Constitution Awareness Jatha ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಪ್ರಯುಕ್ತ ಇಂದು ಸೊರಬ ಪಟ್ಟಣದ ಪದವಿಪೂರ್ವ ಕಾಲೇಜಿನಿಂದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದವರೆಗೆ ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಿಬ್ಬಂದಿಗಳ ಬೈಕ್ ರ್ಯಾಲಿ ನಡೆಸಲಾಯಿತು.
ಸಾರ್ವಜನಿಕರಲ್ಲಿ ಸಂವಿಧಾನದ ಧ್ಯೇಯೋದ್ದೇಶಗಳು, ಸಾಮಾಜಿಕ, ಆರ್ಥಿಕ, ಮತ್ತು ರಾಜಕೀಯ ನ್ಯಾಯ ಮತ್ತು ಡಾ. ಬಿ.ಆರ್ ಅಂಬೇಡ್ಕರ್‍ರವರ ಸಂವಿಧಾನದ ಪರಿಕಲ್ಪನೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.
Constitution Awareness Jatha ತಹಶೀಲ್ದಾರ್‍ರಾದ ಹುಸೇನ್ ಎಸ್ ಸರಕಾವಸ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪ್ರದೀಪ್ ಕುಮಾರ್ ಎನ್ ಆರ್, ಪುರಸಭೆ, ಮುಖ್ಯಾಧಿಕಾರಿ ಬಾಲಚಂದ್ರ ಟಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಇಕ್ಬಾಲ್ ಜಾತಿಗೇರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ಕಲ್ಯಾಣಾಧಿಕಾರಿ ರೇವಣಪ್ಪ ಹಾಗೂ ತಾಲ್ಲೂಕಿನ ಎಲ್ಲಾ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು, ನೋಡಲ್ ಅಧಿಕಾರಿಗಳು, ಪುರಸಭೆಯ ಸರ್ವ ಸದಸ್ಯರುಗಳು, ಸೊರಬ ಪಟ್ಟಣದ ಸಾರ್ವಜನಿಕರು, ಶಿಕ್ಷಕರು, ಹಾಗೂ ತಾಲ್ಲೂಕಿನ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಜಾಥಾದಲ್ಲಿ ಉಪಸ್ಥಿತರಿದ್ದರು.