Shivamogga Chamber of Commerce ಪ್ರತಿಯೊಂದು ಉದ್ಯಮ, ಸಂಘ ಸಂಸ್ಥೆ, ಕಚೇರಿ ಹಾಗೂ ವೃತ್ತಿ ಕ್ಷೇತ್ರಗಳಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸಲು ಕೌಶಲ್ಯ ತುಂಬಾ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಡ್ವಾನ್ಸ್ ಸ್ಕಿಲ್ ಅಕಾಡೆಮಿ ಸಿಇಒ ಸವಿತಾ ಮಾಧವ್ ಅನಿಸಿಕೆ ವ್ಯಕ್ತಪಡಿಸಿದರು.
ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆಯ ವತಿಯಿಂದ ಶಿವಮೊಗ್ಗ ನಗರದ ಸಾಯಿ ಇಂಟರನ್ಯಾಷನಲ್ ಹೊಟೇಲ್ ಸಭಾಂಗಣದಲ್ಲಿ ಆಯೋಜಿಸಿದ್ದ 2024ನೇ ಸಾಲಿನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸ್ವೀಕಾರ ಸಮಾರಂಭ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ, ಪ್ರತಿ ಕ್ಷೇತ್ರದಲ್ಲೂ ಯಶಸ್ಸು ಸಾಧಿಸಲು ಕೆಲಸಗಾರರು ಮುಖ್ಯ. ಪರಿಣಾಮಕಾರಿಯಾಗಿ ಕ್ಷೇತ್ರದಲ್ಲಿ ಯಶಸ್ಸು ಗಳಿಸಲು ಕೆಲಸಗಾರರಿಗೆ ಅಗತ್ಯವಿರುವ ಕೌಶಲ್ಯಗಳನ್ನು ಕಲಿಸಬೇಕು ಎಂದು ತಿಳಿಸಿದರು.
ಜೆಸಿಐ ನಿಕಟಪೂರ್ವ ವಲಯ ಅಧ್ಯಕ್ಷ ಅನುಷ್‌ಗೌಡ ಮಾತನಾಡಿ, ಜೆಸಿಐ ಸಂಸ್ಥೆಯು ಸಮಾಜಮುಖಿ ಕಾರ್ಯಗಳ ಜತೆಯಲ್ಲಿ ವ್ಯಕ್ತಿತ್ವ ವಿಕಸನ ಹಾಗೂ ವ್ಯವಹಾರ ಅಭಿವೃದ್ಧಿ ತರಬೇತಿ ಸೇರಿದಂತೆ ಪ್ರಮುಖ ಕಾರ್ಯಕ್ರಮಗಳನ್ನು ಸದಸ್ಯರಿಗೆ ಒದಗಿಸುತ್ತಿದೆ ಎಂದು ಹೇಳಿದರು.
Shivamogga Chamber of Commerce ವಲಯ ಉಪಾಧ್ಯಕ್ಷ ಸಂತೋಷ್ ಕೊಟ್ರಪ್ಪ ಸೋಗಿ ಮಾತನಾಡಿ, ಜೆಸಿಐ ಸಂಸ್ಥೆಗೆ ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಸಾರ್ವಜನಿಕರು ಸೇರ್ಪಡೆ ಆಗಬೇಕು. ಸೇವಾ ಚಟುವಟಿಕೆಗಳಿಗೆ ಕೈಜೋಡಿಸಬೇಕು ಎಂದು ಮಾಹಿತಿ ನೀಡಿದರು.
ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆಯ 2024ನೇ ಸಾಲಿನ ಅಧ್ಯಕ್ಷರಾಗಿ ಡಾ. ಲಲಿತಾ ಭರತ್ ಹಾಗೂ ಕಾರ್ಯದರ್ಶಿಯಾಗಿ ಗಣೇಶ್.ಜಿ. ತಮ್ಮ ತಂಡದೊಂದಿಗೆ ಅಧಿಕಾರ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ಆರ್ಥಿಕವಾಗಿ ಹಿಂದುಳಿದ ಅಂಗವಿಕಲರಿಗೆ ವೀಲ್‌ಚೇರ್ ವಿತರಿಸಲಾಯಿತು.
ಜೆಸಿಐ ಸೆನೆಟರ್ ಸತೀಶ್ ಚಂದ್ರ, 2023ನೇ ಸಾಲಿನ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷೆ ಸುಷ್ಮಾ ಹಿರೇಮಠ, ಸ್ವಪ್ನಾ ಬದ್ರೀನಾಥ್, ಸುಷ್ಮಾ ಅರವಿಂದ್, ದಿಯಾ ಬದ್ರಿನಾಥ್, ಗೌರಿ ಸರ್ಜಿ, ವಸಂತ ಹೋಬಳಿದಾರ್, ಮಂಜುನಾಥ್ ಕದಂ ಮತ್ತಿತರರು ಉಪಸ್ಥಿತರಿದ್ದರು.
Shivamogga Chamber of Commerce ಆಯಾ ಕ್ಷೇತ್ರಗಳಲ್ಲಿ ಯಶಸ್ಸುಗಳಿಸಲು ಕೆಲಸಗಾರರಿಗೆ ಅವಶ್ಯ ಕೌಶಲ್ಯ ಕಲಿಸಬೇಕು-ಸವಿತಾ ಮಾಧವ್
Date: