Sunday, August 2, 2026
Sunday, August 2, 2026

Mulugade Odalala Book ಸಂಸ್ಕೃತಿ, ಜನಪದ,ದೈವಗಳ ಸಂಬಂಧಗಳ ಮುಳುಗಡೆ ಒಂದು ರೀತಿಯ ಶಾಪವಾಗಿ ಕಾಡಿದೆ- ಡಾ.ಗಜಾನನ ಶರ್ಮ

Date:

Mulugade Odalala Book ಹೊಸನಗರ ತಾಲೂಕು ವಾರಾಹಿ ದಡ ಮೇಲುಸುಂಕ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಎಂಎಂ ಪ್ರಭಾಕರ ಕಾರಂತ ಅವರ ಮುಳುಗಡೆ ಒಡಲಾಳ ಕೃತಿ ಲೋಕಾರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಾಹಿತಿ ಡಾ. ಗಜಾನನ ಶರ್ಮ ಅವರು ಮಾತನಾಡಿದರು. ಮುಳುಗಡೆ ಎನ್ನುವುದು ಕೇವಲ ತೋಟ, ಮನೆ ಮುಳುಗಿಸಿಲ್ಲ. ಇದು ಇಲ್ಲಿರುವ ಜನರ ಸಂಸ್ಕೃತಿ, ಜನಪದ, ನಂಬಿದ ದೇವರು ದೈವ ಹಾಗೂ ಸಂಬಂಧಗಳನ್ನು ಮುಳುಗಿಸಿ ಅನಾಥ ಭಾವ ಮೂಡಿಸಿದೆ. ಇಲ್ಲಿನ ಇದೊಂದು ಶಾಪದಂತೆ ಕಾಡಿದೆ ಎಂದು ತಿಳಿಸಿದರು.

70ರ ದಶಕದಲ್ಲಿ ಜಲವಿದ್ಯುತ್ ಯೋಜನೆ ಅನಿವಾರ್ಯವಾಗಿತ್ತು. ಆದರೆ ಯೋಜನೆಯ ಸಂತ್ರಸ್ತರನ್ನ ಸರ್ಕಾರಗಳು ಹಾಗೂ ಅಧಿಕಾರಿ ವರ್ಗ ನೋಡಿಕೊಂಡ ರೀತಿ ಸರಿ ಇಲ್ಲ. ಭೌತಿಕವಾಗಿ ಕನಿಷ್ಠ ಪರಿಹಾರ ನೀಡಿಲ್ಲ. ಜನ ಜೀವನದ ಬಗ್ಗೆ ಕಾಳಜಿ ವಹಿಸಿಲ್ಲ ಎಂದು ಹೇಳಿದರು.

Mulugade Odalala Bookಸಂದರ್ಭದಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಲೀಲಾವರ ಸುರೇಂದ್ರ ಅಡಿಗ, ಪರಿಸರ ಸಾಹಿತಿ ಶಿವಾನಂದ ಕಳವೆ,ಗಿರಿಜಾ ಶಂಕರ, ತಿರುಪತಿ ನಾಯಕ್, ಡಾ.ಮಂಜುಳಾ ಹುಲ್ಲಹಳ್ಳಿ ಇನ್ನೂ ಮುಂತಾದ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...