Saturday, November 23, 2024
Saturday, November 23, 2024

Shimoga District Chamber of Commerce & Industry ಉತ್ತಮ ಮಾರುಕಟ್ಟೆ ಕೌಶಲ್ಯ ಅತ್ಯಂತ ಮುಖ್ಯ

Date:

Shimoga District Chamber of Commerce & Industry ಗ್ರಾಹಕರಿಗೆ ಎಲ್ಲ ಆಯಾಮಗಳಿಂದಲೂ ಇಷ್ಟವಾಗಬಲ್ಲ ಅಂಶಗಳನ್ನು ಒಳಗೊಂಡು ಉತ್ಪನ್ನಗಳನ್ನು ಸಿದ್ಧಪಡಿಸುವ ಮುಖಾಂತರ ಉದ್ಯಮ ನಡೆಸಿದಾಗ ಯಶಸ್ಸು ಗಳಿಸಲು ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ಹೇಳಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯ ಹಾಗೂ ಕೈಗಾರಿಕಾ ಸಂಘದ ಕೌಶಲ್ಯ ಅಕಾಡೆಮಿಯ ಸಹಯೋಗದಲ್ಲಿ ಆಯೋಜಿಸಿದ್ದ ಐದು ದಿನಗಳ “ಮಾರಾಟ ಮತ್ತು ಡಿಜಿಟಲ್ ಮಾರುಕಟ್ಟೆ ವ್ಯವಸ್ಥೆ” ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಾರುಕಟ್ಟೆ ವ್ಯವಸ್ಥೆಯ ಕುರಿತು ಮೊದಲು ಅರಿತುಕೊಳ್ಳುವ ಹಾಗೂ ಸಂಶೋಧನೆ ನಡೆಸುವ ಪ್ರಯತ್ನ ಮಾಡಬೇಕು. ಮಾರುಕಟ್ಟೆಯಲ್ಲಿ ಇರುವ ಅವಕಾಶಗಳ ಬಗ್ಗೆ ತಿಳಿದುಕೊಂಡು ಸದುಪಯೋಗಕೊಳ್ಳಲು ಆಲೋಚನೆ ನಡೆಸಬೇಕು. ಗ್ರಾಹಕರಿಗೆ ಉತ್ಪನ್ನಗಳನ್ನು ತಲುಪಿಸಲು ಅಗತ್ಯವಿರುವ ಎಲ್ಲ ಮಾರುಕಟ್ಟೆ ವಿಧಾನಗಳನ್ನು ಬಳಸಬೇಕು ಎಂದು ಸಲಹೆ ನೀಡಿದರು.

ಶೇ. 30ರಷ್ಟು ಆರ್ಥಿಕ ಶಕ್ತಿಯನ್ನು ದೇಶಕ್ಕೆ ಕೊಡುಗೆ ನೀಡುತ್ತಿರುವ ಕ್ಷೇತ್ರ ಎಂಎಸ್‌ಎಂಇ. ಆರ್ಥಿಕ ಶಕ್ತಿ ಬಲಪಡಿಸುವ ಜತೆಯಲ್ಲಿ ಲಕ್ಷಾಂತರ ಕುಟುಂಬಗಳಿಗೆ ಉದ್ಯೋಗವನ್ನು ನೀಡುವ ಮುಖಾಂತರ ಬದುಕು ಕಟ್ಟಿಕೊಟ್ಟಿದೆ. ಎಂಎಸ್‌ಎಂಇ ಕ್ಷೇತ್ರವು ಭವಿಷ್ಯದಲ್ಲಿ ಮಹತ್ತರ ಪಾತ್ರ ವಹಿಸಲಿದೆ ಎಂದು ತಿಳಿಸಿದರು.

