Saturday, June 20, 2026
Saturday, June 20, 2026

Madhu Bangarappa ಸಚಿವ ಮಧು ಬಂಗಾರಪ್ಪ ‌ಅವರಿಂದ‌ ಫೆ.16 ರಂದು ಶ್ರೀಸವಿತಾ ಮಹರ್ಷಿ ಜಯಂತಿ ಉದ್ಘಾಟನೆ

Date:

Madhu Bangarappa ಶಿವಮೊಗ್ಗ,ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಸವಿತಾ ಸಮಾಜ, ಶಿವಮೊಗ್ಗ ಇವರ ಸಂಯಕ್ತಾಶ್ರಯದಲ್ಲಿ ಫೆ.16 ರ ಬೆಳಗ್ಗೆ 11 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಶ್ರೀ ಸವಿತಾ ಮಹರ್ಷಿ ಜಯಂತಿಯನ್ನು ಏರ್ಪಡಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧುಬಂಗಾರಪ್ಪ ಇವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಾಸಕರಾದ ಎಸ್.ಎನ್. ಚನ್ನಬಸಪ್ಪರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪ ಮತ್ತು ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಿ. ಸುಧಾಕರ್ ಇವರುಗಳು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದಲ್ಲಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲಾ ಸವಿತ ಸಮಾಜದ ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿ.ಪಂ ಸಿಇಓ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಮಹಾನಗರ ಪಾಲಿಕೆ Madhu Bangarappa ಆಯುಕ್ತರು ಮತ್ತು ಇನ್ನಿತರ ಗಣ್ಯರು, ಅಧಿಕಾರಿಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಭದ್ರಾವತಿಯ ನ್ಯೂಟೌನ್ ಸರ್.ಎಂ.ವಿ. ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಹಿಂದಿ ವಿಭಾಗದ ಸಹ ಪ್ರಾಧ್ಯಾಪಕಿ ಪ್ರೋ. ಉಷಾದೇವಿ. ಜಿ.ರವರಿಂದ ವಿಶೇಷ ಉಪನ್ಯಾಸ ಆಯೋಜಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಪಿಎಂ- ವಿಬಿಆರ್ ವೈ ಯೋಜನೆಯಿಂದ ಉದ್ಯೋಗ ಸೃಷ್ಠಿ- ಬಿ.ವೈ.ರಾಘವೇಂದ್ರ

B.Y. Raghavendra ಪ್ರಧಾನ ಮಂತ್ರಿ ವಿಕಸಿತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ...

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...