Wednesday, September 23, 2026
Wednesday, September 23, 2026

Physical health and mental health ಮಕ್ಕಳಿಗೆ ಉತ್ತಮ ಆಜಾರ ನೀಡಿ ಒಳ್ಳೆಯ ಜೀವನ ಶೈಲಿ ರೂಪಿಸಬೇಕು-ಡಾ.ಹರಿಪ್ರಕಾಶ್

Date:

Physical health and mental health ಮಕ್ಕಳಿಗೆ ಶಿಕ್ಷಣ ಅತ್ಯಂತ ಪ್ರಮುಖ. ಜೀವನದಲ್ಲಿ ಯಶಸ್ವಿ ಆಗಬೇಕಾದರೆ ವಿದ್ಯಾಭ್ಯಾಸದ ಜತೆಯಲ್ಲಿ ಜೀವನ ಮೌಲ್ಯ ಹಾಗೂ ಸಂಸ್ಕಾರ ಗುಣಗಳ ಮೌಲ್ಯವು ತುಂಬಾ ಅಗತ್ಯ ಎಂದು ಡಯಟ್ ಕಾಲೇಜಿನ ಉಪನ್ಯಾಸಕ ಡಾ. ಹರಿಪ್ರಕಾಶ್ ಅಭಿಪ್ರಾಯಪಟ್ಟರು.

ಶಿವಮೊಗ್ಗ ನಗರದ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಲಿಟಲ್ ಎಲ್ಲಿ ಶಾಲಾ ವಾರ್ಷಿಕೋತ್ಸವ ಸಮಾರಂಭದ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ, ಇಂದಿನ ಮಕ್ಕಳಿಗೆ ಉತ್ತಮ ಆಹಾರ ನೀಡಿ ಒಳ್ಳೆಯ ಜೀವನಶೈಲಿ ರೂಪಿಸಬೇಕು. ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಬಾಲ್ಯದಿಂದಲೇ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಪ್ಲಾಸ್ಟಿಕ್ ಮುಕ್ತ ಬಟ್ಟೆಚೀಲಗಳನ್ನು ಉದ್ಯಮಿ ಅಶ್ವತ್ಥ್ ನಾರಾಯಣ ಶೆಟ್ಟಿ ಬಿಡುಗಡೆ ಮಾಡಿ, ಪರಿಸರದ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು. ಪ್ರತಿಯೊಬ್ಬ ವ್ಯಕ್ತಿಯು ಪರಿಸರ ಹಾನಿ ಆಗದಂತೆ ಜೀವನಶೈಲಿ ರೂಢಿಸಿಕೊಳ್ಳಬೇಕು. ಪ್ಲಾಸ್ಟಿಕ್ ಬಳಕೆ ಮಾಡಬಾರದು ಎಂದರು.

Physical health and mental health ಇದೇ ಸಂದರ್ಭದಲ್ಲಿ ಪ್ರವರ್ತನ ಸಂಸ್ಥೆ ಸಂಸ್ಥಾಪಕಿ ಪ್ರತಿಭಾ ಅರುಣ್ ಮಾತನಾಡಿ, ಮಕ್ಕಳಿಗೆ ನಾವುಗಳು ರಾಮಾಯಣ, ಮಹಾಭಾರತ, ವೀರಯೋಧರ ಕಥೆಗಳನ್ನು ಹಾಗೂ ಹೋರಾಟದ ಚರಿತ್ರೆಗಳನ್ನು ಹೇಳುವುದರ ಮುಖಾಂತರ ಬೆಳೆಸಬೇಕು. ಸಾಧನೆಯ ಹಾದಿಯಲ್ಲಿ ಮುನ್ನಡೆಯುವಂತೆ ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು.

ಎಲ್ಲ ಮಕ್ಕಳಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಕೋಲರ್ನಿಂಗ್ ಎಡ್ಜ್ ಇಂಡಿಯಾದ ಅಮಿತ್ ತಿವಾರಿ ಶಾಲಾ ಶಿಕ್ಷಕರು, ಸಿಬ್ಬಂದಿ ವರ್ಗದವರನ್ನು ಸನ್ಮಾನಿಸಿ ಗೌರವಿಸಿದರು. ಲಿಟಲ್ ಎಲ್ಲಿ ಶಾಲೆಯ ಅಧ್ಯಕ್ಷ ಅನಿಲ್.ಪಿ. ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಲಿಟಲ್ ಎಲ್ಲಿ ಶಾಲೆ ಕಾರ್ಯದರ್ಶಿ ಬಿಂದು ಅನಿಲ್ ಉಪಸ್ಥಿತರಿದ್ದರು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...