Monday, December 8, 2025
Monday, December 8, 2025

Traffic Rules & Regulations ವಾಹನ ಚಾಲಕರು & ಪಾದಚಾರಿಗಳಲ್ಲಿ ಸಂಚಾರಿ ನಿಯಮಗಳ ಅರಿವಿರಬೇಕು

Date:

Traffic Rules & Regulations ಚಾಲಕರು ರಸ್ತೆ ನಿಯಮಗಳನ್ನು ಹಾಗೂ ಸಂಚಾರ ಚಿಹ್ನೆಗಳನ್ನು ಚೆನ್ನಾಗಿ ಅರಿತುಕೊಳ್ಳಬೇಕು. ಸ್ವಲ್ಪವೂ ಬೇಜವಾಬ್ದಾರಿ ಅಥವಾ ನಿರ್ಲಕ್ಷ್ಯ ತೋರದೇ ನಿಯಮ ಪಾಲನೆ ಮಾಡಬೇಕು ಎಂದು ಆರ್.ಟಿ.ಓ. ಪ್ರಥಮ ದರ್ಜೆ ಸಹಾಯಕ ರವಿಕಿರಣ್ ಹೇಳಿದರು.

ಚಿಕ್ಕಮಗಳೂರು, ತಾಲ್ಲೂಕಿನ ಮಲ್ಲೇನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾದೇಶಿಕ ಸಾರಿಗೆ ಸಹಯೋಗದಲ್ಲಿ ಏರ್ಪಡಿಸಿದ್ದ 35ನೇ ರಾಷ್ಟ್ರೀಯರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ಉದ್ಗಾಟಿಸಿ ಅವರು ಮಾತನಾಡಿದರು.

ಅನೇಕ ಅಪಘಾತಗಳು ಮಾನವ ತಪ್ಪುಗಳಿಂದಾಗಿ ಅಮಾಯಕರು ಜೀವ ಕಳೆದುಕೊಂಡು ಅವಲಂಬಿಸಿರು ವವರನ್ನು ಬೀದಿಪಾಲು ಮಾಡುತ್ತಾರೆ. ಚಾಲಕರು ವಾಹನದಲ್ಲಿ ಕುಳಿತ ಕೂಡಲೇ ತಮ್ಮ ಕುಟುಂಬ ಮತ್ತು ಅವಲಂ ಬಿತರನ್ನು ನೆನಪಿಸಿಕೊಳ್ಳಬೇಕು. ಎಲ್ಕಕ್ಕಿಂತ ಜೀವನ ಮುಖ್ಯ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ವಾಹನ ಚಾಲಕರು ಮತ್ತು ಪಾದಚಾರಿಗಳು ರಸ್ತೆ ಸುರಕ್ಷತೆ ಬಗ್ಗೆ ಉತ್ತಮ ಶಿಸ್ತು ಮತ್ತು ಜ್ಞಾನ ಬೆಳೆಸಿ ಕೊಳ್ಳಬೇಕು. ಶಿಸ್ತಿನ ಸಂಚಾರ, ಸುಗಮ ಸಂಚಾರಕ್ಕೆ ಹಾದಿ ಎಂಬುದನ್ನು ತಿಳಿದಿರಬೇಕು. ಇಲ್ಲವಾದಲ್ಲಿ ಅಪಾಯ ಕಾರಿ. ಈ ನಿಟ್ಟಿನಲ್ಲಿ ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ರಸ್ತೆ ಸುರಕ್ಷಾ ಸಪ್ತಾಹ ಎಂಬ ವಿನೂತನ ಕಾರ್ಯಕ್ರಮ ನಡೆಸಲಾಗಿದೆ ಎಂದರು.

ಕಾಲೇಜಿನ ಪ್ರಾಂಶುಪಾಲ ಶೇಷಾದ್ರಿ ಮಾತನಾಡಿ ಜನಸಂಖ್ಯೆ ಮತ್ತು ಪ್ರಯಾಣದ ಅಗತ್ಯತೆ ಹೆಚ್ಚಾದಂತೆ ಪ್ರತಿ ದಿನವೂ ರಸ್ತೆಯಲ್ಲಿ ವಾಹನಗಳ ಸಂಖ್ಯೆ ಹೆಚ್ಚುತ್ತಿದೆ. ಪ್ರತಿಯೊಬ್ಬ ವ್ಯಕ್ತಿಯು ರಸ್ತೆ ಸುರಕ್ಷತೆಯ ನಿಯಮಗಳು ಮತ್ತು ನಿಬಂಧನೆಗಳನ್ನು ಅರ್ಥಮಾಡಿಕೊಳ್ಳುವಲ್ಲಿ ಸಾಕಷ್ಟು ಅರಿವನ್ನು ಹೊಂದಿರುವುದು ಕಡ್ಡಾಯವಾಗಿದೆ ಎಂದು ಹೇಳಿ ದರು.

ಅಜಾಗರೂಕತೆ ಚಾಲನೆಯು ಅಪಾಯದೊಂದಿಗೆ ಜೀವಹಾನಿಗೂ ಕಾರಣವಾಗುತ್ತದೆ. ಯಾವುದೇ ರೀತಿಯ ವಾಹನ ಚಾಲನೆ ಮಾಡುವಾಗ ಸುರಕ್ಷಿತ ಚಾಲನೆ, ರಸ್ತೆ ಸಂಚಾರ ನಿಯಮಗಳನ್ನು ತಪ್ಪದೇ ಪಾಲಿಸಬೇಕು. ಈ ಕುರಿತು ಪ್ರತಿಯೊಬ್ಬರು ಜಾಗೃತರಾಗಿ, ಇತರರಿಗೂ ಜಾಗೃತಿ ಮೂಡಿಸಬೇಕು ಎಂದು ಸಲಹೆ ಮಾಡಿದರು.

ಇದೇ ವೇಳೆ ಕಾರ್ಯಕ್ರಮದ ಅಂಗವಾಗಿ ಮಕ್ಕಳಿಗೆ ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಕ್ರೀಡಾ ಸಾಮಾಗ್ರಿ ಗಳು ಹಾಗೂ ಪುಸ್ತಕಗಳನ್ನು ವಿತರಿಸಲಾಯಿತು.

Traffic Rules & Regulations ಸಂದರ್ಭದಲ್ಲಿ ಕಾಲೇಜಿನ ಮುಖ್ಯ ಶಿಕ್ಷಕ ಪ್ರಭು, ಆರ್.ಟಿ.ಓ. ಕಚೇರಿ ಸಿಬ್ಬಂದಿಗಳಾದ ಪಿ.ಸಿ.ಲತಾ, ಕೆ ಲೋಹಿತ್, ಸಂಗೀತಾ, ತೇಜಸ್, ತಾಂತ್ರಿಕ ಸಹಾಯಕರಾದ ಸಂತೋಷ್ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...