Shimoga District Chamber of Commerce & Industry ಪ್ರತಿಯೊಬ್ಬ ವ್ಯಕ್ತಿಯು ಸದೃಢ ಆರೋಗ್ಯ ಕಾಪಾಡಿಕೊಳ್ಳಲು ಉತ್ತಮ ಆಹಾರ ಶೈಲಿ ಹಾಗೂ ಜೀವನಶೈಲಿ ರೂಢಿಸಿಕೊಳ್ಳಬೇಕು ಎಂದು ಉಮ ಕನ್ಸ್ಯೂಮರ್ ಪ್ರಾಡಕ್ಟ್ಸ್ ಬಿಸಿನೆಸ್ ಹೆಡ್ ಅರವಿಂದ್ ತ್ರಿಪಾಠಿ ಅಭಿಪ್ರಾಯಪಟ್ಟರು.
ಶಿವಮೊಗ್ಗ ನಗರದಲ್ಲಿ ಶಕ್ತಿ ಇನ್ ಕಾರ್ಪೋರೇಷನ್ ವತಿಯಿಂದ ವರ್ತಕರಿಗೆ ಆಯೋಜಿಸಿದ್ದ ಮಾಹಿತಿ ಕಾರ್ಯಾಗಾರದಲ್ಲಿ ಅಯೋಡಿನ್ ಉಪ್ಪು ಕುರಿತ ಮಾಹಿತಿ ನೀಡಿ, ಮನುಷ್ಯನ ದೇಹಕ್ಕೆ ಅವಶ್ಯವಿರುವ ಉಪ್ಪಿನ ಪ್ರಮಾಣ ಹಾಗೂ ಪ್ರಯೋಜನಗಳ ಬಗ್ಗೆ ತಿಳವಳಿಕೆ ಹೊಂದಬೇಕು. ಆಹಾರದಲ್ಲಿ ಸರಿಯಾದ ಪ್ರಮಾಣದಲ್ಲಿ ಉಪ್ಪು ಬಳಸಬೇಕು ಎಂದು ಮಾಹಿತಿ ನೀಡಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಬಿ.ಗೋಪಿನಾಥ್ ಮಾತನಾಡಿ, ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಉಪ್ಪುಗಳ ಲಭ್ಯತೆ ಇದೆ. ಆದರೆ ಸಾರ್ವಜನಿಕರು ಗುಣಮಟ್ಟ ಇರುವ ಉಪ್ಪು ಬಳಸಬೇಕು. ಇದರಿಂದ ಕುಟುಂಬದ ಎಲ್ಲ ಸದಸ್ಯರ ಆರೋಗ್ಯ ರಕ್ಷಣೆ ಮಾಡಬಹುದಾಗಿದೆ ಎಂದು ಹೇಳಿದರು.
ಶಕ್ತಿ ಇನ್ ಕಾರ್ಪೋರೇಷನ್ ಮ್ಯಾನೇಜಿಂಗ್ ಪಾರ್ಟನರ್ ಶಿಲ್ಪಾ ಗೋಪಿನಾಥ್ ಮಾತನಾಡಿ, ದಿನನಿತ್ಯ ಆಹಾರದಲ್ಲಿ ಅಯೋಡಿನ್‌ಯುಕ್ತ ಉಪ್ಪು ಬಳಸುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿ ಆಗುತ್ತದೆ. ಅಯೋಡಿನ್ ಕೊರತೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಬಹುದಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಶಕ್ತಿ ಇನ್ ಕಾರ್ಪೋರೇಷನ್ ವತಿಯಿಂದ ಫೆಬ್ರವರಿ ತಿಂಗಳಲ್ಲಿ ಜನ್ಮದಿನ ಆಚರಿಸಿಕೊಳ್ಳುತ್ತಿದ್ದ ವರ್ತಕರು ಹಾಗೂ ಕುಟುಂಬ ಸದಸ್ಯರಿಗೆ ಶುಭಾಶಯ ಕೋರಲಾಯಿತು. ವಿವಿಧ ಬಹುಮಾನ ಮತ್ತು ಉಡುಗೊರೆಗಳನ್ನು ನೀಡಲಾಯಿತು.
Shimoga District Chamber of Commerce & Industry ಸಮಾರಂಭದಲ್ಲಿ ಭಾಗವಹಿಸಿದ್ದ ಹಿರಿಯ ವರ್ತಕರಿಗೆ ಶಕ್ತಿ ಇನ್ ಕಾರ್ಪೋರೇಷನ್ ವತಿಯಿಂದ ಸನ್ಮಾನಿಸಲಾಯಿತು. ಉಮ ಕನ್ಸ್ಯೂಮರ್ ಪ್ರಾಡಕ್ಟ್ಸ್ ಕರ್ನಾಟಕ ಪ್ರದೇಶ ವ್ಯಾಪ್ತಿಯ ಸೇಲ್ಸ್ ಮ್ಯಾನೇಜರ್ ಗೌಸ್‌ಪೀರ್ ಮತ್ತು ವರ್ತಕರು ಕಾರ್ಯಕ್ರಮದಲ್ಲಿ ಹಾಜರಿದ್ದರು.