Breaking News ಹೊಸನಗರದ ಶಾಲಾ ಶತಮಾನೋತ್ಸವ ಆಚರಣೆ ಕುರಿತು ನಡೆದ ಪೂರ್ವಭಾವಿ ಸಭೆಯ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಸದಸ್ಯನೋರ್ವನ ಮೇಲೆ ಹಲ್ಲೆ ನಡೆಸಿದ ಘಟನೆ ಇಲ್ಲಿನ ಶಾಸಕರ ಮಾದರಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನಡೆದಿದೆ.
ಶಾಲೆಯು ನೂರು ವರ್ಷ ಪೂರೈಸಿದ್ದು, ಶತಮಾನೋತ್ಸವ ಕಾರ್ಯಕ್ರಮ ಆಚರಿಸಲು ಶಾಲಾಡಳಿತ ತೀರ್ಮಾನಿಸಿದ ಹಿನ್ನೆಲೆಯಲ್ಲಿ ಸಾರ್ವಜನಿಕರನ್ನು ಒಳಗೊಂಡ ಸಭೆ ಕರೆಯಲಾಗಿತ್ತು.
ಸಭೆಯಲ್ಲಿ ಸದಸ್ಯ ನೇರಲೆ ರಮೇಶ್ ಎಂಬುವವರು ಶಾಲೆ ನೂರು ವರ್ಷ ಪೂರ್ಣಗೊಳಿಸಿರುವುದರ ಕುರಿತು ಅನುಮಾನಗಳಿವೆ. ನೂರು ವರ್ಷ ಪೂರೈಸಿದ ಕುರಿತು. ದಾಖಲೆಗಳು ಶಾಲೆಯಲ್ಲಿ ಇವೆಯೇ ಎಂದು ಪ್ರಶ್ನಿಸಿದ್ದರು. ಸಭೆ ಮುಗಿದ ಬಳಿಕ ಶಾಲಾವರಣದಲ್ಲಿ ಮತ್ತೆ ಪ್ರಸ್ತಾಪವಾಗಿ, ಶಾಲಾಸಮಿತಿ ಅಧ್ಯಕ್ಷ ಅಶ್ವಿನಿಕುಮಾರ್ ಹಾಗೂ ಸದಸ್ಯ ರಮೇಶ್ ನಡುವೆ ಮಾತಿನ ಚಕಮಕಿ ನಡೆಯಿತು. ಅಶ್ವಿನಿಕುಮಾರ್, ರಮೇಶ್ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.
Breaking News ರಮೇಶ್ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ತಮ್ಮ ಮೇಲೆ ನಡೆದ ಹಲ್ಲೆ ನಡೆಸಿದ ಆರೋಪಿ ಶಾಲಾ ಸಮಿತಿ ಅಧ್ಯಕ್ಷ ಅಶ್ವಿನಿಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.