್ಕೊಳಗಾದ ಮಹಿಳೆಯರಿಗೆ ನೆರವು ನೀಡುವ ಸಾಂತ್ವನ ಕೇಂದ್ರಗಳ ಕುರಿತು ಜಿಲ್ಲೆಯಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಜಿ.ಪಂ.ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ ಜಿಲ್ಲಾ ಪಂಚಾಯತ್‍ನಲ್ಲಿ ಜ.23 ರಂದು ಏರ್ಪಡಿಸಲಾಗಿದ್ದ ಜಿಲ್ಲಾ ಸಮನ್ವಯ ಸಮತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಿರುಕುಳಕ್ಕೊಳಗಾದ ಮಹಿಳೆಯರಿಗೆ ನೆರವು ಒದಗಿಸಲು ಶಿವಮೊಗ್ಗದಲ್ಲಿ ಸಖಿ ಮತ್ತು ತಾಲ್ಲೂಕುಗಳಲ್ಲಿ 06 ಸಾಂತ್ವನ ಕೇಂದ್ರಗಳನ್ನು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಸಲಾಗುತ್ತಿದೆ. ಅನೇಕ ಮಹಿಳೆಯರು ಪ್ರತಿದಿನ ಒಂದಿಲ್ಲೊಂದು ತೊಂದರೆ ಅನುಭವಿಸುತ್ತಿರುತ್ತಾರೆ. ಇಂತಹ ಸಾಂತ್ವನ ಕೇಂದ್ರಗಳ ಬಗ್ಗೆ ಅವರಿಗೆ ಅರಿವಿರಬೇಕು. ಆದ್ದರಿಂದ ಗ್ರಾ.ಪಂ ಗಳಲ್ಲಿ, ಕಚೇರಿಗಳಲ್ಲಿ, ಬಾಪೂಜಿ ಸೇವಾ ಕೇಂದ್ರಗಳು ಮತ್ತು ಮಹಿಳೆಯರ ಒಕ್ಕೂಟಗಳು ಸೇರುವ ಸ್ಥಳಗಳಲ್ಲಿ ಈ ಕೇಂದ್ರಗಳ ಕುರಿತಾದ ಪೋಸ್ಟರ್‍ಗಳನ್ನು ಹಾಕಬೇಕು. ಆಶಾ-ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಮಹಿಳೆಯರಿಗೆ ತಿಳಿಸಬೇಕು.

ವರದಕ್ಷಿಣೆ ಕಿರುಕುಳ, ಕೌಟುಂಬಿಕ ದೌರ್ಜನ್ಯ, ಅತ್ಯಾಚಾರ, ವಿಚ್ಚೇದನ, ಲೈಂಗಿಕ ಕಿರುಕುಳ, ಕಲಹ ಸೇರಿದಂತೆ ಇತರೆ ಸಮಸ್ಯೆಗಳಿಗೆ ಒಳಗಾದ ಮಹಿಳೆಯರ ಅಹವಾಲನ್ನು ಸಮಗ್ರವಾಗಿ ಆಲಿಸಿ, ಆಪ್ತಸಮಾಲೋಚನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಜೊತೆಗೆ ಅನುಸರಣೆ ಕೈಗೊಳ್ಳುವುದು ತುಂಬಾ ಮುಖ್ಯವಾಗುತ್ತದೆ. ಪ್ರತಿ ಪ್ರಕರಣವನ್ನು ಫಾಲೋ ಅಪ್ ಮಾಡಬೇಕು. ಪೊಲೀಸರು ಮತ್ತು ವಕೀಲರ ಬಳಿ ಹೋಗುವ ಮುನ್ನ ನಿಮ್ಮ ಬಳಿ ಹಲವಾರು ಪ್ರಕರಣಗಳು ಬರುತ್ತವೆ. ಅವನ್ನು ಸಮರ್ಪಕವಾಗಿ ನಿರ್ವಹಿಸಬೇಕೆಂದು ಸೂಚನೆ ನೀಡಿದರು.

2023 ರ ಏಪ್ರಿಲ್‍ನಿಂದ ಡಿಸೆಂಬರ್‍ವರೆಗೆ ಜಿಲ್ಲೆಯಲ್ಲಿ 563 ಪ್ರಕರಣಗಳು ಬಂದಿದ್ದು 485 ನ್ನು ಸಾಂತ್ವನ ಕೇಂದ್ರದ ಮೂಲಕ, ಸಂರಕ್ಷಣಾಧಿಕಾರಿಗಳು 08, ಪೊಲೀಸ್ ಠಾಣೆಗೆ 49 ವರ್ಗಾವಣೆ ಮಾಡಿ ಒಟ್ಟು 542 ಪ್ರಕರಣ ಇತ್ಯರ್ಥಪಡಿಸಿ 21 ಬಾಕಿ ಇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಬಿ.ಹೆಚ್.ಕೃಷ್ಣಪ್ಪ ತಿಳಿಸಿದರು.

