Sunday, December 7, 2025
Sunday, December 7, 2025

Karnataka Dalit Sangarsha Samiti ಕರ್ನಾಟಕ ದಲಿತ ಸಂಘರ್ಷ ಸಮಿತಿಗೆ 50ರ ಸಂಭ್ರಮ

Date:

Karnataka Dalit Sangarsha Samiti ಬಿ. ಕೃಷ್ಣಪ್ಪ ನವರು ಅವಕಾಶ ವಾದಿಯಾಗಿರಲಿಲ್ಲ. ಅವರು ಆದರ್ಶವಾದಿಯಾಗಿದ್ದರು ಎಂದು ಕಾಂಗ್ರೆಸ್ ಪಕ್ಷದ ವಕ್ತಾರರಾದ ಶ್ರೀ ಆಯನೂರು ಮಂಜುನಾಥ್ ರವರು ಹೇಳಿದರು.

ಪ್ರೊ. ಬಿ ಕೃಷ್ಣಪ್ಪ ನವರು ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ವತಿಯಿಂದ ಪತ್ರಿಕಾ ಭವನದಲ್ಲಿ ನಡೆದ” ಕರ್ನಾಟಕದ ದಲಿತ ಚಳುವಳಿಗೆ 50 ರ ಸಂಭ್ರಮ “ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಬಹುಷಃ ಜಗತ್ತಿನ ಯಾವುದೇ ಮೂಲೆಯಲ್ಲಿ ಯಾವುದೇ ಚಳುವಳಿಯು ಇಷ್ಟು ಸುದೀರ್ಘ ಅವಧಿಗೆ ನಡೆದ ಉದಾಹರಣೆಯಿಲ್ಲ. ಅಂತಹದೊಂದು ಬೃಹತ್ ರಾಜಕೀಯ ವಿದ್ಯಾಮಾನವನ್ನು ಮುನ್ನಡೆಸಿದ ಮಹಾನಾಯಕ ಪ್ರೊ ಬಿ ಕೃಷ್ಣಪ್ಪ ನವರು ಕರ್ನಾಟಕದ ಇತಿಹಾಸದಲ್ಲಿ ಎಂದಿಗೂ ಅಜರಾಮರವಾಗಿ ಉಳಿಯುತ್ತಾರೆ. ಇದು ಎಲ್ಲರ ಪಾಲಿಗೆ ಸ್ವಾಭಿಮಾನದ ಸಂಗತಿ ಎಂದು ಆಯನೂರು ಮಂಜುನಾಥ ಹೇಳಿದರು.

Karnataka Dalit Sangarsha Samiti ವೇದಿಕೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಎಂ ಶ್ರೀಕಾಂತ್, ನ್ಯಾಯವಾದಿಗಳಾದ ಕೆಪಿ ಶ್ರೀಪಾಲ್, ರಿಪ್ಪನ್ ಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಬಿ ಎಲ್ ರಾಜು, ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಕುಂಸಿ ಉಮೇಶ್, ಸಹದ್ರಿ ಕಲಾ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಮೇಟಿ ಮಲ್ಲಿಕಾರ್ಜುನ್, ಡಿಎಸ್‌ಎಸ್ ನ ರಾಜ್ಯ ಖಜಾಂಚಿ ಬಿಎ ಕಾಟ್ಕೆ, ಕರ್ನಾಟಕದಲ್ಲಿ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕರಾದ ಎಂ ಏಳು ಕೋಟಿ, ಭದ್ರಾವತಿಯ ಶ್ರೀ ಕೃಷ್ಣ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಶಿವಬಸಪ್ಪ, ಕರ್ನಾಟಕ ದಲಿತ ನೌಕರರ ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್ ಮಂಜುನಾಥ್,ಕರ್ನಾಟಕ ದಲಿತ ಮಹಿಳಾ ಒಕ್ಕೂಟದ ಜಿಲ್ಲಾ ಸಂಚಾಲಕಿಯಾದ ಗಂಗಮಾಳಮ್ಮ ಸೊರಬ ಮೊದಲಾದವರಿದ್ದರು. ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ಎಂ ಗುರುಮೂರ್ತಿ ಯವರು ವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...