ಎಂಎಸ್‌ಎಂಇ ಉಪನಿರ್ದೇಶಕ ಶಶಿಕುಮಾರ್ ಮಾತನಾಡಿ, ಉದ್ಯಮಿಗಳು ಬಂಡವಾಳ ಹೂಡಿ ಉತ್ಪನ್ನಗಳ ಸಿದ್ಧಪಡಿಸುವ ಜತೆಯಲ್ಲಿ ಮಾರುಕಟ್ಟೆಯಲ್ಲಿ ಉತ್ಪನ್ನಗಳಿಗೆ ಬೇಡಿಕೆ ಸೃಷ್ಠಿಸಿಕೊಳ್ಳುವ ಮಾರುಕಟ್ಟೆ ಕೌಶಲ್ಯ ಹೊಂದುವುದು ತುಂಬಾ ಮುಖ್ಯ ಆಗುತ್ತದೆ. ನಿಮ್ಮ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ವಿಶೇಷ ಬೇಡಿಕೆ ಸೃಷ್ಠಿಸಿಕೊಳ್ಳಬೇಕು ಎಂದು ಅನಿಸಿಕೆ ವ್ಯಕ್ತಪಡಿಸಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಮಾತನಾಡಿ, ತಂತ್ರಜ್ಞಾನ ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು, ಮಾರುಕಟ್ಟೆಗೆ ಅವಶ್ಯವಿರುವ ಕೌಶಲ್ಯಗಳನ್ನು ಯುವ ಜನರಲ್ಲಿ ಬೆಳೆಸುವ ದೃಷ್ಠಿಯಿಂದ ವಾಣಿಜ್ಯ ಮತ್ತು ಕೈಗಾರಿಕಾ ಸಂಘವು ಕೌಶಲ್ಯ ಅಕಾಡೆಮಿ ಸ್ಥಾಪಿಸಿದ್ದು, ಉದ್ಯಮ ಕ್ಷೇತ್ರಕ್ಕೆ ಅಗತ್ಯವಿರುವ ಕೌಶಲ್ಯಗಳನ್ನು ಶಿಕ್ಷಣ ಪಡೆದಿರುವ ವಿದ್ಯಾರ್ಥಿಗಳಿಗೆ ಕಲಿಸುವ ಮೂಲಕ ಯಶಸ್ವಿ ಉದ್ಯಮಿಗಳನ್ನು ರೂಪಿಸುವುದು ಪ್ರಮುಖ ಆಶಯ ಎಂದು ತಿಳಿಸಿದರು.

ಪ್ರಸ್ತುತ ಉದ್ಯಮ ನಡೆಸುತ್ತಿರುವ ಹೊಸ ಉದ್ಯಮಿಗಳಿಗೆ ಐದು ದಿನಗಳ ವಿಶೇಷ ತರಬೇತಿ ನೀಡುವುದು ಕಾರ್ಯಾಗಾರದ ಪ್ರಮುಖ ಆಶಯ ಎಂದರು.

Shimoga District Chamber of Commerce & Industry ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ವಸಂತ್ ಹೋಬಳಿದಾರ್ ಪ್ರಾಸ್ತವಿಕವಾಗಿ ಮಾತನಾಡಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಬಿ.ಗೋಪಿನಾಥ್, ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್, ನಿರ್ದೇಶಕ ರಮೇಶ್ ಹೆಗ್ಡೆ, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕೌಶಲ್ಯ ಅಕಾಡೆಮಿಯ ಸಿಇಒ ಸವಿತಾ ಮಾಧವ್, ತರಬೇತುದಾರ ಪ್ರಜ್ವಲ್‌ ಜೈನ್‌ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Maharashtra Election ‘ಮಹಾ’ ಚುನಾವಣೆ.ಮತ್ತೆ ತಲೆಯೆತ್ತಿದ ” ಮಹಾಯುತಿ” ಮಕಾಡೆ ಬಿದ್ದಅಘಾಡಿ

Maharashtra Election ದೇಶದ ಗಮನ ಸೆಳೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ...

Police Department ರಾಜ್ಯದ ಜೈಲುಗಳ ವಾರ್ಡನ್ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕವಾಗಲು ಆಸಕ್ತ ಮಾಜಿ ಸೈನಿಕರು ಅರ್ಜಿ ಸಲ್ಲಿಸಲು ಅವಕಾಶ

Police Department ಕರ್ನಾಟಕ ರಾಜ್ಯಾದ್ಯಾಂತ ಇರುವ ಜೈಲುಗಳಲ್ಲಿ ವಾರ್ಡನ್‌ ಹುದ್ದೆಗೆ ಗುತ್ತಿಗೆ...

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣಾ ಜನಸಂಖ್ಯೆ ಅನುಪಾತದ ಬಗ್ಗೆ ಡಾ.ತ್ರಿಲೋಕ ಚಂದ್ರ ಅವರಿಂದ ಪರಿಶೀಲನೆ

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣಾ ಜನಸಂಖ್ಯೆ ಅನುಪಾತ (ಇಪಿ ರೇಷಿಯೋ)...