Lokhande Snehal Sudhakar ದುಡಿಯುವ ಮಹಿಳೆಯರಿಗೆ ಅನುಕೂಲವಗುವಂತೆ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಚಿಕ್ಕ ಮಕ್ಕಳಿಗೆ ಹಾಲುಣಿಸುವುದು ಹಾಗೂ ಇತರೆ ಪೋಷಣೆಗೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯತ್ ಆವರಣ ಮತ್ತು ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ಹಾಗೂ ಬಾಪೂಜಿ ನಗರ, ಭದ್ರಾವತಿಯಲ್ಲಿ ಕೇಂದ್ರವನ್ನು ನಡೆಸಲಾಗುತ್ತಿದೆ. ತಾಲ್ಲೂಕುಗಳಲ್ಲಿ ಸಹ ಶಿಶುಪಾಲನಾ ಕೇಂದ್ರದ ಅವಶ್ಯಕತೆ ಇದ್ದು ತೆರೆಯಲು ಪ್ರಸ್ತಾವನೆ ಸಲ್ಲಿಸುವಂತೆ ಸಿಡಿಪಿಓ ಗಳಿಗೆ ತಿಳಿಸಿದ ಅವರು ಶಿಶುಪಾಲನಾ ಕೇಂದ್ರಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಉತ್ತಮ ಪೌಷ್ಟಿಕಾಂಶ ಇರುವ ಆಹಾರವನ್ನು ಮಕ್ಕಳಿಗೆ ನೀಡಬೇಕೆಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಒಟ್ಟು 5000 ಸ್ತ್ರೀಶಕ್ತಿ ಗುಂಪುಗಳಿದ್ದು ಮಹಿಳೆಯರಿಗೆ ಸುತ್ತುನಿಧಿ, ಸಾಲಸೌಲಭ್ಯ, ತರಬೇತಿ ಇತರೆ ಸೌಲಭ್ಯಗಳನ್ನು ಕಾಲ ಕಾಲಕ್ಕೆ ನೀಡಲು ಅಧಿಕಾರಿಗಳು ಸಹಕರಿಸಬೇಕು ಎಂದರು.

ಮಕ್ಕಳಲ್ಲಿನ ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಜಿಲ್ಲಾ ಮಟ್ಟದಲ್ಲಿ ಭಾಲಭವನ ವತಿಯಿಂದ ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ತಾಲ್ಲೂಕುಗಳಲ್ಲಿ ಸಹ ಬಾಲಭವನದ ಅವಶ್ಯಕತೆ ಇದ್ದು ಪ್ರಸ್ತಾವನೆ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

ತಾಲ್ಲೂಕುಗಳಲ್ಲಿರುವ ಸ್ತ್ರೀಶಕ್ತಿ ಭವನಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಬಾಡಿಗೆ ನೀಡಿ ಅವುಗಳಿಂದ ಆದಾಯ ಉತ್ಪಾದನೆ ಮಾಡಬೇಕು. ಸಮರ್ಪಕವಾಗಿ ನಿರ್ವಹಣೆಯಾಗದ ಸ್ತ್ರೀಶಕ್ತಿ ಭವನಗಳನ್ನು ಆಯಾ ತಾಲ್ಲೂಕಿನ ಸಿಡಿಪಿಓ ಗಳು ತಮ್ಮ ಅಧೀನಕ್ಕೆ ತೆಗೆದುಕೊಂಡು ನಿರ್ವಹಿಸುವಂತೆ ಸೂಚನೆ ನೀಡಿದರು.

2023-24 ನೇ ಸಾಲಿನ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಸ್ವೀಕೃತವಾಗಿದ್ದ ಪ್ರಸ್ತಾವನೆಗಳನ್ನು ಪರಿಶೀಲಿಸಿ ಅನುಮೋದನೆ ನೀಡಿದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಡಾ.ಸಂತೋಷ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ಚಂದ್ರಪ್ಪ ಎನ್, ಆರ್‍ಸಿಹೆಚ್‍ಓ ಡಾ.ನಾಗರಾಜ ನಾಯ್ಕ್, ತಾಲ್ಲೂಕುಗಳ ಸಿಡಿಪಿಓ ಗಳು, ಸಾಂತ್ವನ, ಶಿಶುಪಾಲನಾ ಕೇಂದ್ರ ಸೇರಿದಂತೆ ಇತರೆ ಇತರೆ ಅಧಿಕಾರಿ, ಸಿಬ್ಬಂದಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...